ಸರ್ಕಾರಿ ಶಾಲೆಗಳನ್ನು ಉಳಿಸಲು ಎಲ್ಲರೂ ಪ್ರಯತ್ನಿಸಿ

| Published : Feb 02 2025, 11:46 PM IST

ಸಾರಾಂಶ

ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳನ್ನು ಉಳಿಸಲು ಎಲ್ಲರೂ ಗಮನಹರಿಸಬೇಕು ಎಂದು ತಾಲೂಕು ಸರ್ಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷ ಹನ್ಯಾಳು ಕುಮಾರ್ ಮನವಿ ಮಾಡಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಇಂದ್ರೇಗೌಡ ಮಾತನಾಡಿ, ಮಕ್ಕಳು ಮತ್ತು ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ಬದಿಗಿರಿಸಿ ಸರ್ಕಾರಿ ಶಾಲೆಗಳ ಕಡೆಗೆ ಕಾಳಜಿ ವಹಿಸಬೇಕು ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಅರಕಲಗೂಡು

ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳನ್ನು ಉಳಿಸಲು ಎಲ್ಲರೂ ಗಮನಹರಿಸಬೇಕು ಎಂದು ತಾಲೂಕು ಸರ್ಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷ ಹನ್ಯಾಳು ಕುಮಾರ್ ಮನವಿ ಮಾಡಿದರು.

ತಾಲೂಕಿನ ದುಮ್ಮಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಕಲಿತವರು ಏನೆಲ್ಲ ಮಹಾನ್ ಸಾಧನೆ ಮಾಡಿರುವ ಉದಾಹರಣೆಗಳು ಸಾಕಷ್ಟಿವೆ. ಹೀಗಾಗಿ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವುದು ಒಳಿತು ಎಂದರು.ಸಮೂಹ ಸಂಪನ್ಮೂಲ ವ್ಯಕ್ತಿ ಇಂದ್ರೇಗೌಡ ಮಾತನಾಡಿ, ಮಕ್ಕಳು ಮತ್ತು ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ಬದಿಗಿರಿಸಿ ಸರ್ಕಾರಿ ಶಾಲೆಗಳ ಕಡೆಗೆ ಕಾಳಜಿ ವಹಿಸಬೇಕು ಎಂದು ಹೇಳಿದರು.ಎಸ್‌ಡಿಎಂಸಿ ಅಧ್ಯಕ್ಷೆ ಸುಮಾ ನಟರಾಜ್, ಉಪಾಧ್ಯಕ್ಷ ಕುಮಾರ್, ಮುಖ್ಯ ಶಿಕ್ಷಕ ಲೋಕೇಶ್, ಸಹ ಶಿಕ್ಷಕರಾದ ಮಮತಾ, ಶಿವಶಂಕರ್, ಮುತ್ತೇಗೌಡ, ಕೃಷ್ಣೇಗೌಡ, ನೀಲಕಂಠ, ರೇವಣ್ಣ, ಚಂದ್ರೇಗೌಡ, ಮಹೇಶ್, ಶಶಿಧರ್‌, ಕುಶ, ರೇಣುಕಾ, ನಾಗೇಶ್, ವಿಶ್ವನಾಥ್, ಮಂಜು, ಎಸ್‌ಡಿಎಂಸಿ ಸದಸ್ಯರಾದ ವೀಣಾ, ಮಂಜುಳಾ, ಶೇಖರ್, ಚಂದ್ರಶೇಖರ್, ಗುಣಶೇಖರ್, ಈರಯ್ಯ, ಸೋಮಶೇಖರ್, ನಿವೃತ್ತ ಅಧಿಕಾರಿ ದೇವರಾಜೇಗೌಡ, ಗ್ರಾಪಂ ಉಪಾಧ್ಯಕ್ಷೆ ಕಾವ್ಯ ಇತರರಿದ್ದರು. ಗ್ರಾಪಂ ಸದಸ್ಯ ಪರಮೇಶ್ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಧನ ಸಹಾಯ ವಿತರಿಸಿದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಕ್ಕಳಿಗೆ ಸಮವಸ್ತ್ರ ವಿತರಿಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.