ಪಠ್ಯೇತರ ಚಟುವಟಿಕೆ ವ್ಯಕ್ತಿತ್ವ ವಿಕಸನಕ್ಕೆ ಪೂರಕ

| Published : Aug 23 2025, 02:00 AM IST

ಪಠ್ಯೇತರ ಚಟುವಟಿಕೆ ವ್ಯಕ್ತಿತ್ವ ವಿಕಸನಕ್ಕೆ ಪೂರಕ
Share this Article
  • FB
  • TW
  • Linkdin
  • Email

ಸಾರಾಂಶ

ಚನ್ನಪಟ್ಟಣ: ಶೈಕ್ಷಣಿಕ ಕ್ಷೇತ್ರದಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಮಹತ್ವದ ಸ್ಥಾನವಿದೆ. ಅದರಲ್ಲೂ ಸಾಂಸ್ಕೃತಿಕ ಸೌರಭ ಕಾರ್ಯಕ್ರಮಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ವಿಶಿಷ್ಟ ಪಾತ್ರ ವಹಿಸುತ್ತಿವೆ ಎಂದು ಸಮಾಜ ಸೇವಕ ಎಚ್.ಎಂ.ನಾಗೇಶ್ ತಿಳಿಸಿದರು.

ಚನ್ನಪಟ್ಟಣ: ಶೈಕ್ಷಣಿಕ ಕ್ಷೇತ್ರದಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಮಹತ್ವದ ಸ್ಥಾನವಿದೆ. ಅದರಲ್ಲೂ ಸಾಂಸ್ಕೃತಿಕ ಸೌರಭ ಕಾರ್ಯಕ್ರಮಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ವಿಶಿಷ್ಟ ಪಾತ್ರ ವಹಿಸುತ್ತಿವೆ ಎಂದು ಸಮಾಜ ಸೇವಕ ಎಚ್.ಎಂ.ನಾಗೇಶ್ ತಿಳಿಸಿದರು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾಡಳಿತ ತಾಲೂಕಿನ ಬೇವೂರು ಮಂಡ್ಯದ ಶ್ರೀ ಯೋಗಾನರಸಿಂಹ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸಂಸ್ಕೃತಿ ಸೌರಭ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕಲೆ, ಸಂಸ್ಕೃತಿ, ನೃತ್ಯ, ಗಾನ, ನಾಟಕ, ಕಾವ್ಯ ಮುಂತಾದ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಹೊರಹೊಮ್ಮಿಸುವುದರ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನೂ ಅರಿತುಕೊಳ್ಳಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಕೆ.ಸತೀಶ್ ಮಾತನಾಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಬೆಳವಣಿಗೆಗೆ ಸಹಕಾರಿ. ಸಮಾಜದ ಸಮಸ್ಯೆಗಳ ಅರಿವು ಮೂಡಿಸುವ ಜೊತೆಗೆ, ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಹೆಮ್ಮೆ ಬೆಳೆಸಿ, ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ಸಹಕಾರಿಯಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಯೋಗ ನರಸಿಂಹ ಸ್ವಾಮಿ ಪ್ರೌಢಶಾಲೆಯ ಕಾರ್ಯದರ್ಶಿ ತಿಮ್ಮರಾಯಿಗೌಡ, ಸಹ ಕಾರ್ಯದರ್ಶಿ ಗಂಗರಾಜು, ಎಂ.ಬಿ.ಹಳ್ಳಿ ಗ್ರಾಪಂ ಅಧ್ಯಕ್ಷ ರವಿ, ಉದ್ಯಮಿ ಜಗದೀಶ್, ಕರವೇ ಸಾಗರ್, ಕಲಾಪೋಷಕ ಶಂಭೂಗೌಡ, ಉಪನ್ಯಾಸಕ ಬಿ.ಪಿ.ಸುರೇಶ್, ಮುಖ್ಯ ಶಿಕ್ಷಕ ಚಿಕ್ಕ ತಿಮ್ಮಶೆಟ್ಟಿ ಇತರರು ಉಪಸ್ಥಿತರಿದ್ದರು.

ಇದೇ ವೇಳೆ ಮರಿಗೌಡ ಚಾರಿಟಬಲ್ ಟ್ರಸ್ಟ್‌ನಿಂದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್‌, ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ರಾಷ್ಟ್ರೀಯ ಮಟ್ಟದ ಪ್ರದೇಶದ ಕಲಾ ಸಂಯೋಜಕ ಡೋಳ್ ಚಂದ್ರು ನೇತೃತ್ವದಲ್ಲಿ ಯಕ್ಷಗಾನ,ಸಮೂಹ ನೃತ್ಯ, ವೀರಗಾಸೆ, ತಮಟೆ ವಾದನ ಮುಂತಾದ ಆಕರ್ಷಕ ಕಲಾತಂಡಗಳು ಪ್ರದರ್ಶನ ನಡೆಯಿತು.

ಪೊಟೋ೨೨ಸಿಪಿಟಿ೧:

ಚನ್ನಪಟ್ಟಣ ತಾಲೂಕಿನ ಬೇವೂರು ಮಂಡ್ಯದ ಶ್ರೀ ಯೋಗಾನರಸಿಂಹ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸಂಸ್ಕೃತಿ ಸೌರಭ ಕಾರ್ಯಕ್ರಮದಲ್ಲಿ ಭಾಗಿಯಾದ ವಿದ್ಯಾರ್ಥಿಗಳಿಗೆ ಪ್ರಸಂಶನಾ ಪತ್ರ ವಿತರಿಸಲಾಯಿತು.