ನಕಲಿ ಸಿಬಿಐ ಅಧಿಕಾರಿ ಬಂಧನ

| Published : Jul 31 2024, 01:05 AM IST

ಸಾರಾಂಶ

ಬೆಳಗಾವಿ: ನಿರುದ್ಯೋಗಿಗಳಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರುಪಾಯಿ ಪಡೆದು ಪಂಗನಾಮ ಹಾಕಿದ ಖತರನಾಕ್ ನಕಲಿ ಸಿಬಿಐ ಅಧಿಕಾರಿಯನ್ನು ಮಾಳಮಾರುತಿ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ನಿರುದ್ಯೋಗಿಗಳಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರುಪಾಯಿ ಪಡೆದು ಪಂಗನಾಮ ಹಾಕಿದ ಖತರನಾಕ್ ನಕಲಿ ಸಿಬಿಐ ಅಧಿಕಾರಿಯನ್ನು ಮಾಳಮಾರುತಿ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಹುಕ್ಕೇರಿ ತಾಲೂಕಿನ ಇಸ್ಲಾಂಪುರ ದಯಾನಂದ ರಾಮು ಜೀನ್ರಾಳ (34) ಬಂಧಿತ ಆರೋಪಿ. ಈತ ತರಬೇತಿ ಶಾಲೆ ತೆರೆದು ನಾನು ನಿರುದ್ಯೋಗಿಗಳಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಸಂದರ್ಭಕ್ಕೆ ತಕ್ಕಂತೆ ಸಿಬಿಐ, ಇಡಿ, ಐಟಿ ಅಧಿಕಾರಿ ಎಂದು ನಂಬಿಸಿ ಕೋಟ್ಯಂತರ ರು.ಪಂಗನಾಮ ಹಾಕಿದ್ದ. ನಂತರ ಈ ವಿಚಾರ ಅರಿತ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮಾಳಮಾರುತಿ ಸಿಪಿಐ ಜೆ.ಎಂ‌.ಕಾಲಿಮಿರ್ಚಿ ತಂಡಕ್ಕೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಹಾಗೂ ಡಿಸಿಪಿ ಸ್ನೇಹಾ ಪಿ.ವಿ.ಶ್ಲಾಘನೆಗೆ ವ್ಯಕ್ತಪಡಿಸಿದ್ದಾರೆ.