ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ

| Published : Jun 06 2024, 12:33 AM IST

ಸಾರಾಂಶ

ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ಸಾಮಾಜಿಕವಾಗಿ ಸಹಾಯ ಮಾಡಲು ಮುಂದಾಗಬೇಕು ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವು ಚಂಗಾವರ ಹೇಳಿದರು.

ಶಿರಾ: ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ಸಾಮಾಜಿಕವಾಗಿ ಸಹಾಯ ಮಾಡಲು ಮುಂದಾಗಬೇಕು ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವು ಚಂಗಾವರ ಹೇಳಿದರು. ತಾಲೂಕಿನ ಚಂಗಾವರ ಸರ್ಕಾರಿ ಪ್ರಾಥಮಿಕ ಶಾಲೆ 120 ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಪೆನ್‌ ವಿತರಿಸಿ ಮಾತನಾಡಿದರು. ವಿದ್ಯೆ ಕಲಿತ ಶಾಲೆ, ಜನ್ಮ ಕೊಟ್ಟ ತಂದೆ, ತಾಯಿಯನ್ನು ಯಾವತ್ತೂ ಮರೆಯಬಾರದು ಎಂದರು. ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿನಿ ಕಾವ್ಯಶ್ರೀಗೆ ಪುರಸ್ಕಾರ, ಬಡ ರೋಗಿಗಳಿಗೆ ಹಣ್ಣು, ಹಂಪಲು ವಿತರಿಸಿದರು. ಗ್ರಾಪಂ ಮಾಜಿ ಸದಸ್ಯ ದೊಡ್ಡಯ್ಯ, ಮುಖಂಡ ರಮೇಶ್, ದಿನೇಶ್, ವೆಂಕಟಲಕ್ಷ್ಮೀ, ಕೃಷ್ಣಮೂರ್ತಿ, ಮಂಜುಳಾ, ಪವಿತ್ರ, ಸಾವಿತ್ರಮ್ಮ ಹಾಜರಿದ್ದರು.