ಚಿತ್ರದುರ್ಗದಲ್ಲಿ ಈಚೆಗೆ ನಡೆದ 8ನೇ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಶಿವಮೊಗ್ಗ ವಿನೋಬನಗರದ ನೇಹಾ ಅಬಾಕಸ್ - ವೇದಿಕ್ ಮ್ಯಾಥ್ಸ್ ಮತ್ತು ಹ್ಯಾಂಡ್ ರೈಟಿಂಗ್ ಸೆಂಟರ್‌ನ 23 ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಬಹುಮಾನಗಳನ್ನು ಪಡೆದು ಶಿವಮೊಗ್ಗ ಜಿಲ್ಲೆಯ ಗೌರವಕ್ಕೆ ಪಾತ್ರರಾಗಿದ್ದಾರೆ.

ಸಾಗರ: ಜೀವನೋಪಾಯಕ್ಕಾಗಿ ಸಾಕಿದ್ದ ಆರು ಕುರಿಗಳನ್ನು ಬೀದಿ ನಾಯಿಗಳು ದಾಳಿ ನಡೆಸಿ ಕೊಂದು ಹಾಕಿರುವ ದಾರುಣ ಘಟನೆ ಪಟ್ಟಣದ ನೆಹರೂನಗರದಲ್ಲಿ ನಡೆದಿದೆ. ನೆಹರೂ ನಗರದ ನಿವಾಸಿ ಮನ್ಸೂರ್ ಅಲಿ ಖಾನ್ ಅವರಿಗೆ ಸೇರಿದ ಕುರಿಗಳ ಮೇಲೆ ತಡರಾತ್ರಿ ಬೀದಿ ನಾಯಿಗಳು ದಾಳಿ ನಡೆಸಿವೆ ಎನ್ನಲಾಗಿದೆ. ಬೆಳಗ್ಗೆ ಕುರಿಗಳಿಗೆ ಮೇವು ಹಾಕಲು ತೆರಳಿದಾಗ ಆರು ಕುರಿಗಳು ರಕ್ತದ ಮಡುವಿನಲ್ಲಿ ಮೃತಪಟ್ಟಿರುವುದು ಕಂಡುಬAದಿದ್ದು, ಮಾಲೀಕರು ಕಣ್ಣೀರಿಟ್ಟಿದ್ದಾರೆ. ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ದ್ವಿಚಕ್ರ ವಾಹನ ಸವಾರರ ಮೇಲೆ ಬೀದಿ ನಾಯಿಗಳು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.