ಗುಣಮಟ್ಟದ ಶಿಕ್ಷಣಕ್ಕೆ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆ ಹೆಸರುವಾಸಿ: ದಿನೇಶ್ ಗುಂಡೂರಾವ್

| Published : Nov 22 2024, 01:18 AM IST

ಗುಣಮಟ್ಟದ ಶಿಕ್ಷಣಕ್ಕೆ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆ ಹೆಸರುವಾಸಿ: ದಿನೇಶ್ ಗುಂಡೂರಾವ್
Share this Article
  • FB
  • TW
  • Linkdin
  • Email

ಸಾರಾಂಶ

ವಳಚ್ಚಿಲ್ ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನ ನೂತನ ಸಿಬ್ಬಂದಿ ವಸತಿ ಸಂಕೀರ್ಣ ‘ಓಮೆಗಾ’ವನ್ನು ಗುರುವಾರ ಸಚಿವ ದಿನೇಶ್‌ ಗುಂಡೂರಾವ್‌ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಗುಣಮಟ್ಟದ ಶಿಕ್ಷಣಕ್ಕೆ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆ ಹೆಸರುವಾಸಿಯಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.

ವಳಚ್ಚಿಲ್ ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನ ನೂತನ ಸಿಬ್ಬಂದಿ ವಸತಿ ಸಂಕೀರ್ಣ ‘ಓಮೆಗಾ’ವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಮಾತನಾಡಿದರು. ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ.ನರೇಂದ್ರ ಎಲ್.ನಾಯಕ್ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್.ನಾಯಕ್, ಮಾಹಿತಿ ತಂತ್ರಜ್ಞಾನ ನಿರ್ದೇಶಕ ಅಂಕುಶ್ ಎನ್. ನಾಯಕ್, ವಾಸ್ತು ತಜ್ಞೆ ದೀಪಿಕಾ ಎ. ನಾಯಕ್, ಟ್ರಸ್ಟಿ ಉಸ್ತಾದ್ ರಫೀಕ್ ಖಾನ್, ಪ್ರಾಂಶುಪಾಲ ಡಾ.ಎನ್.ಕೆ.ವಿಜಯನ್, ಉಪಪ್ರಾಂಶುಪಾಲ (ಶೈಕ್ಷಣಿಕ) ಸುಬ್ರಹ್ಮಣ್ಯ ಉಡುಪ ಮತ್ತಿತರರಿದ್ದರು..ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕಿ ಧೃತಿ ವಿ. ಹೆಗ್ಡೆ ಸ್ವಾಗತಿಸಿ, ವಂದಿಸಿದರು.