ಸಾರಾಂಶ
ಕನ್ನಡಪ್ರಭ ವಾರ್ತೆ, ಕೊಳ್ಳೇಗಾಲ
ಪ್ರತಿಯೊಬ್ಬರು ಆರೋಗ್ಯ ವಿಚಾರದಲ್ಲಿ ತಾತ್ಸರ ಮಾಡದೆ ಮುಂಜಾಗ್ರತೆ ಕೈಗೊಳ್ಳಬೇಕು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.ಇಲ್ಲಿನ ಪ್ರವಾಸಿ ಮಂದಿರದಲ್ಲಿನ ಆರೋಗ್ಯಾಧಿಕಾರಿ ಕಚೇರಿ ವತಿಯಿಂದ ಆಯೋಜಿಸಿದ್ದ ಗೃಹ ಆರೋಗ್ಯ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. 14 ಗಂಭೀರ ಆರೋಗ್ಯ ಸಮಸ್ಯೆಗಳು ಕಂಡು ಬಂದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವಹಿಸದೆ ತಪಾಸಣೆ ಮಾಡಿಸಿಕೊಂಡು ಆರೋಗ್ಯದ ಕಡೆ ನಿಗಾವಹಿಸಬೇಕು. ಮನೆ ಮನೆಗೆ ಆರೋಗ್ಯ ತಪಾಸಣೆಗೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯುತ್ತಿದೆ. 14 ಆರೋಗ್ಯ ಸಮಸ್ಯೆಗಳು, ಪರಿಹಾರ ಎಂಬ ನಿಟ್ಟಿನಲ್ಲಿ ಗ್ರಾಮೀಣ ಭಾಗ ರೈತಾಪಿ ವರ್ಗ ಹಾಗೂ ಬಡ ವರ್ಗಗಳ ಉಪಯೋಗಕ್ಕಾಗಿ ಸರ್ಕಾರ ಈ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಗೆ 1 ವರ್ಷ ಪೂರೈಸಿದ ಹಿನ್ನೆಲೆ ನಾನು ಸಹಾ ಆರೋಗ್ಯ ತಪಾಸಣೆಗೊಳಗಾಗಿದ್ದೇನೆ. ಈ ಹಿಂದೆ ನಾನು ಬೖಹತ್ ಮಟ್ಟದಲ್ಲಿ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅಯೋಜಿಸಿದ್ದೆ. 12 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದು ನಾನು ಮರೆತಿಲ್ಲ ಎಂದರು . ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರು, ಜಿ.ಪಂ ಮಾಜಿ ಉಪಾಧ್ಯಕ್ಷ ಯೋಗೇಶ್,ತಾಲೂಕು ಆರೋಗ್ಯ ಅಧಿಕಾರಿ ಡಾ.ಲೋಹಿತ್, ಯಳಂದೂರು ತಾಲೂಕು ಅಧಿಕಾರಿ ಡಾ.ತನುಜಾ, ನಗರ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಅಧಿಕಾರಿ ವರದರಾಜು, ಮುಳ್ಳೂರು ಅಯುಷ್ಮನ್ ಅರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಅಧಿಕಾರಿ ರಾಜು, ಕೊಮ್ಮನಪುರ ಸಮುದಾಯ ಅರೋಗ್ಯ ಅಧಿಕಾರಿ ಪುಷ್ಪರಾಣಿ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.