ಸಾರಾಂಶ
ಕಲಬುರಗಿ ಜಿಲ್ಲೆಯಲ್ಲಿ ಡೆಂಘೀ ಹಾಗೂ ಚಿಕೂನ್ ಗುನ್ಯಾ ಪ್ರಕರಣ ಹೆಚ್ಚಾಗುತ್ತಿದ್ದು ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿ ಇದ್ದು ತಮ್ಮ ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಜಿಲ್ಲಾ ಪಂಚಾಯ್ತಿ ಸಿಇಒ ಭಂವರ ಸಿಂಗ್ ಮೀನಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ಕಲಬುರಗಿ
ಜಿಲ್ಲೆಯಲ್ಲಿ ಡೆಂಘೀ ಹಾಗೂ ಚಿಕೂನ್ ಗುನ್ಯಾ ಪ್ರಕರಣ ಹೆಚ್ಚಾಗುತ್ತಿದ್ದು ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿ ಇದ್ದು ತಮ್ಮ ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಜಿಲ್ಲಾ ಪಂಚಾಯ್ತಿ ಸಿಇಒ ಭಂವರ ಸಿಂಗ್ ಮೀನಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಅಧಿಕಾರಿಗಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ಗ್ರಾಪಂ ಆವರಣ, ಸರ್ಕಾರಿ ಆಸ್ಪತ್ರೆಗಳು/ಶಾಲೆಗಳಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಫವಾಗಿ ಇಡುವುದು.
ಇತರೆ ಸರ್ಕಾರಿ ಕಟ್ಟಡಗಳಲ್ಲಿ ಸ್ವಚ್ಚತೆ ಕಾಪಾಡುವುದು ನೀರು ನಿಲ್ಲದಂತೆ ವ್ಯವಸ್ಥೆ ಮಾಡುಲು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಫಾಗಿಂಗ್ ಮಾಡಿ ಸೊಳ್ಳೆಗಳಾಗದಂತೆ ತಡೆಗಟ್ಟುವುದರ ಕುರಿತು ಮತ್ತು ಡೆಂಘೀ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಸಭೆಯಲ್ಲಿದ್ದ ಎಲ್ಲಾ ಪಂಚಾಯ್ತಿ ಪಿಡಿಒಗಳಿಗೆ ಸೂಚನೆ ನೀಡಿದರು.ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡುವುದು ಹಾಗೂ ಗುಣಮಟ್ಟದ ಕಾಮಗಾರಿಗಳನ್ನು ಅನುಷ್ಠಾನಗೋಳಿಸಿ ಮಾನವ ದಿನ ಸೃಜನೆ ಮಾಡಲು ತಿಳಿಸಿದರು, ನಂತರ ಸಮಗ್ರ ಶಾಲಾ ಅಭಿವೃದ್ಧಿ ಅಡಿಯಲ್ಲಿ ಶಾಲಾ ಶೌಚಾಲಯ, ಶಾಲಾ ಆವರಣ ಗೋಡೆ ಹಾಗೂ ಶಾಲಾ ಅಡುಗೆ ಕೋಣೆ ಕಾಮಗಾರಿ ತೆಗೆದುಕೊಂಡು ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವೈಯಕ್ತಿಕ, ಸಮುದಾಯ ಶೌಚಾಲಯ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ವಿವಿಧ ವಸತಿ ಯೋಜನೆಯಡಿ ನಿಗಡಿಪಡಿಸಿದ ಗುರಿ ಕಾಲಮಿತಿಯೊಳಗೆ ಅನುಷ್ಠಾನಗೊಳಿಸಿ ಪ್ರಗತಿ ಸಾಧಿಸಲು ತಿಳಿಸಿದರು.ಜನಸ್ಪಂದನ, ಐಪಿಜಿಆರ್‌ಎಸ್, ಪಬ್ಲಿಕ್ ಗ್ರೇವಿಯನ್ಸ್‌ಗಳಲ್ಲಿ ದಾಖಲಾದ ದೂರುಗಳನ್ನು ತ್ವರಿತವಾಗಿ ಗುಣಾತ್ಮಕವಾಗಿ ವೀಲೆವಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲಾ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಕೇಂದ್ರಸ್ಥಾನದಲ್ಲೇ ಇದ್ದು ಗ್ರಾಮ ಪಂಚಾಯ್ತಿಗಳಲ್ಲಿ ತಮ್ಮ ಹಾಗೂ ಅಧೀನದ ಸಿಬ್ಬಂದಿ ಹಾಜರಾತಿಯನ್ನು ಕಡ್ಡಾಯವಾಗಿ ಇ-ಹಾಜರಾತಿಯಲ್ಲಿ ಅನುಷ್ಠಾನಗೊಳಿಸಲು ಸೂಚಿಸಲಾಯಿತು. ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಯೋಜನಾ ನಿರ್ದೇಶಕರಾದ ಜಗದೇವಪ್ಪ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.