ಸಾರಾಂಶ
ಕೆಲವರು ನಿರಂತರವಾಗಿ ಅಕ್ರಮ ಭೂ ಮಾಫಿಯಾದಲ್ಲಿ ತೊಡಗುತ್ತಿರುವ ಬಗ್ಗೆ ಮಾಹಿತಿ ಇದೆ. ಅಂತಹವರ ವಿರುದ್ಧ ಎಫ್.ಐ.ಆರ್ ಹಾಕಿ ಕಠಿಣ ಕ್ರಮ ಜರುಗಿಸಲಾ ಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಎಚ್ರಿಸಿದರು.
ಕನ್ನಡಪ್ರಭ ವಾರ್ತೆ ಬೀದರ್
ಭೂ ವ್ಯಾಜ್ಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಶೀಘ್ರದಲ್ಲೆ ವಿಲೇವಾರಿ ಮಾಡಲಾಗುವುದೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.ಅವರು ಶುಕ್ರವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಭೂ ವ್ಯಾಜ್ಯಗಳ ಅಹವಾಲು ಸ್ವೀಕೃತಿ ಸಭೆಯ ನಂತರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ರೈತರು ತಮ್ಮ ಜಮೀನುಗಳಿಗೆ ಹೋಗಿ ಬರಲು ಯಾವುದೇ ಸಮಸ್ಯೆ ಇರುವುದಿಲ್ಲ. ಆದರೆ ಜಮೀನಿನಲ್ಲಿ ಬೆಳೆಗಳ ರಾಶಿ ಸಮಯದಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಎಂದು ರೈತರು ಅಹವಾಲು ಅರ್ಜಿ ಸಲ್ಲಿಸಿರುತ್ತಾರೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಜಿಲ್ಲೆಯ ಒಂದು ಶಾಲೆಗೆ ಸಂಬಂಧಪಟ್ಟವರು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶೇಡ್ ನಿರ್ಮಾಣ ಮಾಡಿರುವ ಬಗ್ಗೆ ಮಾಹಿತಿ ಇದ್ದು, ಈಗಾಗಲೇ ಅವರಿಗೆ ನೋಟಿಸ್ ನೀಡ ಲಾಗಿದೆ. ಕೆಲವರು ನಿರಂತರವಾಗಿ ಅಕ್ರಮ ಭೂ ಮಾಫಿಯಾದಲ್ಲಿ ತೊಡಗುತ್ತಿರುವ ಬಗ್ಗೆ ಮಾಹಿತಿ ಇದೆ. ಅಂತಹವರ ವಿರುದ್ಧ ಎಫ್.ಐ.ಆರ್ ಹಾಕಿ ಕಠಿಣ ಕ್ರಮ ಜರುಗಿಸಲಾ ಗುವುದು ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ ಪೂಜಾರಿ, ಬಸವಕಲ್ಯಾಣ ಸಹಾಯಕ ಆಯುಕ್ತರು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))