ಸಾರಾಂಶ
ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರು ಸಂವಿಧಾನದ ಅರಿವು ಹೊಂದುವ ಅಗತ್ಯವಿದೆ ಎಂದು ಚಾಮರಾಜನಗರ ನಗರಸಭೆ ಸದಸ್ಯ ಎಂ.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಆಯೋಜಿಸಿದ್ದ ಸಂವಿಧಾನ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರು ಸಂವಿಧಾನದ ಅರಿವು ಹೊಂದುವ ಅಗತ್ಯವಿದೆ ಎಂದು ಚಾಮರಾಜನಗರ ನಗರಸಭೆ ಸದಸ್ಯ ಎಂ.ಮಹೇಶ್ ಹೇಳಿದರು.ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಜನಹಿತಾಶಕ್ತಿ ಹೋರಾಟ ವೇದಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶುಕ್ರವಾರ ನಡೆದ ‘ಸಂವಿಧಾನ ಅರಿವು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಸಂವಿಧಾನವನ್ನು ಅಧ್ಯಯನ ಮಾಡಬೇಕು, ಜತೆಗೆ ಶಿಸ್ತು, ಸಮಯಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದರು.ವಿಚಾರಮಂಡನೆ ಮಾಡಿದ ಸಂವಿಧಾನಾತ್ಮಕ ಹಕ್ಕುಗಳ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಅರಕಲವಾಡಿ ನಾಗೇಂದ್ರ, ದೇಶದಲ್ಲಿ ಬಹಳಷ್ಟು ಮಂದಿ ಸಂವಿಧಾನದ ಬಗ್ಗೆ ಅರಿವು ಪಡೆದಿಲ್ಲ. ಸಂವಿಧಾನದ ಅರಿವು ಪಡೆದವರು ಸಮಾಜದಲ್ಲಿ ಉತ್ತಮ ಬದುಕನ್ನು ಕಟ್ಟಿಕೊಂಡಿದ್ದಾರೆ. ವಿದ್ಯಾರ್ಥಿಗಳು ಸಂವಿಧಾನವನ್ನು ಅಧ್ಯಯನ ಮಾಡುವ ಮೂಲಕ ತಮ್ಮ ಮುಂದಿನ ಉತ್ತಮ ಜೀವನ ಕಟ್ಟಿಕೊಳ್ಳಲು ಸಿದ್ದರಾಗಬೇಕು ಎಂದು ಸಲಹೆ ನೀಡಿದರು.
ಪ್ರಾಂಶುಪಾಲ ಸೋಮಣ್ಣ, ಜಿಲ್ಲಾ ಜನಹಿತಾಶಕ್ತಿ ಹೋರಾಟ ವೇದಿಕೆ ಜಿಲ್ಲಾಧ್ಯಕ್ಷ ರಾಮಸಮುದ್ರ ಸುರೇಶ್, ನಿಜದನಿ ಗೋವಿಂದರಾಜು, ಪ್ರಧಾನ ಕಾರ್ಯದರ್ಶಿ ಕಾಡಹಳ್ಳಿನಾಗರಾಜು, ಮುಖಂಡರಾದ ಸಿ.ಸಿದ್ದಾರ್ಥ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಿ. ರಂಗಸ್ವಾಮಿ, ನಿಜದನಿಗೋವಿಂದರಾಜು, ಲೋಕೇಶ್ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.