ಸಾರಾಂಶ
ಚನ್ನಪಟ್ಟಣ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ಕೆಂಗಲ್ ಬಳಿಯ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯ ಶಾಲೆಯಲ್ಲಿ ಪರೀಕ್ಷಾ ಪೇ ಚರ್ಚಾ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.
ಚನ್ನಪಟ್ಟಣ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ಕೆಂಗಲ್ ಬಳಿಯ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯ ಶಾಲೆಯಲ್ಲಿ ಪರೀಕ್ಷಾ ಪೇ ಚರ್ಚಾ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.
ಕೇಂದ್ರೀಯ ವಿದ್ಯಾಲಯ ಸಮಿತಿ , ಕೇಂದ್ರ ಶಿಕ್ಷಣ ಸಚಿವಾಲಯದ ನಿರ್ದೇಶನದಂತೆ ಪರೀಕ್ಷೆಗೆ ಸಂಬಂಧಿಸಿದ ಒತ್ತಡವನ್ನು ಕಡಿಮೆ ಮಾಡುವ ಕುರಿತು ಚಂದ್ರಯಾನ, ಭಾರತದ ಕ್ರೀಡಾ ಯಶಸ್ಸು, ವಿಕಾಸ್ ಭಾರತ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಆದಿತ್ಯ ಎಂಬ ೫ ವಿಭಿನ್ನ ಅಂಶಗಳ ಕುರಿತು ೯ರಿಂದ ೧೨ನೇ ತರಗತಿಯ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಕೇಂದ್ರೀಯ ವಿದ್ಯಾಲಯ, ಜವಾಹರ್ ನವೋದಯ ವಿದ್ಯಾಲಯ, ಸಿಬಿಎಸ್‌ಸಿ ಪಠ್ಯಕ್ರಮದ ಶಾಲೆಗಳು ಮತ್ತು ರಾಜ್ಯ ಪಠ್ಯಕ್ರಮದ ೭೦ಕ್ಕೂ ಹೆಚ್ಚು ಶಾಲೆಗಳ ವಿದ್ಯಾರ್ಥಿಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ವಿವಿಧ ಕಾನ್ಸೆಪ್ಟ್‌ನಲ್ಲಿ ಪೇಂಟಿಂಗ್ ಮಾಡಿದ್ದ ಅತ್ಯುತ್ತಮ ಐವರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಬಹುಮಾನ, ಪ್ರಮಾಣ ಪತ್ರ ಹಾಗೂ ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟಗಾರರ ಪುಸ್ತಕಗಳನ್ನು ನೀಡಿ ಗೌರವಿಸಲಾಯಿತು. ಉಳಿದವರಿಗೆ ಡಿಜಿಟಲ್ ಪ್ರಮಾಣಪತ್ರ ವಿತರಿಸಲಾಯಿತು.ತೀರ್ಪುಗಾರರಾಗಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕುಸುಮಲತಾ, ಬಿಇಒ ಕಚೇರಿ ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ, ಅವ್ವೇರಳ್ಳಿ ಕರ್ನಾಟಕ ಪಬ್ಲಿಕ್ ಶಾಲೆ ಚಿತ್ರಕಲಾ ಶಿಕ್ಷಕ ಪೂರ್ಣಾನಂದ ಭಾಗವಹಿಸಿದ್ದರು. ಪ್ರಾಂಶುಪಾಲ ಮಹೇಶ್ ಕುಮಾರ್, ಶಿಕ್ಷಕರಾದ ಸುಮಾಲಿನಿ, ಜಲಜಾ, ಸುನಂದ, ಶೃಂಗ, ಪ್ರತಿಭಾ, ಶಾಶ್ವತ, ಅಮಿತ್ , ಇಂದು, ಅಜೀಜಾ, ನವೀದ್, ಯಶಸ್ವಿನಿ ಸೇರಿದಂತೆ ಹಲವರು ಉಪಸಿತರಿದ್ದರು.ಪೊಟೊ೨೫ಸಿಪಿಟಿ೨:
ಚನ್ನಪಟ್ಟಣದ ಕೆಂಗಲ್ ಬಳಿಯ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯ ಶಾಲೆಯಲ್ಲಿ ಪರೀಕ್ಷಾ ಪೇ ಚರ್ಚಾ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು.