ಪೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಗಳ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು. ಕಾಯ್ದೆಗಳ ಬಗ್ಗೆ ನಾವು ತಿಳಿದುಕೊಂಡಾಗ ಮಾತ್ರ ಇತರರಿಗೆ ಅರಿವು ಮೂಡಿಸಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪಾ ಎನ್. ಅವರು ಹೇಳಿದರು.

ಹಾವೇರಿ: ಪೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಗಳ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು. ಕಾಯ್ದೆಗಳ ಬಗ್ಗೆ ನಾವು ತಿಳಿದುಕೊಂಡಾಗ ಮಾತ್ರ ಇತರರಿಗೆ ಅರಿವು ಮೂಡಿಸಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪಾ ಎನ್. ಅವರು ಹೇಳಿದರು.ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ಪ್ಯಾನಲ್ ವಕೀಲರು, ಎಲ್‌ಎಡಿಸಿಎಸ್‌ನ ಅಭಿರಕ್ಷಣಾ ವಕೀಲರು, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಇಲಾಖೆ, ಆರೋಗ್ಯ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿಗಳಿಗೆ "ಪೋಕ್ಸೋ ಹಾಗೂ ಬಾಲ್ಯ ವಿವಾಹ ಕುರಿತು ಆಯೋಜಿಸಲಾದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಸಾರ್ವಜನಿಕರಿಗೆ ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸಲು ಮೊದಲು ನಾವು ಕಾಯ್ದೆಗಳ ಬಗ್ಗೆ ತಿಳಿದುಕೊಳ್ಳುವುದು ಅವಶ್ಯವಾಗಿದೆ. ಕಾಯ್ದೆಗಳ ಅರಿವು ಮೂಡಿಸಲು ಈ ಕಾರ್ಯಾಗಾರ ಆಯೋಜಿಸಲಾಗಿದ್ದು, ಎಲ್ಲರೂ ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಎಸ್‌ಟಿಸಿ ಅಶ್ವಿನಿ ವಿಜಯ ಶಿರಿಯಣ್ಣನವರ ಅಧ್ಯಕ್ಷತೆ ವಹಿಸಿದ್ದರು.ನ್ಯಾಯಾಧೀಶರಾದ ಎಂ.ಜಿ. ಶಿವಳ್ಳಿ, ಎನ್.ಎಂ.ರಮೇಶ, ಮಹ್ಮದ್ ಅನ್ವರ ಹುಸೇನ ಮೊಗಲಾನಿ, ಶೋಭಾ ಬಿ.ಜಿ., ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲಜಾ ಎಚ್.ವಿ., ನ್ಯಾಯಾಧೀಶ ಆಕರ್ಷ ಎಂ., ಬಿಪಿನ್ ಎಚ್.ಎಂ., ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಚ್.ಸಿ.ಸಿದ್ದನಗೌಡರ, ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ ಇತರರಿದ್ದರು.ವಕೀಲರಾದ ಆರ್.ಎಂ.ಗಂಜಿಗಟ್ಟಿ, ಯು.ಎನ್. ಗೌಳಿ, ಪೊಲೀಸ್ ಇಲಾಖೆ ಸಿ.ಎಚ್. ಜಾಲಗಾರ, ಆರೋಗ್ಯ ಇಲಾಖೆಯ ಡಾ. ರಾಜೇಶ್ವರಿ ಕದರಮಂಡಲಗಿ, ಸಿಡಿಪಿಒ ಜಯಶ್ರೀ ವರ್ಷಾವಿಲಾಸ ದೇಸಾಯಿ ಅವರುಗಳು ಪೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಉಪನ್ಯಾಸ ನೀಡಿದರು.