ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಲಯನ್ಸ್ ಕ್ಲಬ್ ಆಫ್ ಪ್ರೆಂಚ್‌ರಾಕ್ಸ್ ಸಂಸ್ಥೆಯಿಂದ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ 61ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆ, ಲಯನ್ ಕ್ಲಬ್ ಆಫ್ ಬೆಂಗಳೂರು, ಡಾ.ಎಚ್.ಆರ್.ಚಂದ್ರಶೇಖರ್ ವಾಕ್ ಮತ್ತು ಶ್ರವಣ ಸಂಸ್ಥೆ ಹೆಣ್ಣೂರು, ಲಯನ್ಸ್ ಕ್ಲಬ್ ಆಫ್ ಫ್ರೆಂಚ್‌ರಾಕ್ಸ್ ಪಾಂಡವಪುರ, ನಯನಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮೈಸೂರು, ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮೈಸೂರು ಸಹಯೋಗದಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರಕ್ಕೆ ಡೇರಿ ಅಧ್ಯಕ್ಷ ಸಿ.ಶಿವಕುಮಾರ್, ತಾಪಂ ಮಾಜಿ ಸದಸ್ಯ ಸಿ.ಎಸ್.ಗೋಪಾಲಗೌಡ ಚಾಲನೆ ನೀಡಿದರು.
ಶಿಬಿರದಲ್ಲಿ ವಾಕ್ ಮತ್ತು ಶ್ರವಣ ದೋಷ, ಬಿಸಿ, ಶುಗರ್, ಕೀಲು, ಮೂಳೆ, ಸ್ತ್ರೀರೋಗ, ಕಣ್ಣಿನ ತಪಾಸಣೆ ಹಾಗೂ ನಾರಾಯನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಿಂದ ಇಸಿಜಿ, ಎಕೋ, ಬ್ರೆಸ್ಟ್ ಕ್ಯಾನ್ಸರ್, ರಿಜನಲ್ ಕ್ಯಾನ್ಸರ್ ಸೇರಿದಂತ ವಿವಿಧ ಸಾಮಾನ್ಯ ತಪಾಸಣೆಗಳನ್ನು ನಡೆಸಿದರು.ಶಿಬಿರದಲ್ಲಿ ಚಿನಕುರಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಮಹಿಳೆಯರು, ಸಾರ್ವಜನಿಕರು ಭಾಗವಹಿಸಿ ತಪಾಸಣೆ ಮಾಡಿಸಿಕೊಂಡರು.
ಟಿಎಪಿಸಿಎಂಎಸ್ ನಿರ್ದೇಶಕ ರಾಮಕೃಷ್ಣೇಗೌಡ ಮಾತನಾಡಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಜನ್ಮ ದಿನದ ಅಂಗವಾಗಿ ಆಯೋಜಿಸಿರುವ ಉಚಿತ ಬೃಹತ್ ಆರೋಗ್ಯ ತಪಾಸಣೆ ಶಿಬಿರದಲ್ಲಿ ತಜ್ಞ ವೈದ್ಯರು ಸಾರ್ವಜನಿಕ ಆರೋಗ್ಯ ತಪಾಸಣೆ ನಡೆಸಿದ್ದಾರೆ ಎಂದರು.ಸಂಘ-ಸಂಸ್ಥೆಗಳು ನಡೆಸುವ ಇಂತಹ ಆರೋಗ್ಯ ತಪಾಸಣೆ ಶಿಬಿರಗಳನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರಿಗೆ ತಾಯಿ ಚಾಮುಂಡೇಶ್ವರಿ ಆಯಸ್ಸು, ಆರೋಗ್ಯ, ಅಧಿಕಾರಿಕೊಟ್ಟು ಸಮಾಜದಲ್ಲಿ ಇನ್ನಷ್ಟು ಸಮಾಜಸೇವೆ ಮಾಡುವ ಶಕ್ತಿ ನೀಡಲೆಂದು ಆರೈಸುತ್ತೇವೆ ಎಂದರು.
ಈ ವೇಳೆ ಜಿಪಂ ಮಾಜಿ ಸದಸ್ಯ ಸಿ.ಅಶೋಕ್, ತಾಪಂ ಮಾಜಿ ಸದಸ್ಯ ಸಿ.ಎಸ್.ಗೋಪಾಲಗೌಡ, ಡೇರಿ ಅಧ್ಯಕ್ಷ ಸಿ.ಶಿವಕುಮಾರ್, ಉಪಾಧ್ಯಕ್ಷ ಸಿ.ಆರ್.ರಮೇಶ್, ಲಯನ್ಸ್ ಅಧ್ಯಕ್ಷ ಕರೀಗೌಡ, ಕಾರ್‍ಯದರ್ಶಿ ಪುಟ್ಟಬಸವೇಗೌಡ, ಖಜಾಂಚಿ ಡಾ.ಕೆ.ಆರ್.ಸ್ವಾಮೀಗೌಡ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಸಿ.ಪ್ರಕಾಶ್,ವಿಎಸ್‌ಎಸ್‌ಎನ್‌ಬಿ ಅಧ್ಯಕ್ಷ ಮಂಜುನಾಥ್, ನಿರ್ದೇಶಕ ಮೊಗ್ಗಣ್ಣಗೌಡ, ಗ್ರಾಪಂ ಅಧ್ಯಕ್ಷೆ ಗಾಯಿತ್ರಿ, ಮಾಜಿ ಅಧ್ಯಕ್ಷರಾದ ಇಮ್ತಿಯಾಜ್ ಪಾಷ, ಕಾಳೇಗೌಡ, ಸದಸ್ಯ ಸಿ.ಎ.ಲೋಕೇಶ್, ಮಾಜಿ ಸದಸ್ಯ ಸಿ.ಡಿ.ಮಹದೇವು ಸೇರಿದಂತೆ ಹಲವರು ಹಾಜರಿದ್ದರು.