ಮಹಿಳೆಯರ ಶೋಷಣೆ ತಡೆಯಬೇಕು: ನ್ಯಾ. ಹನುಮಂತಪ್ಪ

| Published : Jul 31 2025, 12:45 AM IST

ಸಾರಾಂಶ

ಚಿಕ್ಕಮಗಳೂರುಮಹಿಳೆಯರು ಅಬಲರು, ಅವರು ಪ್ರತಿರೋಧ ಒಡ್ಡುವುದಿಲ್ಲ. ಅಂತಹವರಿಗೆ ಹಣ ಮತ್ತು ಉದ್ಯೋಗದ ಆಮಿಷ ಒಡ್ಡಿ, ಅವರನ್ನು ಕರೆದುಕೊಂಡು ಹೋಗಿ, ಜೀತ ಪದ್ಧತಿ ಅಥವಾ ಲೈಂಗಿಕ ಶೋಷಣೆಗೆ ಒಳಪಡಿಸುವ ಹೀನ ಕೃತ್ಯ ನಿರಂತರವಾಗಿ ನಡೆಯುತ್ತಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.

- ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ, ಚಿಕ್ಕಮಗಳೂರಿನಲ್ಲಿ ಜಾಗೃತಿ ಜಾಥಾ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಮಹಿಳೆಯರು ಅಬಲರು, ಅವರು ಪ್ರತಿರೋಧ ಒಡ್ಡುವುದಿಲ್ಲ. ಅಂತಹವರಿಗೆ ಹಣ ಮತ್ತು ಉದ್ಯೋಗದ ಆಮಿಷ ಒಡ್ಡಿ, ಅವರನ್ನು ಕರೆದುಕೊಂಡು ಹೋಗಿ, ಜೀತ ಪದ್ಧತಿ ಅಥವಾ ಲೈಂಗಿಕ ಶೋಷಣೆಗೆ ಒಳಪಡಿಸುವ ಹೀನ ಕೃತ್ಯ ನಿರಂತರವಾಗಿ ನಡೆಯುತ್ತಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಬುಧವಾರ ತಾಲೂಕು ಕಚೇರಿಯಿಂದ ಪ್ರಾರಂಭವಾದ ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದರು.ಮಕ್ಕಳನ್ನು ಕಳ್ಳ ಸಾಗಾಣಿಕೆ ಮಾಡಿ ಅವರನ್ನು ಬಾಲ ಕಾರ್ಮಿಕ ಪದ್ಧತಿ ದೂಡುವುದು. ಉಚಿತವಾಗಿ ದುಡಿಸಿಕೊಳ್ಳುವುದು ಇದು ನಡೆದುಕೊಂಡು ಬರುತ್ತಿದೆ. ಇದರ ವಿರುದ್ಧ ಪ್ರಪಂಚಾದ್ಯಂತ ಹೋರಾಟಗಳು ನಡೆಯುತ್ತಿವೆ. ಜನರಲ್ಲಿ ಅರಿವು ಮೂಡಿ ಸಲು ಪ್ರಮುಖವಾದ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆಗಳ ಆಶ್ರಯದಲ್ಲಿ ಜಾಗೃತಿ ಜಾಥಾ ನಡೆಯಲಾಗುತ್ತಿದೆ ಎಂದ ಅವರು, ಚಿಕ್ಕಮಗಳೂರು ಅಪರಾಧ ಮುಕ್ತ ಜಿಲ್ಲೆ ಮಾಡೋಣ ಎಂದು ಕರೆ ನೀಡಿದರು.

ಚಿಕ್ಕಮಗಳೂರು ವಕೀಲರ ಸಂಘದ ಅಧ್ಯಕ್ಷ ಸುಜೇಂದ್ರ ಮಾತನಾಡಿ, ಹಲವು ವರ್ಷಗಳಿಂದ ಮಾನವ ಕಳ್ಳ ಸಾಗಾಣಿಕೆ ನಡೆಯುತ್ತಿದೆ. ಅಂಗಾಂಗ ಪಡೆಯಲು ಗುಲಾಮಗಿರಿಗಾಗಿ ಮಹಿಳೆಯರು, ಮಕ್ಕಳ ಕಳ್ಳ ಸಾಗಾಣಿಕೆ ನಡೆಯುತ್ತದೆ. ವಸ್ತುಗಳ ರೀತಿಯಲ್ಲಿ ಮಾರಾಟ ಮಾಡಲಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು, ಜನರ ಗಮನ ಸೆಳೆಯಲು ಈ ರೀತಿ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ ಎಂದರು.

ಚಿಕ್ಕಮಗಳೂರು ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ರಂಗನಾಥ್‌ ಮಾತನಾಡಿ, ಇಂದು ದೇಶಾದ್ಯಂತ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಮಾಡಲಾಗುತ್ತಿದೆ. ದೌರ್ಬಲ್ಯತೆ ಕಂಡು ಬರುವ ಮಹಿಳೆಯರು ಮತ್ತು ಮಕ್ಕಳನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ಜನರಲ್ಲಿ ಜಾಗೃತಿ, ಅರಿವು ಮೂಡಿಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ಸುದರ್ಶನ್‌, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಜಯಕುಮಾರ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್‌, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಂತೋಷ್‌ ಉಪಸ್ಥಿತರಿದ್ದರು.

-- ಬಾಕ್ಸ್‌ --‘ಮಹಿಳೆಯರು-ಮಕ್ಕಳ ಶೋಷಣೆ ಕಂಡಲ್ಲಿ ಸಹಾಯವಾಣಿಗೆ ಕರೆ ಮಾಡಿ’ಚಿಕ್ಕಮಗಳೂರು: ಮಹಿಳೆಯರ ಮೇಲಿನ ಲೈಂಗಿಕ ಶೋಷಣೆ ಹಾಗೂ ಮಕ್ಕಳನ್ನು ದುಡಿಮೆಗೆ ಹಚ್ಚುವ ಕಾನೂನು ಬಾಹಿರ ಕೃತ್ಯ ಕಂಡು ಬಂದ ಸಂದರ್ಭದಲ್ಲಿ ಕಾನೂನು ನೆರವಿಗೆ ಕಾನೂನು ಸೇವೆಗಳ ಸಹಾಯವಾಣಿ ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿ.ಹನುಮಂತಪ್ಪ ತಿಳಿಸಿದರು. ಮಾನವ ಕಳ್ಳ ಸಾಗಣೆ, ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದಂತೆ ಮಾಹಿತಿ ಕಾರ್ಯಾಗಾರ, ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಾನವ ಕಳ್ಳ ಸಾಗಣೆ, ಮಕ್ಕಳ ಹಕ್ಕುಗಳು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ ಮತ್ತು ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಬಗ್ಗೆ ಮಕ್ಕಳಲ್ಲಿ ಕಾನೂನು ಅರಿವು ಮೂಡಿಸುವುದು ಅಗತ್ಯ ಎಂದು ಹೇಳಿದರು. 30 ಕೆಸಿಕೆಎಂ 2ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಬುಧವಾರ ಚಿಕ್ಕಮಗಳೂರಿನ ತಾಲೂಕು ಕಚೇರಿಯಿಂದ ಪ್ರಾರಂಭವಾದ ಜಾಗೃತಿ ಜಾಥಕ್ಕೆ ನ್ಯಾಯಾಧೀಶ ವಿ. ಹನುಮಂತಪ್ಪ ಚಾಲನೆ ನೀಡಿದರು.