ಗ್ರಾಮಗಳ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ-ಗಡ್ಡದೇವರಮಠ

| Published : Feb 13 2024, 12:48 AM IST

ಗ್ರಾಮಗಳ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ-ಗಡ್ಡದೇವರಮಠ
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಪ್ರಗತಿ ಕಾಣಲು ಸಾಧ್ಯ. ಗ್ರಾಮಗಳ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಹೇಳಿದರು.

ಲಕ್ಷ್ಮೇಶ್ವರ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಪ್ರಗತಿ ಕಾಣಲು ಸಾಧ್ಯ. ಗ್ರಾಮಗಳ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಹೇಳಿದರು.

ಪಟ್ಟಣದ ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಅವರ ನಿವಾಸದಲ್ಲಿ ಸೋಮವಾರ ಬೆಳಗ್ಗೆ ಸಮೀಪದ ಬಟ್ಟೂರ ಗ್ರಾಪಂನ ನೂತನ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರನ್ನು ಸನ್ಮಾನಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶಗಳ ಹಾಗೂ ನಗರ ಪ್ರದೇಶಗಳ ನಡುವಿನ ತಾರತಮ್ಯ ಹೋಗಲಾಡಿಸುವ ಗುರುತರ ಜವಾಬ್ದಾರಿ ಜನಪ್ರತಿನಿಧಿಗಳ ಮೇಲೆ ಇರುತ್ತದೆ. ಗ್ರಾಮೀಣ ಪ್ರದೇಶದ ಎಲ್ಲ ಜನರಿಗೂ ಸಮಾನ ಅವಕಾಶಗಳನ್ನು ನೀಡುವ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯು ನಿಮ್ಮ ಗುರಿಯಾಗಿರಲಿ. ಗ್ರಾಮೀಣ ಪ್ರದೇಶಗಳ ನಿವೇಶನ ರಹಿತರಿಗೆ ನಿವೇಶನ ನೀಡುವುದು. ಶಿಕ್ಷಣ, ಗ್ರಾಮೀಣ ರಸ್ತೆಗಳ ಸುಧಾರಣೆ, ಕುಡಿಯುವ ನೀರು ಹಾಗೂ ರಸ್ತೆಗಳ ಅಭಿವೃದ್ಧಿ ಮಾಡುವ ಮೂಲಕ ಎಲ್ಲರ ಮನಸನ್ನು ಗೆಲ್ಲುವ ಕಾರ್ಯ ಮಾಡಬೇಕು. ಜನರು ಕೊಟ್ಟಿರುವ ಅಧಿಕಾರ ಶಾಶ್ವತವಲ್ಲ ನಾವು ಮಾಡುವ ಕೆಲಸಗಳು ಇನ್ನೊಬ್ಬರ ಸಂತಸಕ್ಕೆ ಕಾರಣವಾಗಬೇಕು ಎಂದು ಅವರು ಹೇಳಿದರು.

ಈ ವೇಳೆ ಬಟ್ಟೂರ ಗ್ರಾಪಂ ಅಧ್ಯಕ್ಷೆ ಶಾಂತವ್ವ ಹಡಪದ, ಉಪಾಧ್ಯಕ್ಷೆ ಮಲ್ಲವ್ವ ತಳವಾರ, ಫಕ್ಕಿರಯ್ಯ ಹಿರೇಮಠ. ಮಂಜುನಾಥ ಗೌರಿ, ಮಾಲತೇಶ ಹೊಳಲಾಪೂರ, ಮಲ್ಲಪ್ಪ ತಳವಾರ, ಮಂಜುನಾಥ ಕಳಸದ, ಸುರೇಶ ಲಮಾಣಿ, ರುದ್ರಯ್ಯ ಶೀಲವಂತಮಠ, ಪ್ರಕಾಶ ತಳವಾರ, ಚಂದ್ರು ಹಡಪದ, ಪರಮೇಶ ಲಮಾಣಿ ಹಾಗೂ ಬಸಯ್ಯ ಮಳಿಮಠ ಇದ್ದರು.