ವಚನ ಸಾಹಿತ್ಯದ ಬೆಳವಣಿಗೆಗೆ ಫ.ಗು.ಹಳಕಟ್ಟಿ ಬುನಾದಿ: ಮುಲ್ಲಂಗಿ ನಂದೀಶ್

| Published : Jul 03 2024, 12:15 AM IST

ವಚನ ಸಾಹಿತ್ಯದ ಬೆಳವಣಿಗೆಗೆ ಫ.ಗು.ಹಳಕಟ್ಟಿ ಬುನಾದಿ: ಮುಲ್ಲಂಗಿ ನಂದೀಶ್
Share this Article
  • FB
  • TW
  • Linkdin
  • Email

ಸಾರಾಂಶ

ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ, ಮೇಯರ್ ಮುಲ್ಲಂಗಿ ನಂದೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ

ಕನ್ನಡಪ್ರಭ ವಾರ್ತೆ ಬಳ್ಳಾರಿ

ಡಾ. ಫ.ಗು. ಹಳಕಟ್ಟಿಯವರು ಕನ್ನಡ ವಚನ ಸಾಹಿತ್ಯದ ಬೆಳವಣಿಗೆಗೆ ಬುನಾದಿ ಹಾಕಿದ ಮಹನೀಯರು ಎಂದು ಮೇಯರ್ ಮುಲ್ಲಂಗಿ ನಂದೀಶ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಗರದ ಡಾ. ರಾಜ್‍ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಏರ್ಪಡಿಸಿದ್ದ ಡಾ. ಫ. ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿಶೇಷ ಉಪನ್ಯಾಸ ನೀಡಿದ ರಾಷ್ಟ್ರೀಯ ಬಸವ ದಳದ ಕಾರ್ಯದರ್ಶಿ ಜಿ.ಆರ್. ನಾಗರಾಜ ಅವರು ಡಾ. ಫ.ಗು. ಹಳಕಟ್ಟಿಯವರು ವಚನ ಸಾಹಿತ್ಯದ ಮಹಾನ್ ವಚನಕಾರರಲ್ಲಿ ಒಬ್ಬರಾಗಿದ್ದು, ಅವರ ವಚನಗಳು ಕನ್ನಡ ಸಾಹಿತ್ಯ ಬೆಳೆವಣಿಗೆಗೆ ಸಹಕಾರಿಯಾಗಿವೆ ಎಂದು ತಿಳಿಸಿದರು.

12 ಶತಮಾನದ ವಚನ ಯುಗದಲ್ಲಿ ಬಿಡಿ-ಬಿಡಿಯಾಗಿದ್ದ ವಚನ ಸಾಹಿತ್ಯವನ್ನು ಒಗ್ಗೂಡಿಸಿ, ಕನ್ನಡ ವಚನ ಸಾಹಿತ್ಯ ರಕ್ಷಣೆ ಮಾಡುವುದರಲ್ಲಿ ಅವರ ಪಾತ್ರ ಬಹುಮುಖ್ಯವಾಗಿದೆ ಎಂದರು.

ಡಾ. ಫ.ಗು. ಹಳಕಟ್ಟಿಯವರು ಕನ್ನಡ ವಚನ ಸಾಹಿತ್ಯ ಕುರಿತು ಅಪಾರ ಪ್ರೇಮ ಬೆಳೆಸಿಕೊಂಡು ವಿದ್ಯಾಸಂಸ್ಥೆ ಹುಟ್ಟುಹಾಕಿ ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದರು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದ ಬಿ. ಚಿದಾನಂದ ತಂಡದಿಂದ ವಚನ ಸಂಗೀತ ನಡೆಯಿತು.

ಈ ವೇಳೆ ಮಹಾನಗರ ಪಾಲಿಕೆಯ ಉಪಮೇಯರ್ ಡಿ. ಸುಖುಂ, ಜಿಲ್ಲಾಧಿಕಾರಿಗಳ ಕಚೇರಿಯ ತಹಸೀಲ್ದಾರರಾದ ಗೌಸಿಯಾ ಬೇಗಂ, ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣ ಪರಿವೀಕ್ಷಕರಾದ ವಸುದೇವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ ಸೇರಿದಂತೆ ಸಿಬ್ಬಂದಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.