ಇಲ್ಲಿನ ಯಕ್ಷಶಿಕ್ಷಣ ಟ್ರಸ್ಟ್ ಕಳೆದ ತಿಂಗಳು ಯಕ್ಷ ಶಿಕ್ಷಣದ ವಿದ್ಯಾರ್ಥಿಗಳಿಗೆ ಒಂದು ವಾರದ ಸನಿವಾಸ ಶಿಬಿರ ಆಯೋಜಿಸಿತ್ತು. ಅದರಲ್ಲಿ 103 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಉಡುಪಿ: ಇಲ್ಲಿನ ಯಕ್ಷಶಿಕ್ಷಣ ಟ್ರಸ್ಟ್ ಕಳೆದ ತಿಂಗಳು ಯಕ್ಷ ಶಿಕ್ಷಣದ ವಿದ್ಯಾರ್ಥಿಗಳಿಗೆ ಒಂದು ವಾರದ ಸನಿವಾಸ ಶಿಬಿರ ಆಯೋಜಿಸಿತ್ತು. ಅದರಲ್ಲಿ 103 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅವರಲ್ಲಿ ಆಸಕ್ತ 35 ವಿದ್ಯಾರ್ಥಿಗಳಿಗೆ ಮೇ 11ರಿಂದ 14 ವರೆಗೆ ನಡೆಸಲಿರುವ ನಾಲ್ಕು ದಿನಗಳ ಮುಖವರ್ಣಿಕೆ ವೇಷಭೂಷಣ ಶಿಬಿರವನ್ನು ಪೇಜಾವರ ಮಠದ ವಿಷ್ಣುಮೂರ್ತಿ ಆಚಾರ್ಯರು ಸೋಮವಾರ ಉದ್ಘಾಟಿಸಿದರು.

ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ಸಂಯೋಜಿಸಿದ್ದರು. ನಾರಾಯಣ ಎಂ. ಹೆಗಡೆ, ಪ್ರಸಾಧನ ತಜ್ಞ ಮಿಥುನ್ ನಾಯಕ್ ಉಪಸ್ಥಿತರಿದ್ದರು. ಯಕ್ಷಗಾನ ಕಲಾರಂಗದ ಕಟ್ಟಡದಲ್ಲಿ ನಡೆಯುತ್ತಿರುವ ಶಿಬಿರಕ್ಕೆ ಗುರು ಬನ್ನಂಜೆ ಸಂಜೀವ ಸುವರ್ಣರು ಭೇಟಿ ನೀಡಿ ಮಕ್ಕಳಿಗೆ ಮಾರ್ಗದರ್ಶನ ನೀಡಿದರು.