ಸಾರಾಂಶ
ಕನ್ನಡಪ್ರಭ ವಾರ್ತೆ ಯಾದಗಿರಿ
ಫೆ.23ರಂದು ಬೆಳಗ್ಗೆ 10ಗಂಟೆಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಮಾಜಿ ಸಚಿವ ಲಿಂ.ವಿಶ್ವನಾಥರಡ್ಡಿ ಮುದ್ನಾಳ ಅವರ ಕಂಚಿನ ಪುತ್ಥಳಿ ಅನಾವರಣ ನಗರದ ಮಿನಿ ವಿಧಾನಸೌಧ ಹತ್ತಿರವಿರುವ ಮುದ್ನಾಳ ಕ್ರಾಸ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಶರಣಗೌಡ ಬಾಡಿಯಾಳ ಹೇಳಿದರು.ಸೊಮವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಅಂದು ನಡೆಯುವ ಐತಿಹಾಸಿಕ ಕಾರ್ಯಕ್ರಮದ ಸಾನ್ನಿಧ್ಯವನ್ನು ರಂಭಾಪುರಿ ವೀರ ಸಿಂಹಾಸನಾಧೀಶ್ವರ 1008 ಜಗದ್ಗುರು ಪ್ರಸನ್ನ ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬಾಳೆಹೊನ್ನೂರ ವಹಿಸುವರು.
ಸಮಾರಂಭದ ಸಮ್ಮುಖವನ್ನು ಅಬ್ಬೆತುಮಕೂರಿನ ಡಾ.ಗಂಗಾಧರ ಸ್ವಾಮೀಜಿ, ನಾಲವಾರದ ಸಿದ್ದತೋಟೆಂದ್ರ ಶಿವಾಚಾರ್ಯ ಸ್ವಾಮೀಜಿ, ದೇವಾಪುರದ ಶಿವಮೂರ್ತಿ ಶಿವಚಾರ್ಯ ಸ್ವಾಮೀಜಿ, ದೋರನಹಳ್ಳಿ ಶಿವಲಿಂಗ ರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಗುರುಮಠಕಲ್ ಖಾಸಾ ಮಠದ ಶಾಂತವೀರ ಸ್ವಾಮೀಜಿ, ನೇರಡಗಂ ಪಂಚಮ ಸಿದ್ದಲಿಂಗ ಸ್ವಾಮೀಜಿ, ದಾಸಬಾಳ ಮಠದ ವೀರೇಶ್ವರ ಸ್ವಾಮೀಜಿ, ಸಂಗಮನ ಕರುಣೇಶ್ವರ ಸ್ವಾಮೀಜಿ, ಹೆಡಗಿಮದ್ರಾದ ಶಾಂತಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಏಕದಂಡಗಿ ಮಠದ ಶ್ರೀನಿವಾಸ ಸ್ವಾಮೀಜಿ ಉಪಸ್ಥಿತರಿರುವರು.ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಹಾಗೂ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಜ್ಯೋತಿ ಬೆಳಗಿಸುವರು. ಗೌರವ ಅತಿಥಿಗಳಾಗಿ ಮಾಜಿ ಸಚಿವ ಭೀಮಣ್ಣ ಖಂಡ್ರೆ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ ಎನ್. ತಿಪ್ಪಣ್ಣ, ಬೆಂಗಳೂರು ಕೇಂದ್ರ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ರಾಯಚೂರ ಸಂಸದ ರಾಜಾ ಅಮರೇಶ್ವರ ನಾಯಕ, ಕಲಬುರಗಿ ಸಂಸದ ಡಾ. ಉಮೇಶ ಜಾಧವ ಸೇರಿ ಇನ್ನಿತರೆ ಶಾಸಕರು ಹಾಗೂ ಗಣ್ಯರು ಭಾಗವಹಿಸುವರು ಎಂದು ತಿಳಿಸಿದರು.
ಈಗಾಗಲೇ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳು ಸೇರಿ ಪ್ರಮುಖರಿಗೆ ಆಮಂತ್ರಣ ಪತ್ರಿಕೆ ಕಳುಹಿಸಲಾಗಿದೆ. ಕಾರ್ಯಕ್ರಮಕ್ಕೆ ಅಂದಾಜು 10 ಸಾವಿರ ಜನ ಸೇರಲಿದ್ದಾರೆ ಎಂದು ತಿಳಿಸಿದರು.ಬಿಜೆಪಿ ಯುವ ಮುಖಂಡರಾದ ಮಹೇಶರಡ್ಡಿಗೌಡ ಮುದ್ನಾಳ, ಜಿಪಂ ಮಾಜಿ ಸದಸ್ಯರಾದ ಖಂಡಪ್ಪ ದಾಸನ್, ಸಿದ್ದಣಗೌಡ ಕಾಡಂನೋರ, ಜಿಲ್ಲಾ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಸೋಮಶೇಖರ ಮಣ್ಣೂರ, ಯುಡಾ ಮಾಜಿ ಅಧ್ಯಕ್ಷರಾದ ಮೋಹನ ಬಾಬು, ಬಸವರಾಜ್ ಚಂಡ್ರೀಕಿ, ಅಯ್ಯಣ್ಣ ಹುಂಡೆಕಾರ, ನಾಗಪ್ಪ ಬೆನಕಲ್, ವಿರುಪಾಕ್ಷಯ್ಯಸ್ವಾಮಿ ಹೆಡಗಿಮದ್ರ ಇದ್ದರು.