ಸಾರಾಂಶ
ಲೋಕಸಭಾ ಸಾರ್ವತ್ರಿಕ ಚುನಾವಣಾ ಹಿನ್ನಲೆಯಲ್ಲಿ ತಾಲೂಕಿನ ಮತಗಟ್ಟೆಗಳಿಗೆ ಬೇಕಾಗುವ ಮೂಲ ಸೌಕರ್ಯಗಳನ್ನು ಆದಷ್ಟು ಬೇಗನೆ ಕಲ್ಪಿಸಬೇಕು ಎಂದು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಅವರು ಹೇಳಿದರು.
ಕನ್ನಡಪ್ರಭ ವಾರ್ತೆ ಅಫಜಲ್ಪುರ
ಲೋಕಸಭಾ ಸಾರ್ವತ್ರಿಕ ಚುನಾವಣಾ ಹಿನ್ನಲೆಯಲ್ಲಿ ತಾಲೂಕಿನ ಮತಗಟ್ಟೆಗಳಿಗೆ ಬೇಕಾಗುವ ಮೂಲ ಸೌಕರ್ಯಗಳನ್ನು ಆದಷ್ಟು ಬೇಗನೆ ಕಲ್ಪಿಸಬೇಕು ಎಂದು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಅವರು ಹೇಳಿದರು.ಅವರು ತಾಲೂಕಿನ ಮಣ್ಣೂರ ರಾಮನಗರ ಉಡಚಣ ಕರಜಗಿ ಸೇರಿದಂತೆ ವಿವಿಧ ಗ್ರಾಮ ಪಂಚಾಯ್ತಿ ಮತಗಟ್ಟೆಗಳಿಗೆ ಭೇಟಿ ನೀಡಿ ಮಾತನಾಡಿ, ಮತಗಟ್ಟೆಯಲ್ಲಿ ಮತದಾರರಿಗೆ ಸುಗಮ ಮತದಾನಕ್ಕೆ ಅಗತ್ಯವಿರುವ ಎಲ್ಲಾ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕು ಮತಗಟ್ಟೆಗಳಲ್ಲಿ ಮತದಾರರಿಗೆ ರ್‍ಯಾಂಪ್ ವ್ಯವಸ್ಥೆ, ಗ್ರಿಲ್ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ, ನೆರಳಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ವಿಕಲ ಚೇತನ ಮತದಾರರಿಗೆ ವೀಲ್ ಚೇರ್ ವ್ಯವಸ್ಥೆ, ವಿದ್ಯುತ್ ಸಂಪರ್ಕ ಫ್ಯಾನ್ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳನ್ನು ಆದಷ್ಟು ಬೇಗನೆ ಕಲ್ಪಿಸಬೇಕು. ಮತಗಟ್ಟೆಯಲ್ಲಿ ಮತದಾರರಿಗೆ ಯಾವುದೇ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಎಚ್ಚರ ವಹಿಸಬೇಕು ಎಂದು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ರಮೇಶ ಪಾಟೀಲ, ಅಭಿವೃದ್ಧಿ ಅಧಿಕಾರಿಗಳಾದ ಮೇಘಾ ಕಲಶೆಟ್ಟಿ, ಮಹಾಂತೇಶ ಯಾಡಗಿ, ಚಂದ್ರಶೇಖರ ಕುಂಬಾರ ಸೇರಿದಂತೆ ಇತರರಿದ್ದರು.