ಮಕ್ಕಳಿಗೆ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಲು ವಿಜ್ಞಾನ ವಸ್ತು ಪ್ರದರ್ಶನದಂತಹ ಕಾರ್ಯಕ್ರಮ ಅತ್ಯಂತ ಉಪಯೋಗವಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ತಿಳಿಸಿದರು
ಕನ್ನಡಪ್ರಭ ವಾರ್ತೆ, ಹನೂರು
ಮಕ್ಕಳಿಗೆ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಲು ವಿಜ್ಞಾನ ವಸ್ತು ಪ್ರದರ್ಶನದಂತಹ ಕಾರ್ಯಕ್ರಮ ಅತ್ಯಂತ ಉಪಯೋಗವಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ತಿಳಿಸಿದರು.ತಾಲೂಕಿನ ಮಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಆವಿಷ್ಕಾರ ಅಭಿಯಾನ ಅಡಿಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ನಂತರ ಮಾತನಾಡಿದರು.
ಮಕ್ಕಳು ಈ ದಿಸೆಯಿಂದಲೇ ವೈಜ್ಞಾನಿಕ ವಿಚಾರಗಳನ್ನು ಅರಿತು ವೈಜ್ಞಾನಿಕವಾಗಿ ಮುನ್ನಡೆಯಬೇಕು. ಆ ಮುಖೇನ ಸಮಾಜದಲ್ಲಿ ಪ್ರಸ್ತುತ ಇರುವಂತಹ ಕೆಟ್ಟ ಪಿಡುಗಳಲ್ಲಿ ಒಂದಾದಂತಹ ಮೂಢನಂಬಿಕೆಗಳನ್ನು ಹಾಗೂ ಮೌಢ್ಯತೆ ಅಳಿಸಬೇಕು. ಮಕ್ಕಳು ತಾವು ಮುಂದುವರೆದಂತೆಲ್ಲ ವೈಜ್ಞಾನಿಕತೆಯೂ ಸಹ ಮಕ್ಕಳಲ್ಲಿ ಮುಂದುವರೆಯಬೇಕು.ನಮ್ಮ ದೇಶ ವೈಜ್ಞಾನಿಕವಾಗಿ ಪ್ರಗತಿಯತ್ತ ಸಾಗುತ್ತಿದೆ ಇದಕ್ಕೆ ಕಾರಣ ವೈಜ್ಞಾನಿಕತೆ, ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮುಂದುವರೆಯುತ್ತಿದೆ. ಹಾಗಾಗಿ ಮಕ್ಕಳು ಚಿಕ್ಕ ವಯಸ್ಸಿನಿಂದಲೇ ವೈಜ್ಞಾನಿಕ ಮನೋಭಾವನೆಯನ್ನು ಹೆಚ್ಚು ಹೆಚ್ಚು ಬೆಳೆಸಿಕೊಳ್ಳಬೇಕು. ನಮ್ಮ ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚಿನ ಮೂಢನಂಬಿಕೆಗಳನ್ನು ಇಂದಿಗೂ ಕೂಡ ನಾವು ಆಚರಣೆ ಮಾಡಿಕೊಂಡು ಬರುತ್ತಿದ್ದೇವೆ. ಆದರೆ ಅಲ್ಪ ಪ್ರಮಾಣದಲ್ಲಾದರೂ ಸಹ ವಿದ್ಯಾರ್ಥಿಗಳು ಮೂಢನಂಬಿಕೆಗಳನ್ನ ಬದಿಗೊತ್ತಿ ವೈಜ್ಞಾನಿಕ ವಿಚಾರಗಳನ್ನು ತಲೆಗೆ ತುಂಬಿಸಿಕೊಂಡು ವೈಜ್ಞಾನಿಕವಾಗಿ ಮುಂದುವರೆಯಬೇಕು ಎಂದರು.ವಿಜ್ಞಾನ ವಸ್ತು ಪ್ರದರ್ಶನ ನೋಡಲು ಅಕ್ಕ ಪಕ್ಕದ ಶಾಲೆಯ ಮಕ್ಕಳಿಗೆ ಅವಕಾಶ ಕೊಡಲಾಗಿತ್ತು. ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಮಕ್ಕಳು ಆಕರ್ಷಕ ವಿಜ್ಞಾನ ಚಿತ್ರಗಳನ್ನು ಬಿಡಿಸುವುದರ ಮೂಲಕ ಜೊತೆಗೆ ಕೆಲವು ವಿಜ್ಞಾನ ಪ್ರಯೋಗಗಳನ್ನು ಹಾಗೂ ಹಾಗೂ ಕೆಲವು ವಿಜ್ಞಾನ ಮಾದರಿಗಳನ್ನು ಸ್ಥಳದಲ್ಲಿ ಪ್ರದರ್ಶನಕ್ಕೆ ಇಡಲಾಗಿತ್ತು.ಇದೆ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕರಾದ ಅಶೋಕ್, ಚಿನ್ನಪ್ಪಯ್ಯ,ರವೀಂದ್ರ,ಮಂಗಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೊರೆ, ದೈಹಿಕ ಶಿಕ್ಷಣ ಪರಿವೀಕ್ಷಕ ಕೆಂಪರಾಜು, ಹಾಗೂ ಮಂಗಲ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರೂ, ಸಹ ಶಿಕ್ಷಕರೂ ವಿವಿಧ ಶಾಲೆಯ ಮಕ್ಕಳು, ಶಿಕ್ಷಕರೂ ಉಪಸ್ಥಿತರಿದ್ದರು.