ತರೀಕೆರೆಸರ್ವರೂ ಪ್ರಜಾಸೇವೆ ಆಂದೋಲನದ ಸದುಪಯೋಗ ಪಡೆಯಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.ಶನಿವಾರ ಬೆಟ್ಟದಹಳ್ಳಿ ತರಳಬಾಳು ಸಮುದಾಯ ಭವನದಲ್ಲಿ ನಡೆದ ತರೀಕೆರೆ ತಾಲೂಕು ಕಸಬಾ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಉದ್ಘಾಟಿಸಿ ಮಾತನಾಡಿದರು.
ಬೆಟ್ಟದಹಳ್ಳಿ ಗ್ರಾಮದಲ್ಲಿ ಪ್ರಜಾಸೇವೆ ಆಂದೋಲನ ಸಭೆ ಉದ್ಘಾಟನೆ
ಕನ್ನಡಪ್ರಭ ವಾರ್ತೆ ತರೀಕೆರೆಸರ್ವರೂ ಪ್ರಜಾಸೇವೆ ಆಂದೋಲನದ ಸದುಪಯೋಗ ಪಡೆಯಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಶನಿವಾರ ಬೆಟ್ಟದಹಳ್ಳಿ ತರಳಬಾಳು ಸಮುದಾಯ ಭವನದಲ್ಲಿ ನಡೆದ ತರೀಕೆರೆ ತಾಲೂಕು ಕಸಬಾ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಉದ್ಘಾಟಿಸಿ ಮಾತನಾಡಿದರು.ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶದಂತೆ ಇಡೀ ರಾಜ್ಯದಲ್ಲಿ ಪ್ರಜಾಸೇವೆ ಆಂದೋಲನ ಸಭೆ ಆಯೋಜಿಸಲಾಗುತ್ತಿದೆ. ಇದು ಬಹಳ ಒಳ್ಳೆಯ ಕಾರ್ಯಕ್ರಮ. ಸರ್ಕಾರ ರೈತರ ಮನೆ ಬಾಗಿಲಿಗೆ ತೆರಳಿ ಅರ್ಜಿಗಳನ್ನು ಸ್ವೀಕರಿಸಿ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು. ಅಲ್ಲದೆ ಪ್ರತಿ ಬುಧವಾರ ಅಧಿಕಾರಿಗಳ ಜೊತೆ ಅರ್ಜಿಗಳ ಬಗ್ಗೆ ಚರ್ಚಿಸಿ ಸರಿಯಾದ ಮಾಹಿತಿ ನೀಡಲಾಗುತ್ತದೆ. ಇದರಿಂದ ಸಾರ್ವಜನಿರಿಗೆ ತುಂಬಾ ಉಪಯೋಗ ಎಂದು ಹೇಳಿದರು.
ಅರ್ಜಿ ನೀಡಿದ ಸಮಸ್ಯೆಗಳನ್ನು ಸಭೆಯಲ್ಲೇ ಪರಿಹರಿಸಲಾಗುತ್ತದೆ. ಬೆಳೆ ವಿಮೆ ಯೋಜನೆಯಡಿ ಕಳೆದ ಸಾಲಿನಲ್ಲಿ ಅಡಕೆ ಬೆಳೆ ವಿಮೆ ಕಟ್ಟಿದ್ದ ರೈತರಿಗೆ ₹5.37 ಕೋಟಿ ರೈತರ ಖಾತೆಗಳಿಗೆ ನೇರವಾಗಿ ಜಮಾ ಆಗಿದೆ ಎಂದು ತಿಳಿಸಿದರು.ಅರ್ಧಂಬರ್ಧ ನಿರ್ಮಾಣವಾದ ರಾಜನಹಳ್ಳಿ ಬಳಿ ಸೇತುವೆ ಪೂರ್ಣಗೊಳಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದರು. ಗ್ರಾಪಂ ಮಾಜಿ ಸದಸ್ಯ ತಿಪ್ಪೇಶಪ್ಪ ದೋರನಾಳು ಬಳಿ ವಸತಿ ಶಾಲೆಗೆ ವಿದ್ಯಾರ್ಥಿಗಳು ತೆರಳಲು ರಸ್ತೆ ನಿರ್ಮಿಸ ಬೇಕೆಂದು ಮನವಿ ಮಾಡಿದರು.
ಗ್ರಾಮಸ್ಥರು, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷೆ ಹೇಮಲತಾ ರೇವಣ್ಣ, ಕೆಡಿಪಿ ಸದಸ್ಯರಾದ ಗಂಗಾಧರ್, ಮೆಹಬೂಬ್, ತಹಸೀಲ್ದಾರ್ ಎಚ್.ಜಿ.ರಶ್ಮಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ.ಆರ್.ದೇವೇಂದ್ರಪ್ಪ, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.-
24ಕೆಟಿಆರ್.ಕೆ.1ಃಬೆಟ್ಟದಹಳ್ಳಿ ಗ್ರಾಮದಲ್ಲಿ ತಾಲೂಕು ಕಸಬಾ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನವನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಉದ್ಘಾಟಿಸಿದರು. ತಾ.ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷೆ ಹೇಮಲತಾ ರೇವಣ್ಣ, ತಹಸೀಲ್ದಾರ್ ಎಚ್.ಜಿ. ರಶ್ಮಿ, ತಾ.ಪಂ.ಇ.ಒ.ಡಾ.ಆರ್.ದೇವೇಂದ್ರಪ್ಪ ಮತ್ತಿತರರು ಇದ್ದರು.