ಸಾರಾಂಶ
ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿಗೆ ಕಾಲೇಜಿನ ಆಂತರಿಕ ಗುಣಮಟ್ಟಕೋಶದ (ಐ.ಕ್ಯೂ.ಎ.ಸಿ.) ವತಿಯಿಂದ ಒಂದು ದಿನದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮವನ್ನು (ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್) ಆಯೋಜಿಸಲಾಗಿತ್ತು.
ಕನ್ನಡಪ್ರಭ ವಾರ್ತೆ ಉಡುಪಿ
ಇಲ್ಲಿನ ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿಗೆ ಕಾಲೇಜಿನ ಆಂತರಿಕ ಗುಣಮಟ್ಟಕೋಶದ (ಐ.ಕ್ಯೂ.ಎ.ಸಿ.) ವತಿಯಿಂದ ಒಂದು ದಿನದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮವನ್ನು (ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್) ಆಯೋಜಿಸಲಾಗಿತ್ತು.ಉಡುಪಿಯ ಖ್ಯಾತ ವಕೀಲ ರಾಯನ್ ಫೆರ್ನಾಂಡಿಸ್ ಕಾರ್ಯಕ್ರಮ ಉದ್ಘಾಟಿಸಿ ಮಾನವನ ಬೌದ್ಧಿಕ ಆಸ್ತಿ ಹಕ್ಕುಗಳ (ಇಂಟೆಲೆಕ್ಟುವಲ್ ಪ್ರಾಪರ್ಟಿ ರೈಟ್ಸ್ ) ಬಗ್ಗೆ ಉಪನ್ಯಾಸ ನೀಡಿದರು. ಎರಡನೆಯ ಅಧಿವೇಶನದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಸುಮುಖ್ ಹುನಗುಂದ್ ಅವರು ಅಧ್ಯಾಪಕರಿಗೆ ಸಂಶೋಧನಾ ಲೇಖನಗಳನ್ನು ಬರೆಯುವ ವಿಷಯದಲ್ಲಿ ಉಪನ್ಯಾಸ ನೀಡಿ ಮಾರ್ಗದರ್ಶನ ಮಾಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ್ ಪ್ರಸಾದ್ ಕೆ. ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಐ. ಕ್ಯೂ. ಎ. ಸಿ. ಸಂಚಾಲಕ ಪ್ರೊ. ಶ್ರೀಮತಿ ಅಡಿಗ ಸ್ವಾಗತಿಸಿದರು.ಕಾಲೇಜಿನ ಹಿರಿಯ ಉಪನ್ಯಾಸಕಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಗೌರಿ ಎಸ್. ಭಟ್, ಐ.ಕ್ಯೂ.ಎ.ಸಿ. ಸಹ ಸಂಚಾಲಕ ಡಾ. ಉಮೇಶ್ ಮಯ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಂತಿಮ ಬಿ.ಕಾಂ.ನ ಶ್ರೀಪ್ರದಾ ಮತ್ತು ತಂಡ ಪ್ರಾರ್ಥಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಮನೋಜ್ ಹಾಗೂ ಆಂಗ್ಲ ಭಾಷಾ ಉಪನ್ಯಾಸಕಿ ರತ್ನ ಅತಿಥಿಗಳನ್ನು ಪರಿಚಯಿಸಿದರು. ಗ್ರಂಥಪಾಲಕ ಡಾ. ವೆಂಕಟೇಶ್ ಧನ್ಯವಾದ ಸಮರ್ಪಿಸಿದರು. ಅಂತಿಮ ಬಿ.ಬಿ.ಎ. ವಿದ್ಯಾರ್ಥಿನಿ ಶ್ರೀದೇವಿ ಮತ್ತು ಅಂತಿಮ ಗಣಿತಶಾಸ್ತ್ರ ಎಂಎಸ್ಸಿ ವಿದ್ಯಾರ್ಥಿನಿ ಚೈತ್ರ ಕಾರ್ಯಕ್ರಮ ನಿರ್ವಹಿಸಿದರು.