ಸಾರಾಂಶ
ಆನಂದಪುರ: ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಂತರಾಗಿ ಇರಬೇಕಾದರೆ ಪ್ರತಿಯೊಂದು ಗ್ರಾಮದಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ಅವರು ಇಲ್ಲಿಗೆ ಸಮೀಪದ ಯಡೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಬಸವನಕೊಪ್ಪ ಬಳಿ ನಿರ್ಮಾಣಗೊಂಡ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ಶನಿವಾರ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯೂ ಆರೋಗ್ಯವಂತರಾಗಿ ಇರಬೇಕಾದರೆ ಗ್ರಾಮದ ಸ್ವಚ್ಛತೆ ಮುಖ್ಯ. ಗ್ರಾಮಗಳು ಸ್ವಚ್ಛತೆಯೊಂದಿಗೆ ಅಭಿವೃದ್ಧಿ ಕಾಣಬೇಕಾಗಿದೆ. ಗ್ರಾಮದ ಪ್ರತಿಯೊಬ್ಬ ವ್ಯಕ್ತಿಯು ಗ್ರಾಮಗಳ ಸ್ವಚ್ಛತೆಗೆ ಮುಂದಾಗಬೇಕು. ಮನೆಗಳ, ಕೈಗಾರಿಕೆ ಇತ್ಯಾದಿಗಳಿಂದ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಗ್ರಹಿಸಿ ಸಂಸ್ಕರಿಸಿ ವಿಲೇವಾರಿ ಮಾಡುವ ಒಂದು ವ್ಯವಸ್ಥೆ ಇದಾಗಿದೆ. ತ್ಯಾಜ್ಯ ವಸ್ತುಗಳನ್ನು ಸಂಸ್ಕರಣೆ ಮಾಡುವುದರಿಂದ ಪರಿಸರ ಮಾಲಿನ್ಯ ತಡೆಗಟ್ಟಲು, ರೋಗಗಳನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ ಎಂದರು. ತಾಲೂಕು ಮುಖ್ಯ ಕಾರ್ಯನಿರ್ವಣಾಧಿಕಾರಿ ಶಿವಪ್ರಕಾಶ್, ಕಳಸೆ ಚಂದ್ರಪ್ಪ, ಸೋಮಶೇಖರ್ ಲೌಗೆರೆ, ಗ್ರಾಪಂ ಅಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷ ಗಣಪತಿ ಇರುವಕ್ಕಿ, ಸದಸ್ಯರಾದ ಶಿವಾನಂದ, ನಟರಾಜ್, ರೇಣುಕಾ, ವೀಣಾ ಕುಮಾರಿ, ಜ್ಯೋತಿ ರಘು, ನಾರಿ ಲೋಕಪ್ಪ, ಅರುಣ್ ಗೌಡ, ಚೇತನ, ನಾಗರತ್ನ, ಪಿಡಿಒ ಸುರೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.