ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಆಧುನಿಕ ತಂತ್ರಜ್ಞಾನಗಳ ಸಹಾಯದೊಂದಿಗೆ ಶಿಕ್ಷಣದಲ್ಲಿನ ಬದಲಾವಣೆ ಅರಿತು ಅದರಂತೆ ತಮ್ಮ ಕೌಶಲ್ಯಗಳನ್ನು ಹೆಚ್ಚಿಸಿಕೊಂಡು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಬೇಕು.
ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಆಧುನಿಕ ತಂತ್ರಜ್ಞಾನದಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗಳಾಗುತ್ತಿವೆ. ಇದಕ್ಕೆ ತಕ್ಕಂತೆ ಅಧ್ಯಾಪಕರು ತಮ್ಮ ಕೌಶಲ್ಯಗಳನ್ನು ರೂಪಿಸಿಕೊಳ್ಳಬೇಕು ಎಂದು ಮೈಸೂರು ಪ್ರಾದೇಶಿಕ ವಲಯದ ಜಂಟಿ ನಿರ್ದೇಶಕ ಪ್ರೊ.ಡಿ.ಎಸ್.ಪ್ರತಿಮಾ ಹೇಳಿದರು.ಭಾರತೀನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಐದು ದಿನಗಳ ಆನ್ ಲೈನ್ ಆಧಾರಿತ ನವೀನ ಬೋಧನಾ ವಿಧಾನ, ಕ್ಷೇಮ ಮತ್ತು ಸಬಲೀಕರಣ ಎಂಬ ವಿಷಯದ ಬಗ್ಗೆ ಅಧ್ಯಾಪಕ ವೃತ್ತಿ ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಆಧುನಿಕ ತಂತ್ರಜ್ಞಾನಗಳ ಸಹಾಯದೊಂದಿಗೆ ಶಿಕ್ಷಣದಲ್ಲಿನ ಬದಲಾವಣೆ ಅರಿತು ಅದರಂತೆ ತಮ್ಮ ಕೌಶಲ್ಯಗಳನ್ನು ಹೆಚ್ಚಿಸಿಕೊಂಡು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಬೇಕು ಎಂದರು.ಮಂಡ್ಯ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಶಿವ ಚಿತ್ತಪ್ಪ ಮಾತನಾಡಿ, ತಂತ್ರಜ್ಞಾನದಿಂದಾಗಿ ಆಗುತ್ತಿರುವ ಬದಲಾವಣೆಗಳಿಗೆ ವಿದ್ಯಾರ್ಥಿ ಸಮೂಹವು ಕೂಡ ಮೊರೆ ಹೋಗುತ್ತಿದ್ದು, ಅಧ್ಯಾಪಕರು ತಮ್ಮ ವೃತ್ತಿ ಬದುಕಿನಲ್ಲಿ ಆಧುನಿಕತೆಯ ಶೈಲಿಯನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸ ಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ರಾಜ್ಯದ ಅತ್ಯುತ್ತಮ ಸಂಸ್ಥೆಗಳ ಉಪನ್ಯಾಸಕರುಗಳು ಸಂಪನ್ಮೂಲ ವ್ಯಕ್ತಿಗಳು ಉಪನ್ಯಾಸ ನೀಡಿದರು. ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 322 ಮಂದಿ ಅಧ್ಯಾಪಕರು ನೋಂದಾಯಿಸಿಕೊಂಡು ಐದು ದಿನಗಳ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಈ ವೇಳೆ ಐಕ್ಯೂಎಸಿ ಸಂಚಾಲಕ ಡಾ ಪಾರ್ಥ ಸೇರಿದಂತೆ ಕಾಲೇಜಿನ ಉಪನ್ಯಾಸಕರುಗಳು ಹಾಜರಿದ್ದರು.ಸ್ಟಾನ್ಫೋರ್ಡ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳಿಂದ ಕ್ರೀಡೆಯಲ್ಲಿ ಸಾಧನೆ
ಪಾಂಡವಪುರ:ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ನಡೆದ 2026–27ನೇ ಸಾಲಿನ 14ರ ವಯೋಮಾನದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಕ್ಯಾತನಹಳ್ಳಿಯ ಸ್ಟಾನ್ ಪೋರ್ಡ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳು ವಿವಿಧ ಕ್ರೀಡಾ ವಿಭಾಗಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.ಬಾಲಕಿಯರ ವಿಭಾಗದಲ್ಲಿ ಥ್ರೋಬಾಲ್ ಹಾಗೂ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ, ಬಾಲಕರ ವಿಭಾಗದಲ್ಲಿ ಚಕ್ರ ಎಸೆತ ಹಾಗೂ 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಅಲ್ಲದೇ, ಥ್ರೋಬಾಲ್, ವಾಲಿಬಾಲ್, 100 ಮೀಟರ್, 600 ಮೀಟರ್ ಓಟ ಹಾಗೂ 4×100 ಮೀಟರ್ ರಿಲೇಯಲ್ಲಿ ದ್ವಿತೀಯ ಸ್ಥಾನ ಮತ್ತು ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆ ಕಾರ್ಯದರ್ಶಿ ಕೆ.ವಿ.ಚೇತನ್, ಆಡಳಿತಾಧಿಕಾರಿ ಜಗದೀಶ್ ಎಸ್., ಸಿಆರ್‌ಪಿ ನಾಗೇಶ್, ಮುಖ್ಯಶಿಕ್ಷಕಿ ಕವಿತಾ ಹಾಗೂ ಮೇಲ್ವಿಚಾರಕಿ ಸುಮಾ ಜೆ. ಅಭಿನಂದನೆ ಸಲ್ಲಿಸಿದ್ದಾರೆ.