ಸಾರಾಂಶ
ಕನ್ನಡಪ್ರಭ ವಾರ್ತೆ ಬಂಟ್ವಾಳ
ರಾಜ್ಯದಲ್ಲಿ ಬಿಜೆಪಿಯ ಸದಸ್ಯತ್ವ ಅಭಿಯಾನವನ್ನು ಇನ್ನಷ್ಟು ದಿನಗಳ ಕಾಲ ವಿಸ್ತರಿಸಲಾಗಿದ್ದು, ಬಂಟ್ವಾಳ ಕ್ಷೇತ್ರದಲ್ಲಿ ನಿಗದಿಪಡಿಸಲಾಗಿರುವ ಸದಸ್ಯತ್ವ ಮತ್ತು ಸಕ್ರಿಯ ಸದಸ್ಯತ್ವದ ಗುರಿಯನ್ನು ತಲುಪುವ ನಿಟ್ಟಿನಲ್ಲಿ ಕಾರ್ಯಕರ್ತರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಂಘಟನಾ ಪರ್ವದ ಜಿಲ್ಲಾ ಸಹ ಚುನಾವಣಾಧಿಕಾರಿ ವಿಕಾಸ್ ಪುತ್ತೂರು ಹೇಳಿದ್ದಾರೆ.ಸೋಮವಾರ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಸಂಘಟನಾ ಪರ್ವದ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.ಕ್ಷೇತ್ರದ ಪ್ರತಿ ಬೂತ್ ಮಟ್ಟದಲ್ಲಿ 12 ಮಂದಿಯನ್ನೊಳಗೊಂಡ ಸಮಿತಿಯನ್ನು ನ.30 ರ ಒಳಗಾಗಿ ರಚಿಸಬೇಕು, ಪಕ್ಷದಹಿರಿಯರು, ನಿಷ್ಕ್ರೀಯ ಸದಸ್ಯರನ್ನು ಭೇಟಿಯಾಗಿ ಅವರನ್ನು ಮತ್ತೆ ಸಕ್ರಿಯಗೊಳಿಸಲು ಪ್ರಯತ್ನಿಸಬೇಕು, ಬೂತ್ ಸಮಿತಿ ಮುಂಬರುವ ಎಲ್ಲಾ ಚುನಾವಣೆಗೂ ಅಡಿಪಾಯವಾಗಲಿದೆ ಎಂದು ಹೇಳಿದರು.
ಸಂಘಟನಾ ಪರ್ವದ ಜಿಲ್ಲಾ ಚುನಾವಣಾಧಿಕಾರಿ ರಾಜೇಶ್ ಕಾವೇರಿ ಮಾತನಾಡಿದರು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಕಾರ್ಯಾಗಾರವನ್ನು ಉದ್ಘಾಟಿಸಿದರು.ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಇದೇವೇಳೆ ಬಂಟ್ವಾಳ ಕ್ಷೇತ್ರದ ಸಹಯೋಗಿಗಳ ಪಟ್ಟಿಯನ್ನು ಘೋಷಿಸಲಾಯಿತು.ಸಂಘಟನಾ ಪರ್ವದ ಬಂಟ್ವಾಳ ಮಂಡಲದ ಸಹಯೋಗಿ ಅಪ್ಪಯ್ಯ ಮಣಿಯಾಣಿ, ಸಾಜ ರಾಧಾಕೃಷ್ಣ ಆಳ್ವ ಪುತ್ತೂರು, ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ಮಂಡಲ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷ, ಕಾರ್ಯದರ್ಶಿಗಳು ಮಹಾಶಕ್ತಿ ಕೇಂದ್ರದ ಅಧಕ್ಷ, ಪ್ರಧಾನ ಕಾರ್ಯದರ್ಶಿಗಳು,ಶಕ್ತಿಕೇಂದ್ರದ ಸಹಯೋಗಿಗಳು, ಪ್ರಮುಖರು ಉಪಸ್ಥಿತರಿದ್ದರು,ಮಂಡಲ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಮಂಡಲ ಮಾಧ್ಯಮ ಪ್ರಮುಖ್ ಪುರುಷೋತ್ತಮ ಶೆಟ್ಟಿ ವಂದಿಸಿದರು. ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂಪತ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.