ಮಾಜಿ ಶಾಸಕ ಜಯಣ್ಣ, ಮರಿಸ್ವಾಮಿಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

| Published : Mar 01 2024, 02:19 AM IST

ಮಾಜಿ ಶಾಸಕ ಜಯಣ್ಣ, ಮರಿಸ್ವಾಮಿಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
Share this Article
  • FB
  • TW
  • Linkdin
  • Email

ಸಾರಾಂಶ

ಕೊಳ್ಳೇಗಾಲ ಮೀಸಲು ಕ್ಷೇತ್ರದ ಮಾಜಿ ಶಾಸಕ ಎಸ್‌. ಜಯಣ್ಣ ಅವರಿಗೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಮತ್ತು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿಗೆ ಕಾವೇರಿ ಜಲಾನಯನ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಒಲಿದಿದೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರಕೊಳ್ಳೇಗಾಲ ಮೀಸಲು ಕ್ಷೇತ್ರದ ಮಾಜಿ ಶಾಸಕ ಎಸ್‌. ಜಯಣ್ಣ ಅವರಿಗೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಮತ್ತು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿಗೆ ಕಾವೇರಿ ಜಲಾನಯನ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಒಲಿದಿದೆ.ಕಾಂಗ್ರೆಸ್‌ ಸರ್ಕಾರದ ನಿಷ್ಠಾವಂತರಾದ ಇವರಿಗೆ 2018ರ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೇ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಸಿಗಬೇಕಿತ್ತು, ಸರ್ಕಾರ ನಿಗಮ ಮಂಡಳಿಗೆ ನೇಮಕ ಮಾಡಲು ವಿಳಂಬ ಮಾಡಿದ ಪರಿಣಾಮ ಐದು ವರ್ಷಗಳ ಬ‍ಳಿಕ ನಿಗಮ ಸ್ಥಾನ ಒಲಿದು ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟಾ ಬೆಂಬಲಿಗ ಎಸ್‌. ಜಯಣ್ಣ 1994ರಲ್ಲಿ ಮೊದಲ ಬಾರಿಗೆ ಕೊಳ್ಳೇಗಾಲ ಕ್ಷೇತ್ರದಿಂದ ಜನತಾದಳದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ 1999 ಮತ್ತು 2004, 2009ರಲ್ಲಿ ಸೋಲು ಅನುಭವಿಸಿದ್ದ ಅವರು 2013ರಲ್ಲಿ 20 ವರ್ಷಗಳ ಬ‍ಳಿಕ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ 2018 ಮತ್ತು 2013ರಲ್ಲಿ ಕಾಂಗ್ರೆಸ್‌ ಟಿಕೆಟ್ ಕೈ ತಪ್ಪಿ ಹೋಗಿತ್ತು. ಸರ್ಕಾರ ಅಧಿಕಾರಕ್ಕೆ ಬಂದರೆ ನಿಗಮ ಮಂಡಳಿ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಲಾಗಿತ್ತು. ಅಂತೆ ಇದೀಗ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಸ್ಥಾನ ಸಿಕ್ಕಿದೆ.ಡಿಸಿಸಿ ಅಧ್ಯಕ್ಷರಿಗೆ ಒಲಿದ ಕಾಡಾ ಅಧ್ಯಕ್ಷಗಿರಿ: ಜಿಪಂ ಮಾಜಿ ಸದಸ್ಯ ಹಾಗೂ ಎರಡು ಅವಧಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಪಿ. ಮರಿಸ್ವಾಮಿಗೆ ಕಾವೇರಿ ಜಲಾನಯನ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಒಲಿದಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಕ್ರಿಯ ಹಾಗೂ ನಿಷ್ಟಾವಂತರಾಗಿ ಪಕ್ಷದ ಸಂಘಟನೆ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ತಮ್ಮದೇ ಅದ ಸೇವೆ ಸಲ್ಲಿಸುತ್ತಿದ್ದು, ಅವರ ಸೇವೆಯನ್ನು ಗುರುತಿಸಿ ರಾಜ್ಯ ವರಿಷ್ಠರು ಅವಕಾಶ ಕಲ್ಪಿಸಿದ್ದಾರೆ. ನೂತನ ಕಾಡಾ ಅಧ್ಯಕ್ಷರಾಗಿ ಮಾ. ೪ ರ ಸೋಮವಾರ ಮೈಸೂರಿನ ಕಾಡಾ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸುವುದಾಗಿ ಪಿ. ಮರಿಸ್ವಾಮಿ ತಿಳಿಸಿದ್ದಾರೆ. ಕಾವೇರಿ ಅಚ್ಚುಕಟ್ಟು ವ್ಯಾಪ್ತಿಯಲ್ಲಿರುವ ರೈತರ ಅಭಿವೃದ್ಧಿಗಾಗಿ ಹೆಚ್ಚಿನ ಒತ್ತು ಹಾಗೂ ಜಿಲ್ಲೆಯಲ್ಲಿರುವ ಕೆರೆಗಳ ಅಭಿವೃದ್ದಿ ಮತ್ತು ನಾಲೆ ಹಾಗು ಸಂಪರ್ಕ ರಸ್ತೆಗಳ ಅಭಿವೃದ್ದಿಪಡಿಸಿ, ಸರ್ಕಾರ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲು ಶ್ರಮಿಸುತ್ತೇನೆ.ಪಿ. ಮರಿಸ್ವಾಮಿ, ನೂತನ ಕಾಡಾ ಅಧ್ಯಕ್ಷ

ಕೈ ತಪ್ಪಿದ ನಿಗಮ ಮಂಡಳಿ; ನಂಜಪ್ಪಗೆ ನಿರಾಸೆಗುಂಡ್ಲುಪೇಟೆರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ಥಿತ್ವಕ್ಕೆ ಬಂದ ಬಳಿಕ ಮೊದಲಿಗೆ ಹಲವು ಶಾಸಕರಿಗೆ ನಿಗಮ ಮಂಡಳಿ ಹಂಚಿದ ನಂತರ ಕಾಂಗ್ರೆಸ್‌ ಪಕ್ಷದ ಮುಖಂಡರಿಗೆ ನಿಗಮ, ಮಂಡಳಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕಗೊಳಿಸಿದ ಪಟ್ಟಿಯಲ್ಲಿ ಕ್ಷೇತ್ರದ ಹಿರಿಯ ಕಾಂಗ್ರೆಸ್‌ ಮುಖಂಡರಾದ ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ ಹೆಸರು ಇಲ್ಲದಂತಾಗಿದೆ ಇದರಿಂದ ಸಹಜವಾಗಿಯೇ ಎಚ್.ಎಸ್.ನಂಜಪ್ಪಗೆ ನಿರಾಶೆಯಾಗಿದೆಕಳೆದ ವಿಧಾನ ಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ ಮುಖಂಡ ಎಚ್.ಎಸ್.ನಂಜಪ್ಪ ಗುಂಡ್ಲುಪೇಟೆ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಪಕ್ಷದ ಹೈ ಕಮಾಂಡ್‌ ಕಾಂಗ್ರೆಸ್‌ ಯುವ ಮುಖಂಡ ಎಚ್.ಎಂ.ಗಣೇಶ್‌ ಪ್ರಸಾದ್‌ಗೆ ಟಿಕೆಟ್‌ ನೀಡಿತು.ಈ ವೇಳೆ ಕಾಂಗ್ರೆಸ್‌ ಮುಖಂಡ ಎಚ್.ಎಸ್.ನಂಜಪ್ಪ ಅವರಿಗೆ ರಾಜ್ಯದಲ್ಲಿ ಸರ್ಕಾರ ಬಂದರೆ ನಿಗಮ,ಮಂಡಳಿ ಹುದ್ದೆ ನೀಡುವುದಾಗಿ ಕಾಂಗ್ರೆಸ್‌ ಹೈ ಕಮಾಂಡ್‌ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಭರವಸೆ ನೀಡಿದ್ದರು ಎಂಬುದು ಕಾಂಗ್ರೆಸ್‌ ಮುಖಂಡ ಎಚ್.ಎಸ್.ನಂಜಪ್ಪ ಅವರ ಮಾತಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರ ನಿರೀಕ್ಷೆಯಂತೆಯೇ ಅಧಿಕಾರಕ್ಕೆ ಬಂತು. ಗುಂಡ್ಲುಪೇಟೆ ಕ್ಷೇತ್ರದಲ್ಲಿ ಎಚ್.ಎಂ. ಗಣೇಶ್‌ ಪ್ರಸಾದ್‌ ನಿರೀಕ್ಷೆಗೂ ಮೀರಿ ಗೆಲುವು ಸಾಧಿಸಿದರು.ರಾಜ್ಯ ಸರ್ಕಾರ ಬಂದು ಆರೇಳು ತಿಂಗಳ ಬಳಿಕ ಶಾಸಕರಿಗೆ ನಿಗಮ, ಮಂಡಳಿ ಹುದ್ದೆ ನೀಡಿದ ನಂತರ ಬುಧವಾರ ರಾತ್ರಿ ಕಾಂಗ್ರೆಸ್‌ ಮುಖಂಡರಿಗೆ ನಿಗಮ, ಮಂಡಳಿ ಹುದ್ದೆ ನೀಡಲಾಗಿದೆ.ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ ಎಸ್. ಜಯಣ್ಣ, ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿಗೆ ನಿಗಮಕ್ಕೆ ನೇಮಕವಾಗಿದ್ದಾರೆ. ಕ್ಷೇತ್ರದ ಕಾಂಗ್ರೆಸ್‌ ಹಿರಿಯ ಮುಖಂಡ ಎಚ್.ಎಸ್.ನಂಜಪ್ಪಗೆ ನಿಗಮ, ಮಂಡಳಿಗಳಲ್ಲಿ ಅವಕಾಶ ಕೈ ತಪ್ಪಿದಕ್ಕೆ ನಿಗಮ, ಮಂಡಳಿಯ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ಎಚ್.ಎಸ್.ನಂಜಪ್ಪಗೆ ನಿರಾಸೆಯಾದರೆ, ಅವರ ಬೆಂಬಲಿಗರಿಗೆ ತೀವ್ರ ಬೇಸರವಾಗಿದೆ.ಸಿದ್ದರಾಮಯ್ಯ ವಿಧಾನಸಭಾ ಚುನಾವಣೆ ಪೂರ್ವ ಗುಂಡ್ಲುಪೇಟೆ ಕ್ಷೇತ್ರದ ಕಾಂಗ್ರೆಸ್‌ ಹಿರಿಯ ಮುಖಂಡ ಎಚ್.ಎಸ್.ನಂಜಪ್ಪಗೆ ನೀಡಿದ್ದ ಭರವಸೆಯಂತೆ ನಿಗಮ,ಮಂಡಳಿಯಲ್ಲಿ ಸ್ಥಾನ ನೀಡಬೇಕು ಎಂಬುದು ನಂಜಪ್ಪ ಅವರ ಬೆಂಬಲಿಗರ ಆಶಯವಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ನಂಬಿಕೆ ನನಗಂತು ಇದೆ. ಬುಧವಾರ ರಾತ್ರಿ ಪ್ರಕಟವಾದ ಪಟ್ಟಿಯಲ್ಲಿ ನನ್ನ ಹೆಸರು ಇಲ್ಲ.ಈ ಸಂಬಂಧ ಮುಖ್ಯಮಂತ್ರಿಗಳನ್ನು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ರೊಂದಿಗೆ ತೆರಳಿ ಭೇಟಿ ಮಾಡಿ ನಿಗಮ,ಮಂಡಳಿ ಸ್ಥಾನ ನೀಡುವಂತೆ ಕೋರಲಾಗುವುದು. ಎಚ್.ಎಸ್.ನಂಜಪ್ಪ,ಕಾಂಗ್ರೆಸ್‌ ಹಿರಿಯ ಮುಖಂಡ