ಇಚ್ಚಾಶಕ್ತಿಯಿದ್ದರೆ ಎಲ್ಲವೂ ಸಾಧ್ಯ: ತಮ್ಮಯ್ಯ

| Published : Feb 07 2024, 01:47 AM IST

ಸಾರಾಂಶ

ಜನರಿಗೆ ಏನು ಬೇಕು ಎಂಬುದನ್ನು ಅರಿತು ಕೆಲಸ ಮಾಡಬೇಕು. ಇಚ್ಛಾಶಕ್ತಿ ಇದ್ದರೆ ಎಲ್ಲವೂ ಸಾಧ್ಯ ಎಂದು ಶಾಸಕ ಎಚ್ ಡಿ ತಮ್ಮಯ್ಯ ಹೇಳಿದರು.

ಕನ್ನಡಪ್ರಭ ವಾರ್ತೆ, ಕಡೂರು

ಜನರಿಗೆ ಏನು ಬೇಕು ಎಂಬುದನ್ನು ಅರಿತು ಕೆಲಸ ಮಾಡಬೇಕು. ಇಚ್ಛಾಶಕ್ತಿ ಇದ್ದರೆ ಎಲ್ಲವೂ ಸಾಧ್ಯ ಎಂದು ಶಾಸಕ ಎಚ್ ಡಿ ತಮ್ಮಯ್ಯ ಹೇಳಿದರು.

ಎಸ್ ಬಿದರೆ ಗ್ರಾಮದಲ್ಲಿ ಸೋಮವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಜೀವ ಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಗುಣಕ್ಕೆ ಮತ್ಸರವಿರಬಾರದು. ಗ್ರಾಮದ ಅಭಿವೃದ್ಧಿಗೆ ಗ್ರಾಪಂಗಳ ಕೆಲಸಗಳೇ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಬಡವರಿಗೆ ಮತ್ತು ಮಧ್ಯಮವರ್ಗದವರಿಗೆ ಕೆಲಸ ಕೊಡುವ ಎಸ್. ಬಿದರೆ ಗ್ರಾಪಂನ ಎನ್ನಾರ್‌ಇಜಿ ಯೋಜನೆಯಲ್ಲಿ ತೊಡಗಿಸಿಕೊಂಡು ಎಲ್ಲಾ ಸೌಲಭ್ಯ ಹೊಂದಿರುವ ಕಟ್ಟಡ ನಿರ್ಮಿಸಿರುವುದು ಎಲ್ಲರಿಗೂ ಮಾದರಿಯಾಗಿದೆ. ಸರಕಾರವೇ ಎಲ್ಲಾ ಮಾಡಲು ಸಾಧ್ಯವಿಲ್ಲ. ಸ್ಥಳೀಯ ಸದಸ್ಯರು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು. ಇಚ್ಛಾಶಕ್ತಿ ಇದ್ದರೆ ಮಾತ್ರ ಎಲ್ಲವೂ ಸಾಧ್ಯ ಎಂದರು.

ಗ್ರಾಪಂ ಅಧ್ಯಕ್ಷೆ ಲಕ್ಷ್ಮೀದೇವಿ ಜಗನ್ನಾಥ್ ಮಾತನಾಡಿ, ಗ್ರಾಮಗಳು ಉದ್ಧಾರವಾದರೆ ದೇಶ ಉದ್ಧಾರವಾದಂತೆ. ಗ್ರಾಮದ ಪ್ರಗತಿಗೆ ಇಂತಹ ಕಟ್ಟಡಗಳ ಅವಶ್ಯಕತೆಯಿದೆ. ಎಲ್ಲಾ ಸದಸ್ಯರ ಸಹಕಾರದಿಂದ ಸುಮಾರು 80 ಲಕ್ಷ ರು. ಗಳಲ್ಲಿ ಸಾರ್ವ ಜನಿಕರಿಗೆ ಒಂದೇ ಸೂರಿನಡಿ ಶೌಚಾಲಯ ಸೇರಿದಂತೆ ಎಲ್ಲ ಸೌಕರ್ಯ ನಿರ್ಮಾಣ ಮಾಡಲಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಮಾತನಾಡಿ, ಇತ್ತೀಚೆಗೆ ಯುವಕರು ಕೃಷಿಯಿಂದ ದೂರ ಸರಿ ಯುತ್ತಿದ್ದಾರೆ. ಅವರನ್ನು ಮತ್ತೆ ಕೃಷಿಯತ್ತ ಕರೆತರುವುದು ನಮ್ಮೆಲ್ಲರ ಜವಾಬ್ದಾರಿ. ಅಧಿಕಾರ ಶಾಶ್ವತವಲ್ಲ. ಅಧಿಕಾರ ಇದ್ದಾಗ ಜನರಿಗೆ ಏನು ಮಾಡಬೇಕೆಂಬುದನ್ನು ಅರಿತು ಕೆಲಸ ಮಾಡಬೇಕು. ಶಿಕ್ಷಣ ಈ ನಾಡಿನ ಕಟ್ಟಕಡೆಯ ವ್ಯಕ್ತಿಗೂ ಸಿಗಬೇಕು. ಆರೋಗ್ಯ ಮತ್ತು ಶಿಕ್ಷಣ ದುಬಾರಿಯಾಗಬಾರದು ಎಂದರು.

ಈ ಸಂದರ್ಭದಲ್ಲಿ ಇಒ ಪ್ರವೀಣ್, ಟಿಎಂಒ ರವಿಕುಮಾರ್, ಗ್ರಾಪಂನ ಮಾಜಿ ಅಧ್ಯಕ್ಷ ನೀಲೇನಹಳ್ಳಿ ಜಗನ್ನಾಥ್, ಉಪಾಧ್ಯಕ್ಷ ವಿನೂತನ್, ಸದಸ್ಯರಾದ ಮೀನಾಕ್ಷಿ, ನೇತ್ರ, ಚಂದನ್, ಚಂದ್ರಶೇಖರ್,ಸತೀಶ್, ದ್ರಾಕ್ಷಯಾಣಿ, ಗೌರಮ್ಮ, ಜಯಲಕ್ಷ್ಮೀ, ಲಕ್ಷ್ಮೀ, ಶೋಭಾ, ಸುಕನ್ಯಾ, ದೇವರಾಜನಾಯ್ಕ, ನಾಗರಾಜ್ , ಸಾರ್ವಜನಿಕರು ಹಾಜರಿದ್ದರು.

5ಕೆಕೆಡಿಯು2.ಎಸ್

ಬಿದರೆ ಗ್ರಾಮದಲ್ಲಿ ನೂತನ ಕಟ್ಟಡವನ್ನು ಶಾಸಕ ಹೆಚ್. ಡಿ. ತಮ್ಮಯ್ಯ ಲೋಕಾರ್ಪಣೆಗೊಳಿಸಿದರು.