ದೇಶದ ಸಮಗ್ರ ಅಭಿವೃದ್ಧಿಗೆ ತಪ್ಪದೆ ತಮ್ಮ ಹಕ್ಕು ಚಲಾಯಿಸಿ: ಎಸ್.ಡಿ.ಬೆನ್ನೂರ್

| Published : Apr 02 2024, 01:03 AM IST / Updated: Apr 02 2024, 01:04 AM IST

ದೇಶದ ಸಮಗ್ರ ಅಭಿವೃದ್ಧಿಗೆ ತಪ್ಪದೆ ತಮ್ಮ ಹಕ್ಕು ಚಲಾಯಿಸಿ: ಎಸ್.ಡಿ.ಬೆನ್ನೂರ್
Share this Article
  • FB
  • TW
  • Linkdin
  • Email

ಸಾರಾಂಶ

ಏ.26 ರಂದು ನಡೆಯುವ ಲೋಕಸಭಾ ಚುನಾವಣೆಯನ್ನು ಎಲ್ಲ ಹಬ್ಬಗಳಂತೆ ಆಚರಿಸುವಂತೆ ಪ್ರಜಾಪ್ರಭುತ್ವದ ಹಬ್ಬವನ್ನು ವಿಭಿನ್ನ ರೀತಿಯಲ್ಲಿ ಆಚರಣೆ ಮಾಡಬೇಕು. ಯುವ ಸಮೂಹ ಸೇರಿದಂತೆ ಪ್ರತಿಯೊಬ್ಬರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಬೇಕು. ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯವಾಗಿದ್ದು, ಹಾಗಾಗಿ ಮತದಾನ ಮಾಡಿ, ಪ್ರಜಾ ಪ್ರಭುತ್ವ ಗಟ್ಟಿಗೊಳಿಸಿ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಸಾರ್ವಜನಿಕರು ಹಾಗೂ ಯುವ ಜನತೆ ಪ್ರಜಾಪ್ರಭುತ್ವದ ಭದ್ರಭೂನಾದಿಗಾಗಿ ಹಾಗೂ ದೇಶದ ಸಮಗ್ರ ಅಭಿವೃದ್ಧಿಗೆ ತಪ್ಪದೇ ಹಕ್ಕು ಚಲಾಯಿಸಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ್ ಹೇಳಿದರು.

ತಾಲೂಕಿನ ಮುಂಡುಗದೊರೆ ಗ್ರಾಮದ ರಾಮಮಂದಿರ ವೃತ್ತದ ಬಳಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಅರಕೆರೆ ಸಮುದಾಯ ಆರೋಗ್ಯ ಕೇಂದ್ರದಿಂದ ಏರ್ಪಡಿಸಿದ್ದ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಏ.26 ರಂದು ನಡೆಯುವ ಲೋಕಸಭಾ ಚುನಾವಣೆಯನ್ನು ಎಲ್ಲ ಹಬ್ಬಗಳಂತೆ ಆಚರಿಸುವಂತೆ ಪ್ರಜಾಪ್ರಭುತ್ವದ ಹಬ್ಬವನ್ನು ವಿಭಿನ್ನ ರೀತಿಯಲ್ಲಿ ಆಚರಣೆ ಮಾಡಬೇಕು. ಯುವ ಸಮೂಹ ಸೇರಿದಂತೆ ಪ್ರತಿಯೊಬ್ಬರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಬೇಕು. ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯವಾಗಿದ್ದು, ಹಾಗಾಗಿ ಮತದಾನ ಮಾಡಿ, ಪ್ರಜಾ ಪ್ರಭುತ್ವ ಗಟ್ಟಿಗೊಳಿಸಿ ಎಂದು ಸಲಹೆ ನೀಡಿದರು.

ಇದೇ ವೇಳೆ ಮತದಾನದ ಜಾಗೃತಿಯ ವಿವಿಧ ಸಂದೇಶ ಫಲಕಗಳೊಂದಿಗೆ ಜಾಗೃತಿ ಮೂಡಿಸಿ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎನ್.ಕೃಷ್ಣೇಗೌಡ, ಮುಖಂಡರಾದ ಸಿದ್ದೇಗೌಡ, ಚನ್ನಕೇಶವ, ಸಂದೇಶಗೌಡ, ಸೋಮಶೇಖರ್, ನಾರಾಯಣ, ಕಿರಣ, ಅರುಣ, ನಂದೀಶ್, ಗೋವಿಂದಯ್ಯ, ಪ್ರಸನ್ನ ಹಾಗೂ ಆಶಾ ಕಾರ್ಯಕರ್ತೆ ರೂಪ, ಕಲ್ಪನ ಸೇರಿದಂತೆ ಇತರರು ಹಾಜರಿದ್ದರು.ಬಂಡೂರು ಗ್ರಾಮದಲ್ಲಿ ಮತದಾನ ಜಾಗೃತಿ ಜಾಥಾ

ಮಳವಳ್ಳಿ: ತಾಲೂಕಿನ ಬಂಡೂರು ಗ್ರಾಮದಲ್ಲಿ ಶುಕ್ರವಾರ ಲೋಕಸಭಾ ಚುನಾವಣೆ ಅಂಗವಾಗಿ ತಾಲೂಕು ಸ್ವೀಪ್ ಸಮಿತಿ, ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಮತದಾನ ಜಾಗೃತಿ ಜಾಥಾ ನಡೆಯಿತು.

ತಾಪಂ ಇಒ ಎಲ್. ಮಮತಾ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಮತದಾನದಿಂದ ಯಾರು ದೂರ ಉಳಿಯಬಾರದು. ಮತದಾನ ನಮ್ಮೆಲ್ಲರ ಹಕ್ಕು. ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ಸ್ವ-ಸಹಾಯ ಒಕ್ಕೂಟದ ಮಹಿಳೆಯರನ್ನು ಒಗ್ಗೂಡಿಸಿ ಮತದಾನದಿಂದ ಯಾರು ದೂರ ಉಳಿಯದಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಮತದಾನದ ಬಗ್ಗೆ ಜನರಿಗೆ ಮನವರಿಕೆ ಮಾಡಿ ಕೊಡುವುದು ಸಮಾಜ ಸೇವೆ ಕೆಲಸವಾಗಿದೆ. ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಹಿಳಾ ಸ್ವ-ಸಹಾಯ ಒಕ್ಕೂಟದ ಸಹಯೋಗದೊಂದಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಸಾರ್ವಜನಿಕರಿಗೆ, ಸ್ವ ಸಹಾಯ ಸಂಘದ ಸದಸ್ಯರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ನಂತರ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥವು ಸಾಗಿತು.

ಪಿಡಿಒ ಗಂಗಾಧರ್, ತಾಲೂಕು ಐಇಸಿ ಸಂಯೋಜಕ ಎಚ್.ಸುನಿಲ್ ಕುಮಾರ್. ಎನ್ಆರ್ ಎಲ್ಎಂ ಒಕ್ಕೂಟದ ಸಿಬ್ಬಂದಿ ಮಂಜುನಾಥ್, ಮಹದೇವ, ನಿಂಗರಾಜು, ಎಸ್ಡಿಎ ಮಲ್ಲೇಶ್, ಗ್ರಾ.ಪಂ.ಸಿಬ್ಬಂದಿ, ಸ್ತ್ರೀಶಕ್ತಿ ಸಂಘಗಳ ಪದಾಧಿಕಾರಿಗಳು, ಆಶಾ ಕಾರ್ಯಕರ್ತೆರು ಭಾಗವಹಿಸಿದ್ದರು.