ಎಕ್ಸಲಂಟ್‌ಗೆ 100 ಎಂಬಿಬಿಎಸ್ ಸೇರಿ 182 ಮೆಡಿಕಲ್ ಸೀಟು

| Published : Oct 07 2025, 01:03 AM IST

ಎಕ್ಸಲಂಟ್‌ಗೆ 100 ಎಂಬಿಬಿಎಸ್ ಸೇರಿ 182 ಮೆಡಿಕಲ್ ಸೀಟು
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ 2025ರ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ನೀರಿಕ್ಷೆಯಂತೆ ವಿಜಯಪುರದ ಪ್ರತಿಷ್ಠಿತ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆ ಕಳೆದ ಬಾರಿಗಿಂತಲೂ ಹೆಚ್ಚಿನ ಸೀಟುಗಳನ್ನು ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ತನ್ನ ಹೆಜ್ಜೆ ಗುರುತು ಉಳಿಸಿಕೊಂಡು ಸಾಗಿದೆ. ಕಳೆದ ಬಾರಿಗಿಂತ ಈ ಬಾರಿಯ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಕಠಿಣವಾಗಿತ್ತು ಎಂಬುದು ವಿದ್ಯಾರ್ಥಿಗಳ ಅಭಿಮತವಾಗಿತ್ತು.

ಕನ್ನಡಪ್ರಭ ವಾರ್ತೆ ವಿಜಯಪುರ

2025ರ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ನೀರಿಕ್ಷೆಯಂತೆ ವಿಜಯಪುರದ ಪ್ರತಿಷ್ಠಿತ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆ ಕಳೆದ ಬಾರಿಗಿಂತಲೂ ಹೆಚ್ಚಿನ ಸೀಟುಗಳನ್ನು ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ತನ್ನ ಹೆಜ್ಜೆ ಗುರುತು ಉಳಿಸಿಕೊಂಡು ಸಾಗಿದೆ. ಕಳೆದ ಬಾರಿಗಿಂತ ಈ ಬಾರಿಯ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಕಠಿಣವಾಗಿತ್ತು ಎಂಬುದು ವಿದ್ಯಾರ್ಥಿಗಳ ಅಭಿಮತವಾಗಿತ್ತು. ಅಂತಹ ಪರೀಕ್ಷೆಯನ್ನು ಯಶಸ್ವಿಯಾಗಿ ನಿಭಾಯಿಸಿದ ಎಕ್ಸಲಂಟ್ ವಿದ್ಯಾರ್ಥಿಗಳು 100 ಎಂಬಿಬಿಎಸ್ ಸೇರಿದಂತೆ ಒಟ್ಟು 182 ಸೀಟುಗಳನ್ನು ಪಡೆದುಕೊಳ್ಳುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದೆ. ಸರ್ಕಾರಿ ಕೋಟಾದಡಿಯಲ್ಲಿ 100 ಎಂಬಿಬಿಎಸ್ ಸೀಟುಗಳನ್ನು ಪಡೆದರೆ 10 ಬಿಡಿಎಸ್ ಹಾಗೂ 72 ಬಿಎಎಂಎಸ್ ಹಾಗೂ ಬಿಹೆಚ್‌ಎಂಎಸ್ ಸೀಟುಗಳನ್ನು ಪಡೆಯುವಲ್ಲಿ ವಿದ್ಯಾರ್ಥಿಗಳು ಯಶಸ್ವಿಯಾಗಿದೆ. ಈ ಮೂಲಕ ವೈದ್ಯರಾಗಬೇಕೆನ್ನುವ ತಮ್ಮ ಕನಸನ್ನು ಈಡೇರಿಸಿಕೊಳ್ಳುವುದರೊಂದಿಗೆ ಮಹಾವಿದ್ಯಾಲಯದ ಹಿರಿಮೆಯನ್ನು ಹೆಚ್ಚಿಸಿದ್ದಾರೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಚೇರ್‌ಮನ್‌ರಾದ ಬಸವರಾಜ ಕೌಲಗಿ, ಉತ್ತರ ಕರ್ನಾಟಕ ಭಾಗದಲ್ಲಿ ಅತ್ಯುತ್ತಮವಾದ ಶಿಕ್ಷಣವನ್ನು ನೀಡುವ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಎನ್ನುವ ಉದ್ಧೇಶದಿಂದ ಪ್ರಾರಂಭಗೊಂಡ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳು ತಾನಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಾಧಿಸಿದೆ. ಹೆಸರಿಗೆ ತಕ್ಕಂತ ಸೇವೆಯನ್ನು ಎಕ್ಸಲಂಟ್‌ ಸಂಸ್ಥೆ ನೀಡುತ್ತಿದ್ದು, ಪಾಲಕರು ಇಟ್ಟ ನಿರೀಕ್ಷೆಯಂತೆ ಉತ್ತಮ ಫಲಿತಾಂಶ ನೀಡಿ 182 ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು ದೊರಕಿದೆ. ಇಷ್ಟು ಸೀಟುಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

ಪ್ರಾಚಾರ್ಯ ಶ್ರೀಕಾಂತ.ಕೆ.ಎಸ್ ಈ ಸಾಧನೆಯ ಶ್ರೇಯ ಆಡಳಿತ ಮಂಡಳಿ ಹಾಗೂ ಎಲ್ಲ ಬೋಧಕ ಬೋಧಕೇತರ ವರ್ಗಕ್ಕೆ ಸಲ್ಲಬೇಕು ಎಂದು ಹೇಳಿದರು. ಮಕ್ಕಳ ಈ ಸಾಧನೆಗೆ ಆಡಳಿತ ಮಂಡಳಿಯ ಸದಸ್ಯರು, ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದನೆಗಳನ್ನು ಸಲ್ಲಿಸಿದರು.