ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಸಿದ್ಧತಾ ಮಾರ್ಗದರ್ಶನ

| Published : Sep 22 2024, 01:57 AM IST

ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಸಿದ್ಧತಾ ಮಾರ್ಗದರ್ಶನ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರೌಢಶಾಲಾ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತಾ ಮಾರ್ಗದರ್ಶನವನ್ನು ಹಮ್ಮಿಕೊಳ್ಳಲಾಯಿತು. ಉಪನ್ಯಾಸಕರಾದ ಕವಿತಾ ಮಾರ್ಗದರ್ಶನ ನೀಡಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಕೊಡಗು ಗೌಡ ಸಮಾಜ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಓಜಶ್ವಿ ಫೌಂಡೇಶನ್ ವತಿಯಿಂದ ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತಾ ಮಾರ್ಗದರ್ಶನವನ್ನು ಶನಿವಾರ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಸಿಐಟಿ ಪೊನ್ನಂಪೇಟೆ ಉಪನ್ಯಾಸಕರಾದ ಕವಿತಾ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಸಮಯ ಪಾಲನೆ ಶಿಸ್ತು ಮತ್ತು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ನಂತರ ತಮ್ಮ ಭವಿಷ್ಯವನ್ನು ಹೇಗೆ ರೂಪಿಸಿಕೊಳ್ಳಬಹುದು ಎಂಬುದರ ಬಗ್ಗೆ (ಪ್ರೊಜೆಕ್ಟರ್) ಕಿರುತೆರೆ ಮೂಲಕ ಮನಮುಟ್ಟುವಂತೆ ಸಮಗ್ರ ಮಾಹಿತಿಯನ್ನು ನೀಡಿದರು.

ಅರುಣಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾದ ಡಿ.ಎಸ್. ರಾಮಕೃಷ್ಣ ಅಧ್ಯಕ್ಷತೆಯನ್ನು ವಹಿಸಿದ್ದ ಕಾರ್ಯಕ್ರಮದಲ್ಲಿ ಶೆಟ್ಟೆ ಜನ ಬ್ರಿಜೇಶ್, ವಿದ್ಯಾ ಸಂಸ್ಥೆಯ ಉಪನ್ಯಾಸಕರಾದ ಚನ್ನಬಸಪ್ಪ, ದಾಮೋದರ್ ನಾಯಕ್ ಮತ್ತು ಶಿಕ್ಷಕರಾದ ಪರಮೇಶ್ ಮತ್ತು ಸಿಬ್ಬಂದಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.