ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಿ: ತಾಪಂ ಇಒ ಮಂಜುನಾಥ್ ಕರೆ

| Published : Apr 01 2024, 12:47 AM IST

ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಿ: ತಾಪಂ ಇಒ ಮಂಜುನಾಥ್ ಕರೆ
Share this Article
  • FB
  • TW
  • Linkdin
  • Email

ಸಾರಾಂಶ

ಸಮಾಜದ ಮುನ್ನೆಲೆಗೆ ಬರದ ಶೋಷಿತ ವರ್ಗಗಳು, ಲೈಂಗಿಕ ಅಲ್ಪಸಂಖ್ಯಾತರು, ಬುಡಕಟ್ಟು ಸಮುದಾಯ ಸೇರಿದಂತೆ 18 ವರ್ಷ ತುಂಬಿದ ಪ್ರತಿಯೊಬ್ಬ ವ್ಯಕ್ತಿಗಳು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರ ನೀಡಬೇಕು. ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರೆ ಮತದಾನ ಪ್ರಕ್ರಿಯೆಯಿಂದ ದೂರವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಸಮಾಜದ ಮುನ್ನೆಲೆಗೆ ಬರದ ಶೋಷಿತ ವರ್ಗಗಳು, ಲೈಂಗಿಕ ಅಲ್ಪಸಂಖ್ಯಾತರು, ಬುಡಕಟ್ಟು ಸಮುದಾಯ ಸೇರಿದಂತೆ 18 ವರ್ಷ ತುಂಬಿದ ಪ್ರತಿಯೊಬ್ಬ ವ್ಯಕ್ತಿಗಳು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರ ನೀಡಬೇಕು ಎಂದು ತಾಪಂ ಸಿಇಒ ಮಂಜುನಾಥ್ ಹೇಳಿದರು.

ಪಟ್ಟಣದ ತಾಪಂ ಕಚೇರಿ ಆವರಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಆಯೋಜಿಸಿದ್ದ ವಿಶೇಷ ಚೇತನರಿಂದ ಮತದಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ಏ.26ರಂದು ಲೋಕಸಭಾ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ 18 ವರ್ಷ ತುಂಬಿದ ಎಲ್ಲರೂ ನಿರ್ಭೀತಿಯಿಂದ ತಮ್ಮ ಹಕ್ಕು ಚಲಾಯಿಸುವ ಮೂಲಕ ಯೋಗ್ಯ ಅಭ್ಯರ್ಥಿ ಆಯ್ಕೆ ಮಾಡಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರೆ ಮತದಾನ ಪ್ರಕ್ರಿಯೆಯಿಂದ ದೂರವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ನಗರ ಪ್ರದೇಶಗಳಿಗಿಂತ ಗ್ರಾಮೀಣ ಭಾಗದ ಜನರು ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಇತರರಿಗೆ ಮಾದರಿಯಾಗಿದ್ದಾರೆ. ಇದರಿಂದ ಯೋಗ್ಯ ಅಭ್ಯರ್ಥಿ ಆಯ್ಕೆಗೆ ಸಹಕಾರಿಯಾಗುತ್ತದೆ ಎಂದರು.

ನಂತರ ವಿಶೇಷ ಚೇತನರು ಕೆ.ಎಚ್.ನಗರ, ಲೀಲಾವತಿ ಬಡಾವಣೆ, ಹಳೆಯ ಎಂ.ಸಿ.ರಸ್ತೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಬೈಕ್ ಜಾಥಾ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಕಡ್ಡಾಯ ಮತದಾನ ಕುರಿತು ಜಾಗೃತಿ ಮೂಡಿಸಿದರು.

ಈ ವೇಳೆ ಪುರಸಭೆ ಮುಖ್ಯ ಅಧಿಕಾರಿ ಕರಿಬಸವಯ್ಯ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಮಂಜುನಾಥ, ಸಿಬ್ಬಂದಿ ಚಿದಾನಂದ, ಬಸವರಾಜು, ಶಿವಕುಮಾರ್, ಸಂಯೋಜಕ ಅಂಬರಹಳ್ಳಿ ಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಕರಪತ್ರ ಹಂಚಿ ಅರಿವು

ಪಾಂಡವಪುರ:ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಗಳ ನವೀನ್ ಕುಮಾರ್ ಪಟ್ಟಣದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಮಹಿಳೆಯರಿಗೆ ಕರಪತ್ರ ನೀಡುವ ಮೂಲಕ ಅರಿವು ಮೂಡಿಸಿದರು.

ಪಟ್ಟಣದ ವಿನಾಯಕ ಟೈಲರಿಂಗ್ ತರಬೇತಿ ಕೇಂದ್ರಕ್ಕೆ ಮಹಿಳಾ ಕಾರ್ಯಕರ್ತೆಯರೊಂದಿಗೆ ಭೇಟಿಕೊಟ್ಟು ಮಂಗಳ ಮಹಿಳೆಯರಿಗೆ ಕರಪತ್ರಗಳನ್ನು ಸರ್ಕಾರಗಳ ಯೋಜನೆಗಳ ಕುರಿತು ಮಾಹಿತಿ ನೀಡಿದರು.ನಂತರ ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದ ನಾರಿ ಶಕ್ತಿಯನ್ನು ರಾಷ್ಟ್ರ ಶಕ್ತಿಯನ್ನಾಗಿ ಅಭಿವೃದ್ಧಿ ಪಡಿಸಿದ್ದಾರೆ. ನಾರಿ ಶಕ್ತಿ ವಂದನ ಅಧಿನಿಯಮದಡಿ ಮಹಿಳಾ ಮೀಸಲಾತಿ ಕಲ್ಪಿಸಿದ್ದಾರೆ. ಲಕ್ ಪತಿ ದೀದಿ, ಮಾತೃವಂದನ ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ, ಸುಕನ್ಯಾ ಸಮೃದ್ದಿ ಯೋಜನೆ, ಉಜ್ವಲ್ ಯೋಜನೆ ನೀಡುವ ಮೂಲಕ ಮಹಿಳೆಯರ ಶಕ್ತಿಯನ್ನು ಹೆಚ್ಚಿಸಿದ್ದಾರೆ ಎಂದರು.

ಲೋಕಸಭಾ ಚುನಾವಣೆಯೂ ದೇಶದ ಅಭಿವೃದ್ಧಿಗಾಗಿ ನಡೆಯುತ್ತಿರುವ ಚುನಾವಣೆಯಾಗಿದೆ. ದೇಶದ ಪ್ರಗತಿಗಾಗಿ ಜನರು ಬಿಜೆಪಿಗೆ ಮತ ನೀಡಬೇಕು. ಮೋದಿ ಪ್ರಧಾನಿಯಾದರೆ ಮಾತ್ರ ದೇಶದ ಉಳಿಗಾಲ ಸಾಧ್ಯ. ಮಹಿಳೆಯೆ ಮೋದಿ ಅವರ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿಕೊಂಡು ಬಿಜೆಪಿಗೆ ಮತ ನೀಡಬೇಕು ಎಂದು ಕೋರಿದರು.ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ಅವರಿಗೆ ತಮ್ಮ ಅಮೂಲ್ಯ ಮತಕೊಟ್ಟು ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಈ ವೇಳೆ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷೆ ಸವಿತರಮೇಶ್, ರಮ್ಯಸ್ವಾಮಿ, ಅಕ್ಷತ, ನಿರ್ಮಲ ಆನಂದ್ ಸೇರಿದಂತೆ ಹಲವರು ಹಾಜರಿದ್ದರು.