ಸಾರಾಂಶ
ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣಪಿರಿಯಾಪಟ್ಟಣ ಕ.ರಾ.ಸ. ನೌಕರರ ಸಂಘಕ್ಕೆ ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ತಾಲೂಕು ಘಟಕದ ಕಾರ್ಯಕಾರಿ ಮಂಡಳಿ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಪ್ರಮಾಣ ಪತ್ರ ವಿತರಿಸಲಾಯಿತು.ಸಂಘದ ತಾಲೂಕು ಘಟಕದ ಅಧ್ಯಕ್ಷ ಕೆ. ಹೊಸಳ್ಳಿ ಕೃಷ್ಣೇಗೌಡ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕಾರ್ಯಕಾರಿ ಮಂಡಳಿಯನ್ನು ಆಯ್ಕೆ ಮಾಡಿ ಪ್ರಮಾಣ ಪತ್ರ ನೀಡಲಾಯಿತು.ಗೌರವಾಧ್ಯಕ್ಷರಾಗಿ ಸೋಮಶೇಖರ್, ಹಿರಿಯ ಉಪಾಧ್ಯಕ್ಷರಾಗಿ ಕೆ.ಆರ್. ಪ್ರಕಾಶ್, ಹಿರಿಯ ಉಪಾಧ್ಯಕ್ಷರಾಗಿ ಆರ್. ರಮೇಶ್, ಉಪಾಧ್ಯಕ್ಷರಾಗಿ ಸಿ.ಕೆ. ಮಹೇಶ್, ಬಿ.ಎಲ್. ಉಷಾ, ಪ್ರಸಾದ್, ಜಂಟಿ ಕಾರ್ಯದರ್ಶಿಯಾಗಿ ಎನ್. ವಿಶ್ವನಾಥ್, ಜೆ. ಬಸವರಾಜ್, ಸಂಘಟನಾ ಕಾರ್ಯದರ್ಶಿಯಾಗಿ ಕೆ.ಎಲ್. ರಾಜೇಶ್, ಸಂಘಟನಾ ಕಾರ್ಯದರ್ಶಿಯಾಗಿ ಎಸ್.ಬಿ. ರವಿಚಂದ್ರ, ಸಂಘಟನಾ ಕಾರ್ಯದರ್ಶಿಯಾಗಿ ಶ್ರೀನಿವಾಸ್ ಮೂರ್ತಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಡಿ. ಗಿರೀಶ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕೆ.ಎಸ್. ಮಂಜುನಾಥ್, ಕ್ರೀಡಾ ಕಾರ್ಯದರ್ಶಿಯಾಗಿ ಪಿ.ಎನ್. ರವಿಕುಮಾರ್, ಕ್ರೀಡಾ ಕಾರ್ಯದರ್ಶಿಯಾಗಿ ರಮೇಶ್, ಆಂತರಿಕ ಲೆಕ್ಕ ಪರಿಶೋಧಕರಾಗಿ ಕೆ.ಎ. ರಾಜೇಶ್ ಪದಗ್ರಹಣ ಮಾಡಿದರು.ಬಳಿಕ ಎಸ್.ಬಿ. ಪುಟ್ಟರಾಜು, ಸಿ.ಎನ್. ರಾಜು, ಎಂ.ಟಿ. ಶಿವಕುಮಾರ್, ಸಿ.ಜೆ. ಸಂತೋಷ್ ಅವರನ್ನು ನಾಮನಿರ್ದೇಶಕ ಸದಸ್ಯರನ್ನಾಗಿ ಆಯ್ಕೆಗೊಳಿಸಲಾಯಿತು. ಸಭೆಯಲ್ಲಿ ಖಜಾಂಚಿ ಶ್ರೀನಿವಾಸ್, ರಾಜ್ಯ ಪರಿಷತ್ ಸದಸ್ಯ ಎಂ.ಡಿ. ದೇವರಾಜ್, ಕಾರ್ಯದರ್ಶಿ ಧರ್ಮಪಾಲ್ ಹಾಗೂ ಎಲ್ಲಾ ನಿರ್ದೇಶಕರು ಇದ್ದರು.