ಸಾರಾಂಶ
ಪಾವಗಡ : ಗ್ರಾಮೀಣ ಭಾಗದ ಕಟ್ಟಕಡೆಯ ವ್ಯಕ್ತಿಗೂ ಕಲ್ಪಿಸಿಕೊಡುವ ಉದ್ದೇಶದಿಂದ ಗ್ರಾಮೀಣ ಭಾಗದಲ್ಲಿ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣೆ ಶಿಬಿರಗಳನ್ನು ನಡೆಸಲಾಗುತ್ತಿದೆ ಎಂದು ಭಾರತೀಯ ಸ್ಚೇಟ್ ಬ್ಯಾಂಕ್ ವ್ಯವಸ್ಥಾಪಕರಾದ ಕೆ.ಚಂದ್ರಶೇಖರ್ ಕರೆ ನೀಡಿದರು.

ಇಲ್ಲಿನ ಸೇವಾ ಟ್ರಸ್ಟ್, ಹೆಲ್ಪ್ ಸೊಸೈಟಿ ಹಾಗೂ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಇವರ ಸಹಯೋಗದಲ್ಲಿ ಬುಧವಾರ ಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣೆ ಶಿಬಿರದ ಉದ್ಘಾಟನೆ ನೆರೆವೇರಿಸಿ ಮಾತನಾಡಿದರು. ಮಕ್ಕಳು ಹೆಚ್ಚಾಗಿ ಟಿವಿ ಹಾಗೂ ಮೊಬೈಲ್ ಬಳಕೆಯಿಂದ ಕಣ್ಣಿನ ದೃಷ್ಟಿ ಅಪಾಯದ ಅಂಚಿಗೆ ತಲುಪುತ್ತಿದೆ. ಗ್ರಾಮೀಣ ಭಾಗದ ಜನರು ರೋಗಗಳ ಬಗ್ಗೆ ಅರಿವಿಲ್ಲದೆ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ನಿರ್ಲಕ್ಷ್ಯ ತೋರುತ್ತಿದ್ದು, ಇದು ಯುವ ಪೀಳಿಗೆಯ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದ ಅವರು ಈ ಶಿಬಿರದಲ್ಲಿ 180 ರೋಗಿಗಳಿಗೆ ತಪಾಸಣೆ ನಡೆಸಿದ್ದು, 65 ರೋಗಿಗಳು ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾಗಿದ್ದಾರೆ ಎಂದು ಮಾಹಿತಿ ನೀಡಿದರು. ಶಿಬಿರದ ಪ್ರಯೋಜಕರಾದ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಸೇವಾ ಟ್ರಸ್ಟ್ ನಿರ್ದೇಶಕಿ ಸಂದ್ಯಾ, ನಿರ್ದೇಶಕರಾದ ನರಸಿಂಹಮೂರ್ತಿ, ನರೇಶ್, ಎಸ್ ಬಿ ಐ ಬ್ಯಾಂಕಿನ ನಾಗಲಕ್ಷ್ಮಮ್ಮ, ರಘುಪತಿ ನಾಯ್ಡು, ನಾಗರಾಜ್, ಮಾನಂ ಗೌತಮ್, ಭವ್ಯ, ಶಶಿಕಲಾ, ಶಂಕರ್ ಕಣ್ಣಿನ ಆಸ್ಪತ್ರೆಯ ನೇತ್ರಾಧಿಕಾರಿ ಪವಿತ್ರ, ವೈದ್ಯರಾದ ನಿಕಿತಾ, ಅರುಣ್ ಕುಮಾರ್, ಹರೀಶ್, ರಮೇಶ್, ಮಂಜುನಾಥ್, ಕೃಷ್ಟಪ್ಪ, ಓಂಕಾರ್, ಗುರುನಾಥ್ ಇತರರಿದ್ದರು.