ಪ್ರತಿಯೊಬ್ಬರು ಸ್ವಚ್ಛತೆಗೆ ಆದ್ಯತೆ ನೀಡಲಿ

| Published : May 19 2025, 12:24 AM IST

ಪ್ರತಿಯೊಬ್ಬರು ಸ್ವಚ್ಛತೆಗೆ ಆದ್ಯತೆ ನೀಡಲಿ
Share this Article
  • FB
  • TW
  • Linkdin
  • Email

ಸಾರಾಂಶ

ರಸ್ತೆಗಳಲ್ಲಿ ಚರಂಡಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುತ್ತಿದ್ದು ಇದನ್ನು ತಡೆಗಟ್ಟುವಲ್ಲಿ ಪ್ರತಿಯೊಬ್ಬರು ಸ್ವಚ್ಛತೆಯಿಂದ ಪರಿಸರ ನೋಡಿಕೊಂಡು ಆರೋಗ್ಯವಂತ ಸಮಾಜ ಕಟ್ಟುವಲ್ಲಿ ಶ್ರಮಿಸಬೇಕು

ಕೊಪ್ಪಳ: ಪ್ರತಿಯೊಬ್ಬರು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಯಲಬುರ್ಗಾ ತಾಲೂಕು‌ ಆರೋಗ್ಯ ಇಲಾಖೆ ಅಧಿಕಾರಿ ಡಾ.ನೇತ್ರಾವತಿ ಹೇಳಿದರು.

ಜಿಲ್ಲೆಯ ಯಲಬುರ್ಗಾ ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಆರೋಗ್ಯ ಇಲಾಖೆಯಿಂದ ಜರುಗಿದ ಡೆಂಘೀ ದಿನಾಚರಣೆ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಡೆಂಘೀ ರೋಗ ಕಾಣುತ್ತಿದ್ದು ಇದಕ್ಕೆ ನಾವು ಇರುವ ಪರಿಸರ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮೊದಲು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಅಲ್ಲದೇ ಮಳೆಗಾಲ ಪ್ರಾರಂಭವಾದ ಸಂದರ್ಭದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಇತ್ತೀಚಿಗೆ ಡೆಂಘೀ ಮಾರಕವಾಗಿ ಪ್ರರಿಣಮಿಸಿದೆ. ಕಾರಣ ರಸ್ತೆಗಳಲ್ಲಿ ಚರಂಡಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುತ್ತಿದ್ದು ಇದನ್ನು ತಡೆಗಟ್ಟುವಲ್ಲಿ ಪ್ರತಿಯೊಬ್ಬರು ಸ್ವಚ್ಛತೆಯಿಂದ ಪರಿಸರ ನೋಡಿಕೊಂಡು ಆರೋಗ್ಯವಂತ ಸಮಾಜ ಕಟ್ಟುವಲ್ಲಿ ಶ್ರಮಿಸಬೇಕು ಎಂದರು.

ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಾರ್ವಜನಿಕರಿಗಾಗಿ ಇಲಾಖೆಯಿಂದ ಡೆಂಘೀ ದಿನಾಚರಣೆ ಪ್ರಯುಕ್ತ ಜನಜಾಗೃತಿ ಮೂಡಿಸಲಾಯಿತು. ಈ ವೇಳೆ ವೈದ್ಯಾಧಿಕಾರಿ ಡಾ. ಮಾರುತಿ ಎಂ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಶಿವರಾಜ್ ಹುಂಡೆಕರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಂಕ್ರಯ್ಯ ಪುರಾಣಿಕ್, ತಾಲೂಕು ಮಲೇರಿಯಾ ತಾಂತ್ರಿಕ ಸಹಾಯಕ ಮಂಜುನಾಥ್ ಹಿರೇಮನಿ, ಶರಣಪ್ಪ ಉಪ್ಪಾರ, ಆಪ್ತ ಸಮಾಲೋಚಕ ಕಾಳಪ್ಪ ಬಡಿಗೇರ್, ಚಂದ್ರಶೇಖರ್ ನಾಯಕ, ಶ್ರೀಕಾಂತ್ ಬಾಗುರು ಸಲೀಂ, ಶ್ರೀಗವಿಸಿದ್ದೇಶ್ವರ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.