ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಲು ಎಲ್ಲರೂ ಶ್ರಮಿಸಿ: ಶಾಸಕ ಆರ್ ಬಸನಗೌಡ

| Published : Nov 04 2024, 12:28 AM IST

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಲು ಎಲ್ಲರೂ ಶ್ರಮಿಸಿ: ಶಾಸಕ ಆರ್ ಬಸನಗೌಡ
Share this Article
  • FB
  • TW
  • Linkdin
  • Email

ಸಾರಾಂಶ

Everyone should work hard for the Congress candidate to win: MLA R Basanagowda

-ಪುರಸಭೆಯ 3ನೇ ವಾರ್ಡನ ಉಪಚುನಾವಣೆಯ ಪೂರ್ವಭಾವಿ ಸಭೆ

-----

ಕನ್ನಡಪ್ರಭ ವಾರ್ತೆ ಮಸ್ಕಿ

ಇದೇ ನ. 23 ರಂದು ನಡೆಯಲಿರುವ ಪುರಸಭೆಯ ಮೂರನೇ ವಾರ್ಡ್ ನ ಉಪ ಚುನಾವಣೆಯಲ್ಲಿ ಉತ್ತಮ ಕೆಲಸ ಮಾಡುವ ಅಭ್ಯರ್ಥಿಯನ್ನು ಗುರುತಿಸಿ ವಾರ್ಡ್ ಮುಖಂಡರೊಂದಿಗೆ ಚರ್ಚಿಸಿ ಕಣಕ್ಕೆ ಇಳಿಸಲಾಗುವುದು ಎಂದು ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಶಾಸಕ ಆರ್. ಬಸನಗೌಡ ತುರುವಿಹಾಳ ತಿಳಿಸಿದರು.

ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಉಪ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಮಸ್ಕಿ ಪುರಸಭೆ ವ್ಯಾಪ್ತಿಯ ಮೂರನೇ ವಾರ್ಡ್ ನ ಕಾಂಗ್ರೆಸ್ ನ ಶಾಸಮ್ಮ ಕಟ್ಟಿಮನಿ ಆಯ್ಕೆಯಾಗಿದ್ದರು. ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು ವಾರ್ಡ್ ನ್ನು ಉಳಿಸಿಕೊಳ್ಳಬೇಕು ಎಂದರು. ಸರ್ಕಾರದ 5 ಗ್ಯಾರಂಟಿ ಯೋಜನೆಗಳನ್ನು ವಾರ್ಡ್ ಮತದಾರರಿಗೆ ತಿಳಿಸುವ ಮೂಲಕ ಪುನಃ ಕಾಂಗ್ರೆಸ್ ಗೆಲ್ಲಲು ಮುಖಂಡರು ಕಾರ್ಯಕರ್ತರು ಶ್ರಮಿಸಬೇಕು ಎಂದರು.

ಕಾಂಗ್ರೆಸ್ ನ ಪ್ರಚಾರ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ,ಮುಖಂಡ ಅಂದಾನಪ್ಪ ಗುಂಡಳ್ಳಿ. ಎಚ್. ಬಿ. ಮುರಾರಿ, ಬಸನಗೌಡ ಪೊಲೀಸ ಪಾಟೀಲ, ನಿರುಪಾದೆಪ್ಪ ವಕೀಲ ಮಾತನಾಡಿದರು. ಪಕ್ಷದ ಮುಖಂಡರು, ವಿವಿಧ ಸಮಿತಿಗಳ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

-------------------

03ಎಂ ಎಸ್ ಕೆ -01: ಮಸ್ಕಿಯ ಕಾಂಗ್ರೆಸ್ ಕಚೇರಿಯಲ್ಲಿ ಪುರಸಭೆ ಉಪಚುನಾವಣೆಯ ಪೂರ್ವಭಾವಿ ಸಭೆ ಜರುಗಿತು.