ಸಾರಾಂಶ
ಭಾರತ ಸಂವಿಧಾನ ಶ್ರೇಷ್ಠವಾಗಿದ್ದು, ಸರ್ವರಿಗೂ ಸಮಬಾಳು ಸಮಪಾಲು ನೀಡುತ್ತದೆ. ನಮ್ಮ ಸಂವಿಧಾನ 395 ವಿಧಿಗಳು ಹಾಗೂ 8 ಪರಿಚ್ಛೇದಗಳನ್ನು ಹೊಂದಿದೆ. ಎಲ್ಲರಿಗೂ ಒಂದೇ ಕಾನೂನನ್ನು ಸಂವಿಧಾನ ಕಲ್ಪಿಸಿಕೊಟ್ಟಿದೆ. ಇದರಿಂದ ಪ್ರತಿಯೊಬ್ಬರೂ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ ಪುರಸಭೆ ಮಾಜಿ ಸದಸ್ಯ ದೊಡ್ಡಯ್ಯತಿಳಿಸಿದರು.
ಕನ್ನಡಪ್ರಭ ವಾರ್ತೆ ಮಳವಳ್ಳಿ
ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಯೊಬ್ಬರೂ ಸಮಾನರು ಎಂಬುದಕ್ಕೆ ಡಾ. ಬಿ.ಆರ್.ಅಂಬೇಡ್ಕರ್ ಬರೆದಿರುವ ಸಂವಿಧಾನವೇ ಕಾರಣ. ಪ್ರತಿಯೊಬ್ಬರೂ ಸಂವಿಧಾನವನ್ನು ಓದಿ ಅರ್ಥೈಸಿಕೊಳ್ಳಬೇಕು ಎಂದು ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ ತಿಳಿಸಿದರು.ಪಟ್ಟಣದ ಗಂಗಾಮತ ಬೀದಿಯ ಗಂಗಾಪರಮೇಶ್ವರಿ ಸಹಕಾರ ಸಂಘದ ಆವರಣದಲ್ಲಿ ಸಂವಿಧಾನ ಜಾಗೃತಿ ರಥಕ್ಕೆ ಸ್ವಾಗತಿಸಿದ ನಂತರ ಮಾತನಾಡಿದ ಅವರು, ಸಂವಿಧಾನದಲ್ಲಿ ನಾಗರಿಕ ಹಕ್ಕುಗಳು ಹಾಗೂ ಕರ್ತವ್ಯದ ಬಗ್ಗೆ ಸ್ವಷ್ಟವಾಗಿ ಹೇಳಲಾಗಿದೆ. ನಾವೆಲ್ಲರೂ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಡೆದುಕೊಳ್ಳಬೇಕಿದೆ ಎಂದರು.
ಭಾರತ ಸಂವಿಧಾನ ಶ್ರೇಷ್ಠವಾಗಿದ್ದು, ಸರ್ವರಿಗೂ ಸಮಬಾಳು ಸಮಪಾಲು ನೀಡುತ್ತದೆ. ನಮ್ಮ ಸಂವಿಧಾನ 395 ವಿಧಿಗಳು ಹಾಗೂ 8 ಪರಿಚ್ಛೇದಗಳನ್ನು ಹೊಂದಿದೆ. ಎಲ್ಲರಿಗೂ ಒಂದೇ ಕಾನೂನನ್ನು ಸಂವಿಧಾನ ಕಲ್ಪಿಸಿಕೊಟ್ಟಿದೆ. ಇದರಿಂದ ಪ್ರತಿಯೊಬ್ಬರೂ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ ಎಂದರು.ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂವಿಧಾನ ಮತ್ತು ಅಂಬೇಡ್ಕರ್ ಪರ ಘೋಷಣೆ ಕೂಗಿದರು. ರಥದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಬುದ್ಧ, ಬಸವ, ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಡಾ.ಅಂಬೇಡ್ಕರ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿದರು.
ಈ ವೇಳೆ ವೆಂಕಟೇಶ್, ಶಿವಕುಮಾರ್, ಜನಾರ್ಧನ್, ರಮೇಶ್,ಷರೀಫ್ ಪುರಸಭೆಯ ಭೈರಪ್ಪ ಸೇರಿ ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳು ಇದ್ದರು.