ಬ್ರೀಪ್ ಮಸ್ಟ್... ಇಂದು ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ
Author : KannadaprabhaNewsNetwork
Published : Apr 06 2026, 03:15 AM IST
ಬೆಳಗಾವಿಯ ಮಾನವ ಬಂಧುತ್ವ ವೇದಿಕೆಯ ಸಭಾಂಗಣದಲ್ಲಿ ಬಂಡಾಯ ಸಾಹಿತ್ಯ : ಹೊಸ ತಲೆಮಾರು ವಿಚಾರ ಸಂಕಿರಣದ ಪೂರ್ವಭಾವಿ ಸಭೆ ನಡೆಯಿತು. | Kannada Prabha
Image Credit: KP
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ವಿವಿಯ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಗಣಕ ಜೀವಶಾಸ್ತ್ರ ಮತ್ತು ಅಣು ಜೀವಶಾಸ್ತ್ರ ತಂತ್ರಗಳು ಕುರಿತ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ ಅನ್ನು ಏ.6ರಂದು ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಜೈವಿಕ ಮಾಹಿತಿ ವಿಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಭಾಗ ಮತ್ತು ಕರ್ನಾಟಕ ಸರ್ಕಾರದ ಪ್ರಾಯೋಜಿತ ವಿಜ್ಞಾನ ಹಾಗೂ ತಂತ್ರಜ್ಞಾನ ದೃಷ್ಟಿ ಸಮೂಹ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಮುಖ್ಯ ಅತಿಥಿಯಾಗಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅರುಣ ಇನಾಮದಾರ ಭಾಗವಹಿಸಲಿದ್ದಾರೆ. ಪ್ರೊ.ವಿಜಯಾ ಕೋರಿಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ವಿವಿಯ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಗಣಕ ಜೀವಶಾಸ್ತ್ರ ಮತ್ತು ಅಣು ಜೀವಶಾಸ್ತ್ರ ತಂತ್ರಗಳು ಕುರಿತ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ ಅನ್ನು ಏ.6ರಂದು ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಜೈವಿಕ ಮಾಹಿತಿ ವಿಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಭಾಗ ಮತ್ತು ಕರ್ನಾಟಕ ಸರ್ಕಾರದ ಪ್ರಾಯೋಜಿತ ವಿಜ್ಞಾನ ಹಾಗೂ ತಂತ್ರಜ್ಞಾನ ದೃಷ್ಟಿ ಸಮೂಹ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಮುಖ್ಯ ಅತಿಥಿಯಾಗಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅರುಣ ಇನಾಮದಾರ ಭಾಗವಹಿಸಲಿದ್ದಾರೆ. ಪ್ರೊ.ವಿಜಯಾ ಕೋರಿಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಗೌರವ ಅತಿಥಿಗಳಾಗಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣನವರ, ಆರ್ಥಿಕ ಅಧಿಕಾರಿ ರಾಮಣ್ಣ ಅಥಣಿ ಉಪಸ್ಥಿತರಿರಲಿದ್ದಾರೆ ಎಂದು ಕಾರ್ಯಕ್ರಮದ ಸಂಯೋಜಕ ಡಾ.ಬಾಬು.ಆರ್.ಎಲ್ ಹಾಗೂ ಡಾ.ಜಾಯ್ ಹೊಸಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.