ಸಾರಾಂಶ
ಮಕ್ಕಳ ಬಾಲ್ಯ ಕಟ್ಟುವ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ದಾನಿಗಳಾದ ಉದ್ಯಮಿ ತಾಕೇರಿ ಪದ್ಮನಾಭ ಅವರನ್ನು ಸನ್ಮಾನಿಸಲಾಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಇಲ್ಲಿನ ನಾವು ಪ್ರತಿಷ್ಠಾನ ಸಂಸ್ಥೆಯ ವತಿಯಿಂದ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಮಕ್ಕಳ ಬಾಲ್ಯ ಕಟ್ಟುವ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ದಾನಿಗಳಾದ ಉದ್ಯಮಿ ತಾಕೇರಿ ಪದ್ಮನಾಭ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭ ನಾವು ಪ್ರತಿಷ್ಠಾನದ ಕಾರ್ಯಕಾರಿ ನಿರ್ದೇಶಕರಾದ ಸುಮನ ಮ್ಯಾಥ್ಯು, ಸಂಸ್ಥಾಪಕ ಗೌತಮ್ ಕಿರಗಂದೂರು, ಮಕ್ಕಳ ಹಕ್ಕುಗಳ ಕಾರ್ಯಕರ್ತರಾದ ಪಿ.ಬಿ. ಪೊನ್ನಪ್ಪ, ಎಂ.ಜೆ. ಪ್ರಜ್ವಲ್, ರವಿಚಂದ್ರ, ಬಿ.ಕೆ.ಕುಮಾರಿ, ಶಶಿಕುಮಾರ್, ಕಾರ್ತಿಕ್ ಒದ್ದಳ್ಳಿ ಇದ್ದರು.