ದೇಶದ ಪ್ರಥಮ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮ ದಿನಾಚರಣೆಯನ್ನು ಇಲ್ಲಿನ ಜೈ ಜವಾನ್ ಮಾಜಿ ಸೈನಿಕರ ಸಂಘದ ವತಿಯಿಂದ ಆಚರಿಸಲಾಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ದೇಶದ ಪ್ರಥಮ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮ ದಿನಾಚರಣೆಯನ್ನು ಇಲ್ಲಿನ ಜೈ ಜವಾನ್ ಮಾಜಿ ಸೈನಿಕರ ಸಂಘದ ವತಿಯಿಂದ ಆಚರಿಸಲಾಯಿತು.ಸಂಘದ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಸಂಘದ ಅಧ್ಯಕ್ಷ ಈರಪ್ಪ ಅವರು ಮಾತನಾಡಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ದೇಶಪ್ರೇಮ, ಧೈರ್ಯ ಸದಾ ಸ್ಮರಣೀಯ. ಅಂತಹ ಮಹಾನ್ ನಾಯಕರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಅಭಿಪ್ರಾಯಿಸಿದರು.ಈ ಸಂದರ್ಭ ಸಂಘದ ಉಪಾಧ್ಯಕ್ಷ ಸುಬ್ರಮಣಿ, ಕಾರ್ಯದರ್ಶಿ ಆರ್.ಜಿ. ಬಸಪ್ಪ, ಖಜಾಂಚಿ ಎನ್.ಜಿ. ಕೆಂಪಯ್ಯ, ವೀರಪ್ಪ, ಪೂವಯ್ಯ, ಪ್ರಮುಖರಾದ ಎಂ.ಬಿ. ಉಮೇಶ್, ಭಾಸ್ಕರ್, ಮೋಹಿನಿ ಸೇರಿದಂತೆ ಇತರರು ಇದ್ದರು.