ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ವಸ್ತು ಪ್ರದರ್ಶನ ಅಗತ್ಯ ಎಂದು ತುಮಕೂರಿನ ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕರಾದ ಡಾ.ಬಾಲಗುರುಮೂರ್ತಿ ತಿಳಿಸಿದರು.
ಕನ್ನಡಪ್ರಭ ವಾರ್ತೆ, ತುಮಕೂರುಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ವಸ್ತು ಪ್ರದರ್ಶನ ಅಗತ್ಯ ಎಂದು ತುಮಕೂರಿನ ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕರಾದ ಡಾ.ಬಾಲಗುರುಮೂರ್ತಿ ತಿಳಿಸಿದರು.ನಗರದ ಶಿರಾ ರಸ್ತೆಯ ಶ್ರೀದೇವಿ ಪ್ಯಾರಾಮೆಡಿಕಲ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ವೈದ್ಯಕೀಯ ವಿಜ್ಞಾನ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.ಈ ತರಹದ ಪ್ರದರ್ಶನಗಳು ಅತಿ ಅವಶ್ಯಕವಾಗಿರುತ್ತದೆ. ಯಾವುದೇ ದೇಶ ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಣ ಮತ್ತು ಆರೋಗ್ಯವಲಯದಲ್ಲಿ ಪ್ರಗತಿ ಸಾಧಿಸಬೇಕು. ಶ್ರೀದೇವಿ ಪ್ಯಾರಾಮೆಡಿಕಲ್ ಕಾಲೇಜಿನ ಈ ವಸ್ತುಪ್ರದರ್ಶನದಲ್ಲಿ ವೈದ್ಯಕೀಯ ವಿಜ್ಞಾನದ ವಿವಿಧ ಪ್ರಾತ್ಯಕ್ಷಿಕೆಗಳು ವೈಜ್ಞಾನಿಕ ಹಿನ್ನೆಲೆಯಿಂದ ತಯಾರಿಸಿ ವಿದ್ಯಾರ್ಥಿಗಳ ಜ್ಞಾನರ್ಜನೆ ಮತ್ತು ತಾಂತ್ರಿಕತೆ ಹೊಂದಿರುತ್ತದೆ ಎಂದರು.ಶಾಲಾ ಶಿಕ್ಷಣ ಇಲಾಖೆಯ ಆಡಳಿತ ಉಪನಿರ್ದೇಶಕ ಕೆ.ಜಿ.ರಘುಚಂದ್ರ ಮಾತನಾಡಿ, ಪ್ಯಾರಾ ಮೆಡಿಕಲ್ ವ್ಯಾಸಂಗಕ್ಕೆ ಬರುವ ವಿದ್ಯಾರ್ಥಿಗಳು ಹೆಚ್ಚಿಗೆ ಗ್ರಾಮೀಣ ಪ್ರದೇಶಗಳಿಂದ ಬಂದಿದ್ದು ಅವರಲ್ಲಿರುವ ಕೌಶಲ್ಯಗಳನ್ನು ಹೊರ ಹಾಕಲು ಹಾಗೂ ಅಭಿವೃದ್ಧಿಗೊಳಿಸಲು ಇತಂಹ ವಸ್ತು ಪ್ರದರ್ಶನ ಹೆಚ್ಚು ಅನುಕೂಲಕರವಾಗಿರುತ್ತದೆ. ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಧರ್ಮ ಉತ್ತಮ ಜೀವನಕ್ಕೆ ಪೂರಕ ವೇದಿಕೆ ಎಂದರು.ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀದೇವಿ ಕಾಲೇಜಿನ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ.ಎಸ್.ಪಾಟೀಲ್‌ರವರು ಮಾತನಾಡಿ, ವಿದ್ಯಾರ್ಥಿಯೂ ಥಿಯರಿ ಜೊತೆಗೆ ಹೆಚ್ಚು ಹೆಚ್ಚು ಪ್ರಾಯೋಗಿಕ ತಂತ್ರಜ್ಞತೆಯನ್ನು ನೀಡಲಾಗುವುದು. ಉತ್ತಮ ತಂತ್ರಜ್ಞರನ್ನು ಸಮಾಜಕ್ಕೆ ಕೊಡುಗೆ ನೀಡುವುದರಲ್ಲಿ ಶ್ರೀದೇವಿ ವೈದ್ಯಕೀಯ ಸಂಸ್ಥೆಯು ಹೆಚ್ಚು ಹೆಚ್ಚು ಅವಿಷ್ಕಾರಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ ಎಂದರು.
ಕಾರ್ಯಕ್ರಮದಲ್ಲಿ ಶ್ರೀದೇವಿ ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಸಿ.ಕೃಷ್ಣ ಮಾತನಾಡಿದರು. ಇದೇ ಸಂದರ್ಭದಲ್ಲಿ ಶ್ರೀದೇವಿ ವೈದ್ಯಕೀಯ ಪ್ರಾಂಶುಪಾಲ ಡಾ.ಎಂ.ಎಲ್.ಹರೇಂದ್ರಕುಮಾರ್, ಡಾ.ಸಿ.ಪಿ.ಚಂದ್ರಪ್ಪ, ಡಾ.ಪವಿತ್ರ, ಡಾ.ಸತೀಶ್ ಟಿ.ಜಿ., ಸಿ.ರಂಗಧಾಮಯ್ಯ, ಆರ್.ವಿಜಯಕುಮಾರ್, ಪ್ರೊ.ಎಸ್.ಉಷಾ, ಪ್ರೊ.ಅಜಯ್.ಸಿ ಇತರರಿದ್ದರು.