ಸಾರಾಂಶ
ಮತದಾನದ ಪ್ರಮಾಣ ಹೆಚ್ಚಿಸಲು ಹಾಗೂ ಸದೃಢ ಪ್ರಜಾಪ್ರಭುತ್ವ ನಿರ್ಮಾಣದಲ್ಲಿ ಪ್ರತಿಯೊಬ್ಬ ಮತದಾರನು ಮತದಾನದಲ್ಲಿ ಪಾಲ್ಗೊಳ್ಳುವುದು ಅಗತ್ಯವಿದೆ. ಎಲ್ಲರೂ ತಪ್ಪದೆ ಮತದಾನ ಮಾಡಬೇಕು ಎಂದು ತಾಲೂಕು ಪಂಚಾಯ್ತಿ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಬಸವರಾಜ ಸಜ್ಜನ್ ಹೇಳಿದರು.
ಕನ್ನಡಪ್ರಭ ವಾರ್ತೆ ಸುರಪುರ
ಲೋಕಸಭಾ ಮತ್ತು ಉಪಚುನಾವಣೆಯಲ್ಲಿ ಮತದಾರರು ತಮ್ಮ ಹಕ್ಕನ್ನು ತಪ್ಪದೇ ಚಲಾಯಿಸಬೇಕು. ಮತದಾನದ ಪ್ರಮಾಣ ಹೆಚ್ಚಿಸಲು ಹಾಗೂ ಸದೃಢ ಪ್ರಜಾಪ್ರಭುತ್ವ ನಿರ್ಮಾಣದಲ್ಲಿ ಪ್ರತಿಯೊಬ್ಬ ಮತದಾರನು ಮತದಾನದಲ್ಲಿ ಪಾಲ್ಗೊಳ್ಳುವುದು ಅಗತ್ಯವಿದೆ. ಎಲ್ಲರೂ ತಪ್ಪದೆ ಮತದಾನ ಮಾಡಬೇಕು ಎಂದು ತಾಲೂಕು ಪಂಚಾಯ್ತಿ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಬಸವರಾಜ ಸಜ್ಜನ್ ಹೇಳಿದರು.ನಗರದ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ತಾಲೂಕು ಪಂಚಾಯ್ತಿ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ತಾಲೂಕು ಪಂಚಾಯ್ತಿ ಆವಣರಣದಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅಂಗವಿಕಲರಿಗೆ ಮತದಾನದ ಮಾಡಲು ಕೇಂದ್ರಗಳಲ್ಲಿ ರ‍್ಯಾಂಪ್ ವ್ಯವಸ್ಥೆ, ವ್ಹೀಲ್‌ಚೇರ್ ಹಾಗೂ ಅದರ ಜೊತೆಗೆ ವಿಶೇಷಚೇತನರಿಗೆ ಅನುಕೂಲವಾಗುವಂತೆ ಮನೆ ಯಿಂದ ಮತದಾನದ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದರು.ಜಿಲ್ಲಾ ವಿಕಲಚೇತನರ ಅಧಿಕಾರಿಗಳು ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ತಾಲೂಕು ಪಂಚಾಯ್ತಿ ಕಾರ್ಯಾಲಯದಿಂದ ಬೈಕ್ ಸವಾರಿ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ರಂಗಂಪೇಟ ಚೌಕ ವರೆಗೆ ಮತದಾರರ ಜಾಗೃತಿ ಮೂಡಿಸುವ ಘೋಷಣೆಗಳನ್ನು ಕೂಗುತ್ತಾ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಅಧಿಕಾರಿಗಳು, ತಾಲೂಕಿನ ವಿಕಲಚೇತನರು, ತಾಲೂಕು ಪಂಚಾಯ್ತಿ ಐಇಸಿ ಸಂಯೋಜಕರು, ತಾಲೂಕು ಪಂಚಾಯ್ತಿ ಸಿಬ್ಬಂದಿ ಇದ್ದರು.