ಸಾರಾಂಶ
ಭಾರತ ಸೇವಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಕಮಲ್ ಕುಮಾರ್ ಅವರು ಶನಿವಾರ ಮಂಗಳೂರಿಗೆ ಭೇಟಿ ನೀಡಿ ಜಿಲ್ಲೆಯ ಸೇವಾದಳದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಸೇವಾದಳದ ಘಟಕಗಳು ಅಸ್ತಿತ್ವದಲ್ಲಿವೆ. ಇದನ್ನು ಅನುದಾನಿತ ಶಾಲೆಗಳಿಗೂ ವಿಸ್ತರಿಸಬೇಕು ಎಂದು ಸೂಚಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಭಾರತ ಸೇವಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಕಮಲ್ ಕುಮಾರ್ ಅವರು ಶನಿವಾರ ಮಂಗಳೂರಿಗೆ ಭೇಟಿ ನೀಡಿ ಜಿಲ್ಲೆಯ ಸೇವಾದಳದ ಪದಾಧಿಕಾರಿಗಳೊಂದಿಗೆ ಔಪಚಾರಿಕ ಸಭೆ ನಡೆಸಿದರು.ಈ ಸಂದರ್ಭ ಮಾತನಾಡಿದ ಅವರು, ಸೇವಾದಳ ಅಸ್ತಿತ್ವಕ್ಕೆ ಬಂದು ನೂರು ವರ್ಷ ಪೂರ್ತಿಯಾದ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳು ಈಗಾಗಲೇ ನಡೆದಿವೆ. ಸೇವಾದಳದ ಬಗ್ಗೆ ಜನರಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ನಡೆಸಲು ತಯಾರಾಗಬೇಕು. ಈಗಾಗಲೇ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಸೇವಾದಳದ ಘಟಕಗಳು ಅಸ್ತಿತ್ವದಲ್ಲಿವೆ. ಇದನ್ನು ಅನುದಾನಿತ ಶಾಲೆಗಳಿಗೂ ವಿಸ್ತರಿಸಬೇಕು ಎಂದು ಹೇಳಿದರು.ಮುಂದಿನ ದಿನಗಳಲ್ಲಿ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಹಿತ ಅನೇಕ ಸಚಿವರಿಗೆ ಸೇವಾದಳದ ಉನ್ನತಿಗಾಗಿ ಮನವಿ ಸಲ್ಲಿಸಲಾಗುವುದು ಎಂದರು.ಮಂಗಳೂರಿನಲ್ಲಿ ಸೇವಾದಳದ ಸ್ವಂತ ಕಟ್ಟಡ ನಿರ್ಮಾಣದ ಬಗ್ಗೆ ಒಲವು ತೋರಿಸಿದ ಅವರು, ಅದಕ್ಕಾಗಿ ಸೂಕ್ತ ಅನುದಾನದ ಬಗ್ಗೆ ಪ್ರಯತ್ನಿಸುವುದಾಗಿ ಹೇಳಿದರು.ರಾಜ್ಯ ದಳಪತಿ ಕಾಶೀನಾಥ್ ಹಂಡ್ರಲ್, ದಕ್ಷಿಣ ಕನ್ನಡ ಸೇವಾದಳ ಜಿಲ್ಲಾಧ್ಯಕ್ಷ ಎಸ್.ಬಿ. ಜಯರಾಮ್ ರೈ, ಕೇಂದ್ರ ಸಮಿತಿ ಸದಸ್ಯ ಬಶೀರ್ ಬೈಕಂಪಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಕೆ. ಸುಧೀರ್, ಜಿಲ್ಲಾ ಸಂಘಟಕ ಮಂಜೇಗೌಡ, ಮಂಗಳೂರು ತಾಲೂಕು ಅಧ್ಯಕ್ಷ ಪ್ರಭಾಕರ್ ಶ್ರೀಯಾನ್, ಬಂಟ್ವಾಳ ತಾಲೂಕು ಅಧ್ಯಕ್ಷ ಶೇಸಪ್ಪ, ಕಾಳವಾಡ, ಪ್ರೇಮ್ ಚಂದ್,ಶೋಭಾ ಕೇಶವ ಮತ್ತಿತರರು ಇದ್ದರು.