ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ತರೀಕೆರೆ

ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡಲು ಎಲ್ಲರೂ ಕೈಜೋಡಿಸಬೇಕೆಂದು ಎಂ.ಸಿ.ಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್.ಡಿಎಂಸಿ ಅಧ್ಯಕ್ಷ ಮಹೇಶ್ ಹೇಳಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ತರೀಕೆರೆ ಸಮೀಪದ ಎಂ.ಸಿ.ಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಮರಗಳನ್ನು ನೆಟ್ಟು ಬೆಳೆಸುವ ಮೂಲಕ ಪ್ರಕೃತಿಯನ್ನು ಉಳಿಸಬೇಕು. ಪರಿಸರ ಮಾಲಿನ್ಯ ತಡೆಗಟ್ಟಬೇಕು ಎಂದು ಹೇಳಿದರು.


ಶಿಕ್ಷಕ ಹರ್ಷ ಅಮಾತನಾಡಿ ಇಂದು ಹೆಚ್ಚುತ್ತಿರುವ ಮಾಲಿನ್ಯ, ಅರಣ್ಯ ನಾಶ ಮತ್ತು ಹವಾಮಾನ ಬದಲಾವಣೆಗಳು ನಮ್ಮ ಭವಿಷ್ಯಕ್ಕೆ ದೊಡ್ಡ ಸವಾಲಾಗಿವೆ. ಈ ಸಮಸ್ಯೆ ತಡೆಗಟ್ಟಲು ಹೆಚ್ಚು ಹೆಚ್ಚು ಮರ ಗಳನ್ನು ನೆಡಬೇಕು. ನೀರನ್ನು ಮಿತವಾಗಿ ಬಳಸಬೇಕು ಹಾಗೂ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು. ಒಬ್ಬ ವ್ಯಕ್ತಿ -ಒಂದು ಮರ ಎಂಬ ಸಂಕಲ್ಪದೊಂದಿಗೆ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಕೈಜೋಡಿಸಿ ದರೆ ಹಸಿರು ಮತ್ತು ಆರೋಗ್ಯಕರ ಸಮಾಜ ನಿರ್ಮಿಸಬಹುದು ಎಂದು ತಿಳಿಸಿದರು.

ಈ ವೇಳೆ ಸಸಿ ನೆಡುವ ಕಾರ್ಯಕ್ರಮ ನಡೆಯಿತು. ಗ್ರಾಪಂ ಮಾಜಿ ಅಧ್ಯಕ್ಷೆ ಅಲಮೇಲು, ವಲಯದ ಮೇಲ್ವಿಚಾರಕಿ ಭಾರತಿ ಶೆಟ್ಟಿ, ಕೃಷಿ ಮೇಲ್ವಿಚಾರಕ ಸಂತೋಷ, ಸೇವಾಪ್ರತಿನಿಧಿ ದಿವ್ಯ, ಶಾಲೆ ಶಿಕ್ಷಕರಾದ ಮಂಜುಳಾ, ನಾಗರಾಜ್, ಲತಾ, ರಾಜೇಶ್ವರಿ, ವಿದ್ಯಾರ್ಥಿಗಳು, ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

14ಕೆಟಿಆರ್.ಕೆ.1ಃ

ತರೀಕೆರೆ ಸಮೀಪದ ಎಂ.ಸಿ.ಹಳ್ಳಿ ಸ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಶಾಲೆ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಹೇಶ್, ಶಿಕ್ಷಕ ಹರ್ಷ,ವಲಯದ ಮೇಲ್ವಿಚಾರಕಿ ಭಾರತಿ ಶೆಟ್ಟಿ,ಕೃಷಿ ಮೇಲ್ವಿಚಾರಕ ಸಂತೋಷ ಮತ್ತಿತರರು ಇದ್ದರು.