ಶೃಂಗೇರಿ ಅತೀಯಾದ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಪರಿಸರದ ಮೇಲೆ ಅಗಾದ ಪರಿಣಾಮ ಬೀರುತ್ತಿದೆ. ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಯಂತ್ರಣ ಅನಿವಾರ್ಯ. ಆದ್ದರಿಂದ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ನರಸಿಂಹರಾಜಪುರ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ರಘುನಾಥಗೌಡ ಕರೆ ನೀಡಿದರು
ಮೊರಾರ್ಜಿ ವಸತಿ ಶಾಲೆಯಲ್ಲಿ ವಿಶ್ವವಿಕಲಚೇತನರ ದಿನಾಚರಣೆ
ಕನ್ನಡಪ್ರಭ ವಾರ್ತೆ ಶೃಂಗೇರಿಅತೀಯಾದ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಪರಿಸರದ ಮೇಲೆ ಅಗಾದ ಪರಿಣಾಮ ಬೀರುತ್ತಿದೆ. ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಯಂತ್ರಣ ಅನಿವಾರ್ಯ. ಆದ್ದರಿಂದ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ನರಸಿಂಹರಾಜಪುರ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ರಘುನಾಥಗೌಡ ಕರೆ ನೀಡಿದರು.
ತಾಲೂಕಿನ ಬೇಗಾರು ಪಂಚಾಯಿತಿ ಬೇಗಾರು ಮೊರಾರ್ಜಿ ವಸತಿ ಶಾಲೆಯಲ್ಲಿ ವಿಶ್ವವಿಕಲಚೇತನರ ದಿನಾಚರಣೆ ಪರಿಸರ ಕಾನೂನು ಸಾಕ್ಷರಥಾ ಕಾರ್ಯಾಗಾರದ ಅಂಗವಾಗಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪ್ಲಾಸ್ಟಿಕ್ ವಸ್ತುಗಳ ಅತೀಯಾದ ಬಳಕೆಯಿಂದ ಪರಿಸರ ಮಾಲಿನ್ಯ ಉಂಟಾಗುತ್ತಿರುವ ಜೊತೆಗೆ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನಾವು ಪರಿಸರ ಕಾಳಜಿ, ಪರಿಸರ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಜನರಲ್ಲಿ ಪರಿಸರ ಮಾಲಿನ್ಯದ ಬಗ್ಗೆ ಜಾಗೃತಿ ಮೂಡಿಸಬೇಕು. ಎಲ್ಲೆಂದರಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಎಸೆಯುವುದು, ತ್ಯಾಜ್ಯಗಳನ್ನು ಎಸೆಯುವುದನ್ನು ನಿಲ್ಲಿಸಬೇಕು.
ವಿದ್ಯಾರ್ಥಿಗಳು ಶಾಲೆಗಳಲ್ಲಿ ಸಿಗುವ ಸೌಲಭ್ಯ ಸರಿಯಾಗಿ ಬಳಸಿಕೊಂಡು ಶಾಲೆಗೆ, ಪೋಷಕರಿಗೆ ಒಳ್ಳೆಯ ಹೆಸರು ತರುವ ಸಾಧನೆ ಮಾಡಬೇಕು. ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆದು ಉನ್ನ ತ ಹುದ್ದೆಗಳನ್ನು ಪಡೆದುಕೊಳ್ಳುವಂತಾಗಬೇಕು. ಸರ್ಕಾರದ ಸೌಲಭ್ಯ ಪಡೆದುಕೊಳ್ಳಲು ಜನನ ಮರಣ ಪ್ರಮಾಣ ಪತ್ರಗಳು ಅತೀ ಅವಶ್ಯಕ. ಪ್ರತಿಯೊಬ್ಬರೂ ಜನನ ಮರಣ ನೋಂದಣಿ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು ಎಂದರು.ವಕೀಲ ಕೆ.ಪ್ರದೀಪ್ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಬಗ್ಗೆ ವಲಯಾರಣ್ಯಧಿಕಾರಿ ಮಧುಕರ್ ಪರಿಸರ ಕಾನೂನಿನ ಬಗ್ಗೆ, ಆರೋಗ್ಯ ಇಲಾಖೆ. ಬೇಬಿ ಹದಿಹರೆಯದ ಆರೋಗ್ಯ, ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಮಹೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
1 ಶ್ರೀ ಚಿತ್ರ 1-ಶೃಂಗೇರಿ ತಾಲೂಕಿನ ಬೇಗಾರು ಮೊರಾರ್ಜಿ ವಸತಿ ಶಾಲಾವರಣದಲ್ಲಿ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ನ್ಯಾ.ರಘುನಾಥಗೌಡ ಉದ್ಘಾಟಿಸಿದರು.