ಹುಷಾರ್ : ಅನಧಿಕೃತವಾಗಿ ನಡೆಯುತ್ತಿವೆ ನಕಲಿ ವೈದ್ಯರ ಕ್ಲಿನಿಕ್‌

| Published : May 11 2024, 01:34 AM IST / Updated: May 11 2024, 10:27 AM IST

ಹುಷಾರ್ : ಅನಧಿಕೃತವಾಗಿ ನಡೆಯುತ್ತಿವೆ ನಕಲಿ ವೈದ್ಯರ ಕ್ಲಿನಿಕ್‌
Share this Article
  • FB
  • TW
  • Linkdin
  • Email

ಸಾರಾಂಶ

ಯಾಡವಾಡ ಗ್ರಾಮಕ್ಕೆ ಆಗಮಿಸಿದ ಡಾ.ವಿಶ್ವನಾಥ ಭೋವಿ ಮತ್ತು ಜಿಲ್ಲಾ ಆಯುಷ್ಯ ಅಧಿಕಾರಿ ಶ್ರೀಕಾಂತ ಸುಣಧೋಳಿ ನೇತೃತ್ವದ ತಂಡ, ನಕಲಿ ವೈದ್ಯರ ಕ್ಲಿನಿಕ್ ಮೇಲೆ ದಾಳಿ ನಡೆಸಿ, ಬೀಗ ಹಾಕಿತು.

 ಮೂಡಲಗಿ : ತಾಲೂಕಿನ ಯಾದವಾಡ ಗ್ರಾಮದಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ನಾಲ್ಕು ನಕಲಿ ಕ್ಲಿನಿಕ್‌ಗಳಿಗೆ ಬೀಗ ಮುದ್ರೆ ಹಾಕಿ ಬಂದ್ ಮಾಡಿರುವ ಘಟನೆ ಗುರುವಾರ ನಡೆದಿದೆ.

ಯಾಡವಾಡ ಗ್ರಾಮಕ್ಕೆ ಆಗಮಿಸಿದ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಡಾ.ವಿಶ್ವನಾಥ ಭೋವಿ ಮತ್ತು ಜಿಲ್ಲಾ ಆಯುಷ್ಯ ಅಧಿಕಾರಿ ಶ್ರೀಕಾಂತ ಸುಣಧೋಳಿ ನೇತೃತ್ವದ ತಂಡ, ಖಾಸಗಿ ಆಸ್ಪತ್ರೆಗಳ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲನೆ ನಡೆಸಿ ಕೆಲವು ಆಸ್ಪತ್ರೆಗಳಲ್ಲಿ ಕೆಲವು ನೂನ್ಯತೆಗಳು ಕಂಡು ಬಂದಿರುವ ಹಿನ್ನೆಲೆ ಜಿಲ್ಲಾ ಕಚೇರಿಗೆ ವರದಿ ಸಲ್ಲಿಸುವಂತೆ ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ವಿಶ್ವನಾಥ ಭೋವಿ ಮಾತನಾಡಿ, ಯಾದವಾಡ ಗ್ರಾಮದಲ್ಲಿ ನಕಲಿ ವೈದ್ಯರ ಹಾವಳಿ ಬಗ್ಗೆ ಸಾಕಷ್ಟು ದೂರು ಬಂದ ಹಿನ್ನೆಲೆ ಖಾಸಗಿ ಆಸ್ಪತ್ರೆಗಳ ದಾಖಲಾತಿ ಪರಿಶೀಲನೆ ನಡೆಸಿ, ಕೆಲವು ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ. ಇನ್ನೂ ನಕಲಿ ವೈದ್ಯರ ಕ್ಲಿನಿಕ್‌ಗಳಲ್ಲಿ ದಾಖಲಾತಿ ಪರಿಶೀಲನೆ ನಡೆಸಿದ ವೇಳೆ ವೈದ್ಯಕೀಯ ಶಿಕ್ಷಣದ ದಾಖಲಾತಿ ಮತ್ತು ಯಾವುದೇ ತರನಾದ ನೋಂದಣಿ ಇಲ್ಲದೇ ಅನಧಿಕೃತವಾಗಿ ನಡೆಸುತ್ತಿರುವುದು ತಿಳಿದು ಬಂದಿದ್ದು, ಹಾಗಾಗಿ ನಾಲ್ಕು ಕ್ಲಿನಿಕ್‌ಗಳಿಗೆ ಬೀಗ ಹಾಕಲಾಗಿದೆ. ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸಿಜ್ ಮಾಡಿರುವ ಕ್ಲಿನಿಕ್‌ಗಳ ಬಗ್ಗೆ ವರದಿ ಸಲ್ಲಿಸಿ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ಸೂಕ್ತಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.