ಬಾಲ್ಯ ವಿವಾಹ, ಜೀತ ಪದ್ಧತಿ, ಮಾನವ ಕಳ್ಳ ಸಾಗಾಣಿಕೆ ಸೇರಿದಂತೆ ಇಂತಹ ಎಲ್ಲ ಅಪರಾಧಗಳಿಗೆ ಕಠಿಣ ಶಿಕ್ಷೆಗಳಿವೆ. ಇಷ್ಟಾಗಿಯೂ ಸಮಾಜದಲ್ಲಿ ಜಾಗೃತಿ ಕೊರತೆಯಿಂದ ದುರ್ಘಟನೆಗಳು ನಡೆಯುತ್ತಿವೆ. ಈ ಬಗ್ಗೆ ವಿವಿಧ ಇಲಾಖೆ ಅಧಿಕಾರಿಗಳು ಸಮಾಜದ ಜನರಿಗೆ ಜಾಗೃತಿ ಮೂಡಿಸಿ ಕೆಟ್ಟ ಪದ್ಧತಿ ನಡೆಯದಂತೆ ನೋಡಿಕೊಳ್ಳಬೇಕಿದೆ ಎಂದು ಇಂಟರ್ ನ್ಯಾಶನಲ್ ಜಸ್ಟೀಸ್ ಮಿಷನ್ ಸದಸ್ಯ ಬೆಂಗಳೂರಿನ ವಿಲಿಯಂ ಕ್ರಿಸ್ಟೋಫರ್ ಹೇಳಿದರು.
ಧಾರವಾಡ:
ಸಮಾಜದಲ್ಲಿ ಜೀತ ಪದ್ಧತಿ ಹಾಗೂ ಮಕ್ಕಳು, ಮಹಿಳೆಯರ ಮಾರಾಟ ಜಾಲ ಜೀವಂತವಿದ್ದು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಇಂತಹ ಅನಿಷ್ಟ ಪದ್ಧತಿಗಳನ್ನು ಸಂಪೂರ್ಣವಾಗಿ ತೊಲಗಿಸಲು ವಿಶೇಷ ಪ್ರಯತ್ನ ಮಾಡಬೇಕು ಎಂದು ಇಂಟರ್ ನ್ಯಾಶನಲ್ ಜಸ್ಟೀಸ್ ಮಿಷನ್ ಸದಸ್ಯ ಬೆಂಗಳೂರಿನ ವಿಲಿಯಂ ಕ್ರಿಸ್ಟೋಫರ್ ಹೇಳಿದರು.ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಜತೆಗೆ ಸಿವಿಲ್ ನ್ಯಾಯಾಲಯಗಳ ಆವರಣದಲ್ಲಿ ಆಯೋಜಿಸಿದ್ದ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ನಡೆದ ತರಬೇತಿಯಲ್ಲಿ ಮಾತನಾಡಿದರು.
ಬಾಲ್ಯ ವಿವಾಹ, ಜೀತ ಪದ್ಧತಿ, ಮಾನವ ಕಳ್ಳ ಸಾಗಾಣಿಕೆ ಸೇರಿದಂತೆ ಇಂತಹ ಎಲ್ಲ ಅಪರಾಧಗಳಿಗೆ ಕಠಿಣ ಶಿಕ್ಷೆಗಳಿವೆ. ಇಷ್ಟಾಗಿಯೂ ಸಮಾಜದಲ್ಲಿ ಜಾಗೃತಿ ಕೊರತೆಯಿಂದ ದುರ್ಘಟನೆಗಳು ನಡೆಯುತ್ತಿವೆ. ಈ ಬಗ್ಗೆ ವಿವಿಧ ಇಲಾಖೆ ಅಧಿಕಾರಿಗಳು ಸಮಾಜದ ಜನರಿಗೆ ಜಾಗೃತಿ ಮೂಡಿಸಿ ಕೆಟ್ಟ ಪದ್ಧತಿ ನಡೆಯದಂತೆ ನೋಡಿಕೊಳ್ಳಬೇಕಿದೆ ಎಂದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಡಾ. ಎಚ್.ಎಚ್. ಕುಕನೂರ ತರಬೇತಿ ಔಚಿತ್ಯದ ಕುರಿತು ಪ್ರಾಸ್ತಾವಿಕ ಮಾತನಾಡಿದರು.ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುನೀತಾ ಪಾಟೀಲ್ ಸ್ವಾಗತಿಸಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಹಮ್ಮದ ಅಲಿ ನಿರೂಪಿಸಿದರು. ಸತೀಶ್ ಭಟ್ ವಂದಿಸಿದರು. ಡಿಡಿಪಿಐ ಎಸ್.ಎಸ್. ಕೆಳದಿಮಠ, ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡ್ರ ಇದ್ದರು.