ಸಾರಾಂಶ
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಲೋಕಸಭಾ ಸಾರ್ವತ್ರಿಕ ಚುನಾವಣೆಯಂದು ಎಲ್ಲಾ ಅರ್ಹ ಮತದಾರರು ಮತದಾನ ಕೇಂದ್ರಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವಂತೆ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ ಬೆನ್ನೂರ ಹೇಳಿದರು.ತಾಲೂಕಿನ ಬೆಳಗೊಳ ಗ್ರಾಮದ ಸ್ವೀಪರ್ ಕಾಲೋನಿಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ ಮತದಾನ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಮತದಾನ ನಿಮ್ಮ ಹಕ್ಕು. ಮತದಾನ ಒಂದು ಶಕ್ತಿ. ಹಾಗಾಗಿ ಪ್ರತಿಯೊಬ್ಬ ಪ್ರಜೆಗೂ ಮತದಾನ ಮಾಡಲು ಹಕ್ಕು ನೀಡಿದೆ. ಅಂತಹ ಪವಿತ್ರವಾದ ಹಕ್ಕನ್ನು ಏ.26 ರಂದು ನಡೆಯಲಿರುವ ಲೋಕ ಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಭಾಗವಹಿಸಿ ತಪ್ಪದೇ ಮತ ಚಲಾಯಿಸಿ ಎಂದು ಸಲಹೆ ನೀಡಿದರು.ಈ ವೇಳೆ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಜ್ಯೋತಿ, ಆಶಾ ಕಾರ್ಯಕರ್ತೆ ಜಯಂತಿ, ಸಾವಿತ್ರಿ ಅಂಗನವಾಡಿ ಕಾರ್ಯಕರ್ತೆ ಸುನಿತಾ ಸೇರಿದಂತೆ ಗ್ರಾಮಸ್ಥರು ಇದ್ದರು.ಮತದಾನ ಜಾಗೃತಿ ಅಭಿಯಾನ
ಭಾರತೀನಗರ:ಗ್ರಾಪಂನಿಂದ ಲೋಕಸಭಾ ಚುನಾವಣೆ ಅಂಗವಾಗಿ ಮತದಾನ ಜಾಗೃತಿ ಅಭಿಯಾನ ಶ್ರೀಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಡೆಯಿತು.ತಾಪಂ ಇಒ ಮಂಜುನಾಥ್ ಮಾತನಾಡಿ, ಯಾವುದೇ ಆಮಿಷಕ್ಕೆ ಮರುಳಾಗದೇ ವಿವೇಚನೆಯಿಂದ ನಮ್ಮಮತ ನಮ್ಮಹಕ್ಕು, ಮತ ಚಲಾಯಿಸುವುದು ನಮ್ಮೆಲ್ಲರ ಹಕ್ಕು. ಮತ ಚಲಾಯಿಸಿ ಪ್ರಜಾಪ್ರಭುತ್ವ ಗೆಲ್ಲಿಸಿ ಎಂದರು.ಭಾರತ್ ಚುನಾವಣಾ ಆಯೋಗ, ಜಿಲ್ಲಾ ಸ್ವೀಪ್ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ನಡೆದ ಕಾರ್ಯಕ್ರಮಕ್ಕೆ ಪಿಡಿಒ ಎನ್.ಸುಧಾ ಚಾಲನೆ ನೀಡಿದರು. ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ಕಾರ್ಮಿಕರಿಗೆ ವೇತನ ಸಹಿತ ರಜೆ ಇದೆ. ಹಾಗಾಗಿ ಮತ ಹಾಕುವುದನ್ನು ಮರೆಯಬೇಡಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಈ ವೇಳೆ ತಾ.ಪಂ ಸಹಾಯಕ ನಿರ್ದೇಶಕ ಮಂಜುನಾಥ್, ಸಂಪನ್ಮೂಲ ವ್ಯಕ್ತಿ ಅಂಬರಹಳ್ಳಿ ಸ್ವಾಮಿ, ಪಿಡಿಓ ಸುಧಾ, ನರೇಗ ಇಂಜಿನೀಯರ್ ರಮೇಶ್, ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯ ಡಿಜಿಎಂ ರವಿ, ನಿಂಗಣ್ಣ ಸೇರಿದಂತೆ ಹಲವರಿದ್ದರು.ಅಧಿಕಾರಿಗಳಿಗೆ ತರಬೇತಿಮದ್ದೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ನಡೆಯುತ್ತಿರುವ 2ನೇ ಹಂತದ ತರಬೇತಿ ಶಿಬಿರದ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪಟ್ಟಣದ ಎಚ್.ಕೆ.ವೀರಣ್ಣಗೌಡ ಕಾಲೇಜಿನಲ್ಲಿ ನಡೆಯುತ್ತಿರುವ ಶಿಬಿರಕ್ಕೆ ಜಿಪಂ ಸಿಇಒ ಶೇಕ್ ತನ್ವೀರ್ ಆಸಿಫ್ ಅವರೊಂದಿಗೆ ಭೇಟಿ ನೀಡಿ ತರಬೇತಿ ಶಿಬಿರದ ವ್ಯವಸ್ಥೆ ಕುರಿತು ಪರಿಶೀಲಿಸಿದರು.
ನಂತರ ಮಾತನಾಡಿದ ಡೀಸಿ, ಮತದಾನದ ಯಾವುದೇ ಲೋಪ ಉಂಟಾಗದಂತೆ ಮತಗಟ್ಟೆ ಅಧಿಕಾರಿಗಳು ಎಚ್ಚರವಹಿಸಬೇಕು. ತರಬೇತಿ ಗಮನಿಸಿ ಅಧಿಕಾರಿಗಳು ನೀಡುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಲಹೆ ನೀಡಿದರು. ನಂತರ ಭೋಜನ ಸಭಾಂಗಣಕ್ಕೆ ತೆರಳಿ ದ ಜಿಲ್ಲಾಧಿಕಾರಿಗಳು ಊಟದ ವ್ಯವಸ್ಥೆ ಕುರಿತಂತೆ ತರಬೇತಿಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು.ಈ ವೇಳೆ ಸಹಾಯಕ ಚುನಾವಣಾ ಅಧಿಕಾರಿ ಲೋಕೇಶ್. ತಹಸೀಲ್ದಾರ್ ಸೋಮಶೇಖರ್, ಜಿಪಂ ಇಒ ಮಂಜುನಾಥ್. ಚುನಾವಣಾ ಶಾಖೆ ಶಿರಸ್ತೇದಾರ್ ರೂಪ ಇದ್ದರು.