ಶಿರಾದಲ್ಲಿ ವಿಜೃಂಭಣೆಯ ಮಹೋತ್ಸವ

| Published : Jan 11 2025, 12:47 AM IST

ಸಾರಾಂಶ

ವೈಕುಂಠ ಏಕಾದಶಿ ಪ್ರಯುಕ್ತ ಶಿರಾ ನಗರ ಸೇರಿದಂತೆ ತಾಲೂಕಿನಾದ್ಯಂತ ವಿಜೃಂಭಣೆಯಿಂದ ಪೂಜೆ ಸಲ್ಲಿಸಲಾಯಿತು. ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರನ್ನು ವೀಕ್ಷಿಸಿ ಪೂಜೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಶಿರಾ ವೈಕುಂಠ ಏಕಾದಶಿ ಪ್ರಯುಕ್ತ ಶಿರಾ ನಗರ ಸೇರಿದಂತೆ ತಾಲೂಕಿನಾದ್ಯಂತ ವಿಜೃಂಭಣೆಯಿಂದ ಪೂಜೆ ಸಲ್ಲಿಸಲಾಯಿತು. ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರನ್ನು ವೀಕ್ಷಿಸಿ ಪೂಜೆ ಸಲ್ಲಿಸಿದರು. ನಗರದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ, ಶ್ರೀ ಬಾಲಾಜಿ ದೇವಸ್ಥಾನ, ಶ್ರೀ ಪಾಂಡುರಂಗ ರುಕ್ಮಿಣಿ ದೇವಸ್ಥಾನ, ಶ್ರೀ ವಿದ್ಯಾಗಣಪತಿ ದೇವಸ್ಥಾನ, ತಾಲೂಕಿನ ರತ್ನಸಂದ್ರ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ, ಮರಡಿ ಗುಡ್ಡದ ಶ್ರೀ ಮರಡಿ ರಂಗನಾಥ ಸ್ವಾಮಿ ದೇವಸ್ಥಾನ, ತಾವರೆಕೆರೆ ಶ್ರೀ ಬಂಡೀ ರಂಗನಾಥ ಸ್ವಾಮಿ ದೇವಸ್ಥಾನ, ಬುಕ್ಕಾಪಟ್ಟಣ ಪೇಟೆ ಬೀದಿ ತಿಮ್ಮಪ್ಪ ಸ್ವಾಮಿ ದೇವಸ್ಥಾನ, ಮಾಗೋಡು ಶ್ರೀ ಕಂಬದ ರಂಗನಾಥ ಸ್ವಾಮಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ರಾತ್ರಿವರೆಗೂ ಪೂಜಾ ಕೈಂಕರ್ಯಗಳು, ಭಜನೆ, ಪ್ರಸಾದ ಮಿನಿಯೋಗ ನಡೆಯಿತು. ಪೂಜಾ ಕಾರ್ಯದಲ್ಲಿ ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ, ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ, ರಾಜ್ಯ ಜೆಡಿಎಸ್ ಪರಿಷತ್ ಸದಸ್ಯ ಆರ್.ಉಗ್ರೇಶ್, ನಗರಸಭಾ ಸದಸ್ಯ ಆರ್.ರಾಮು ಸೇರಿದಂತೆ ಹಲವರು ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.