ಸಾರಾಂಶ
ವಿದ್ಯಾರ್ಥಿಗಳು ಪಠ್ಯ ವಿಷಯದ ಜೊತೆಗೆ ಕೌಶಲ್ಯ, ವಿವೇಚನೆ, ಸಾಮಾನ್ಯ ಜ್ಞಾನದ ಅರಿವನ್ನು ಹೆಚ್ಚಿಸಿಕೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣ ಮಾಡುವ ಬುದ್ದಿವಂತಿಕೆಯನ್ನು ಬೆಳೆಸಿಕೊಳ್ಳಬೇಕೆಂದು ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್ ತಿಳಿಸಿದರು. ತಿಪಟೂರಿನಲ್ಲಿ ಶಾಲಾ ವಸ್ತುಪ್ರದರ್ಶನ ಸ್ಪೆಕ್ಟ್ರಮ್-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೆ.ಕೆ. ಕಾನ್ವೆಂಟ್‌ನಲ್ಲಿ ಶಾಲಾ ವಸ್ತು ಪ್ರದರ್ಶನ ಸ್ಪೆಕ್ಟ್ರಮ್ ಆಯೋಜನೆ ಕನ್ನಡಪ್ರಭ ವಾರ್ತೆ ತಿಪಟೂರು
ಇದು ತಾಂತ್ರಿಕ ಹಾಗೂ ಸ್ಪರ್ಧಾತ್ಮಕ ಯುಗವಾಗಿದ್ದು ವಿದ್ಯಾರ್ಥಿಗಳು ಪಠ್ಯ ವಿಷಯದ ಜೊತೆಗೆ ಕೌಶಲ್ಯ, ವಿವೇಚನೆ, ಸಾಮಾನ್ಯ ಜ್ಞಾನದ ಅರಿವನ್ನು ಹೆಚ್ಚಿಸಿಕೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣ ಮಾಡುವ ಬುದ್ದಿವಂತಿಕೆಯನ್ನು ಬೆಳೆಸಿಕೊಳ್ಳಬೇಕೆಂದು ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್ ತಿಳಿಸಿದರು.ನಗರದ ಕೆ.ಕೆ. ಕಾನ್ವೆಂಟ್ ಆಂಗ್ಲ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ವಸ್ತುಪ್ರದರ್ಶನ ಸ್ಪೆಕ್ಟ್ರಮ್-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಪಠ್ಯ ಎಷ್ಟು ಮುಖ್ಯವೋ ಹಾಗೆಯೇ ಪಠ್ಯೇತರ ವಿಷಯಯೂ ಮುಖ್ಯವಾಗಿರಬೇಕು. ಒಳ್ಳೆಯ ಆಲೋಚನೆ, ಚಿಂತನೆಗಳನ್ನು ಬೆಳೆಸಿಕೊಂಡು ತಮ್ಮ ಗುರಿಯನ್ನು ತಲುಪಬೇಕು. ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ ಸಂಸ್ಥೆಗೆ ಹಾಗೂ ತಂದೆ ತಾಯಿಗಳಿಗೆ ಒಳ್ಳೆಯ ಹೆಸರು ತಂದು ಕೊಡಬೇಕು. ವಸ್ತು ಪ್ರದರ್ಶನ ತುಂಬಾ ಸುಂದರವಾಗಿ ಮೂಡಿಬಂದಿದ್ದು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ ಮಾತನಾಡಿ, ಮಕ್ಕಳು ಪಠ್ಯಕ್ಕೆ ಸೀಮಿತವಾಗದೆ ಪಠ್ಯೇತರ ವಿಷಯಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗುವ ಜೊತೆಗೆ ಆತ್ಮವಿಶ್ವಾಸ, ಸಾಮಾಜಿಕ ಶಿಸ್ತು, ಸಹಾಯ ಮಾಡುವ ಮನೋಭಾವ ಬೆಳೆಯಲಿದೆ. ಶಿಕ್ಷಣದ ಜೊತೆಗೆ ಇಂತಹ ಕಾರ್ಯಕ್ರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ ಎಂದರು. ಸಂಸ್ಥೆ ಕಾರ್ಯದರ್ಶಿ ತನ್ವೀರ್ ಉಲ್ಲಾ ಶರೀಫ್ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾವಂತರಾಗಿ ವಿನಯತೆ, ವಿವೇಕ ಜ್ಞಾನವನ್ನು ಬೆಳಸಿಕೊಂಡು ಸುಸಂಸ್ಕೃತ ಸಮಾಜವನ್ನು ನಿರ್ಮಾಣ ಮಾಡಬೇಕು. ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸುವ ಸಲುವಾಗಿ ಪ್ರತಿ ವರ್ಷ ವಸ್ತುಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಪರಿಶ್ರಮ, ಅಭ್ಯಾಸದಿಂದ ಗುರುಗಳ ಮಾರ್ಗದರ್ಶನದಲ್ಲಿ ನಡೆದು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕೆಂದರು. ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕರಾದ ಮಂಜುನಾಥ್, ಶ್ಯಾಮಸುಂದರ್, ಬಿಆರ್‌ಪಿ ದಕ್ಷಿಣಮೂರ್ತಿ, ಪ್ರಾಂಶುಪಾಲರಾದ ಜಹೇರಾಜಬೀನ್, ಮುಖ್ಯಶಿಕ್ಷಕ ಪರಮೇಶ್ವರಪ್ಪ, ಎಒ ಸುಮಾ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು.