ಎಲ್ಲರೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ: ನ್ಯಾಯಾಧೀಶ ಶಿವಕುಮಾರ್‌ ಜಿ.ಜೆ.

| Published : Oct 14 2024, 01:16 AM IST

ಎಲ್ಲರೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ: ನ್ಯಾಯಾಧೀಶ ಶಿವಕುಮಾರ್‌ ಜಿ.ಜೆ.
Share this Article
  • FB
  • TW
  • Linkdin
  • Email

ಸಾರಾಂಶ

ಎಲ್ಲರೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ, ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಶಿವಕುಮಾರ್‌ ಜಿ.ಜೆ. ಹೇಳಿದರು. ಗುಂಡ್ಲುಪೇಟೆಯಲ್ಲಿ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ಕಾರ್ಯಕ್ಷೇತ್ರದಲ್ಲಿ ಮಾನಸಿಕ ಆರೋಗ್ಯದಲ್ಲಿ ಕಿರುಕುಳ, ತಾರತಮ್ಯ ಇದ್ದರೆ ಮಾನಸಿಕ ಆರೋಗ್ಯ ಕೆಡುತ್ತದೆ. ಆದ್ದರಿಂದ ಎಲ್ಲರೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ, ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಶಿವಕುಮಾರ್‌ ಜಿ.ಜೆ. ಹೇಳಿದರು.

ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿಯಾಗಿ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ಷೇತ್ರದಲ್ಲಿ ಎಲ್ಲರಿಗೂ ಮಾನಸಿಕ ಒತ್ತಡ ಇರುತ್ತದೆ. ಮಾನಸಿಕ ಆರೋಗ್ಯ ಕೆಟ್ಟರೆ ಆರೋಗ್ಯ ಕೆಡಲಿದೆ. ಹಾಗಾಗಿ ಮಾನಸಿಕ ಆರೋಗ್ಯ ಕಾಪಾಡಿಕೊಂಡು ಕೆಲಸ ಮಾಡಬೇಕು ಎಂದರು.

ವೈದ್ಯಾಧಿಕಾರಿ ಡಾ.ತ್ರಿವೇಣಿ ಮಾತನಾಡಿ, ದೈಹಿಕ ಆರೋಗ್ಯ ಕೆಟ್ಟರೆ ಚಿಕಿತ್ಸೆ ಇದೆ. ಆದರೆ ಮನುಷ್ಯನ ಮನಸ್ಸು ಕೆಟ್ಟರೆ ಮಾನಸಿಕ ಆರೋಗ್ಯ ಕೆಡುತ್ತದೆ. ವೈಯಕ್ತಿನ ಜೀವನವೇ ಬೇರೆ, ಕಾರ್ಯಕ್ಷೇತ್ರವೇ ಬೇರೆ. ಹಾಗಾಗಿ ವೈಯಕ್ತಿಕ ಜೀವನ ಹಾಗೂ ಕಾರ್ಯಕ್ಷೇತ್ರ ಸಮತೋಲನದಲ್ಲಿ ಕಾಪಾಡಿಕೊಳ್ಳಬೇಕು ಎಂದರು. ತಾಲೂಕು ಆರೋಗ್ಯಾಧಿಕಾರಿ ಡಾ.ಅಲಿಂ ಪಾಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ.ಮಂಜುನಾಥ್‌, ವಕೀಲರ ಸಂಘದ ಕಾರ್ಯದರ್ಶಿ ಎಂ.ಬೀರೇಗೌಡ, ವಕೀಲ ಎನ್.ಅರವಿಂದ ಕುಮಾರ್ ಇದ್ದರು.